ಕಡೂರು: (ನ್ಯೂಸ್ ಮಲ್ನಾಡ್ ವರದಿ) ಪಟ್ಟಣದ ಮೆಸ್ಕಾಂ ಕಚೇರಿಯಲ್ಲಿ 3 ಪ್ರಿಂಟರ್ ಕಳವು ಮಾಡಿದ್ದ ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸಿ ವಿವಿಧೆಡೆ ಕಳವು ಮಾಡಿದ್ದ ಪ್ರಿಂಟರ್ ಅನ್ನು ವಶಪಡಿಸಿಕೊಳ್ಳಲಾಗಿದೆ.
ಇದನ್ನೂ ಓದಿ: SSLC ಪಾಸ್ ಆದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ತಿಂಗಳಿಗೆ ಸಿಗಲಿದೆ 3,500 ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ

ಆರೋಪಿಗಳು ತುಮಕೂರು, ಹಾಸನ, ಮಂಡ್ಯ ಸೇರಿದಂತೆ ಚಿಕ್ಕಮಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿರುವ ಸರ್ಕಾರಿ ಕಚೇರಿ, ಮೆಸ್ಕಾಂ ಮತ್ತು ಬೆಸ್ಕಾಂ ಕಛೇರಿ, ನ್ಯಾಯಾಲಯ ಮತ್ತು ಕಾಲೇಜುಗಳಿಂದ ಪ್ರಿಂಟರ್ ಗಳನ್ನು ಕಳವು ಮಾಡಿದ್ದು, ಸುಮಾರು 6.22 ಲಕ್ಷ ಬೆಲೆಯ 79 ಪ್ರಿಂಟರ್ ಗಳನ್ನು ವಶಪಡಿಸಿಕೊಂಡಿದ್ದಾರೆ.

ಈ ತಂಡದಲ್ಲಿ ಸಿಪಿಐ ಕಡೂರು ದುರುಗಪ್ಪ ಕೆ, ಪಿ.ಎಸ್.ಐ ನವೀನ್ ಎನ್. ಪಿ ಮತ್ತು ಪವನ್ ಕುಮಾರ್ ಸಿ . ಸಿ, ಸಿಬ್ಬಂದಿಗಳಾದ ಮಂಜುನಾಥಸ್ವಾಮಿ, ಕುಚೇಲ, ಸ್ವಾಮಿ, ದೇವರಾಜ್, ಬೀರೇಶ, ಮಧು, ಹರೀಶ, ಮಹಮ್ಮದ್ ರಿಯಾಜ್, ಈಶ್ವರಪ್ಪ, ಕಿಶೋರ್, ರವಿ ಕುಮಾರ್, ಧನಪಾಲನನಾಯ್ಕ ಮತ್ತು ಜಯಮ್ಮ ಇದ್ದರು.
ಇದನ್ನೂ ಓದಿ: ದ್ವಿತೀಯ ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ ತಿಂಗಳಿಗೆ ಸಿಗಲಿದೆ 6000 ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
ಕಡೂರು: ಮಹಾಮಾರಿ ಡೆಂಗ್ಯೂಗೆ ಆರು ವರ್ಷದ ಬಾಲಕಿ ಬಲಿ
ಕಡೂರು: (ನ್ಯೂಸ್ ಮಲ್ನಾಡ್ ವರದಿ) ಡೆಂಗ್ಯೂ ಜ್ವರಕ್ಕೆ ಆರು ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ನಡೆದಿದೆ. ಸಾನಿಯಾ (6) ಮೃತ ಬಾಲಕಿ.
ರಾಜ್ಯ ಸರ್ಕಾರದ ವಿರುದ್ಧ ಮೃತ ಬಾಲಕಿ ತಂದೆ ಬೇಸರ:
ಮಗಳ ಮೃತ ದೇಹದ ಮುಂದೆ ನಿಂತು ರಾಜ್ಯ ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ. ನನಗೆ ಯಾವುದೇ ಸಹಾಯ ಬೇಡ, ಸರ್ಕಾರಿ ಆಸ್ಪತ್ರೆ ಅಭಿವೃದ್ಧಿ ಮಾಡಿ. ಇಲ್ಲವಾದರೆ ಸರ್ಕಾರಕ್ಕೆ ಜನ ಛೀಮಾರಿ ಹಾಕುತ್ತಾರೆ. ಡೆಂಗ್ಯೂ ಕಾಯಿಲೆಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಸೂಕ್ತ ಚಿಕಿತ್ಸೆ ಸಿಕ್ತಿಲ್ಲ. ಸರ್ಕಾರಿ ಆಸ್ಪತ್ರೆಯಲ್ಲಿ ಬಡವರಿಗೆ ಹೆಚ್ಚಿನ ಸೌಲಭ್ಯ ಸಿಗಬೇಕು. ನನ್ನ ಮಗಳಿಗಾದ ಸ್ಥಿತಿ ಯಾರಿಗೂ ಆಗುವುದು ಬೇಡ ಎಂದು ಮೃತ ಬಾಲಕಿಯ ತಂದೆ ಆಸಿಫ್ ಸರ್ಕಾರಿ ಆಸ್ಪತ್ರೆಗಳ ನಿರ್ಲಕ್ಷಕ್ಕೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.













