ಕಡೂರು: ಗ್ಯಾರೇಜ್‍ ನಲ್ಲಿ ಉಸಿರುಗಟ್ಟಿ ಇಬ್ಬರು ಸಾವು

ಕಡೂರು: (ನ್ಯೂಸ್ ಮಲ್ನಾಡ್ ವರದಿ) ಆಟೊ ರಿಕ್ಷಾದ ಇಂಜಿನ್ ರಿಪೇರಿ ನಂತರ ಉಸಿರುಗಟ್ಟಿ ಇಬ್ಬರು ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಕೋಡಿಕ್ಯಾಂಪ್ ನಲ್ಲಿ ನಡೆದಿದೆ. ಕಡೂರು ತಾಲ್ಲೂಕಿನ ಕಲ್ಲಾಪುರ ಗ್ರಾಮದ ತೌಫಿಕ್ (24) ಹಾಗೂ ಇರ್ಫಾನ್ (24) ಮೃತಪಟ್ಟವರು.

 

ಇದನ್ನೂ ಓದಿ; RBI ನಿಂದ ಉದ್ಯೋಗಾವಕಾಶ; ವಿವಿಧ ಪ್ರದೇಶಗಳಲ್ಲಿ ಮೆಡಿಕಲ್ ಕನ್ಸಲ್‌ ಟಂಟ್‌ಗಳ ನೇಮಕ

ಪಟ್ಟಣದ ಶೆಟ್ಟಿ ಕಾಂಪೌಂಡ್ ನಲ್ಲಿರುವ ತೌಫಿಕ್ ನ ಗ್ಯಾರೇಜ್ ನಲ್ಲಿ ಶನಿವಾರ ರಾತ್ರಿ ಆಟೊ ರಿಕ್ಷಾದ ಇಂಜಿನ್ ರಿಪೇರಿ ಮಾಡಿದ ಬಳಿಕ ಇಂಜಿನ್ ಅನ್ನು ಚಾಲನೆಯಲ್ಲೇ ಬಿಟ್ಟು ಇಬ್ಬರು ಗ್ಯಾರೇಜ್ ಒಳಗೆ ಹೋಗಿ ನಿದ್ರೆಗೆ ಜಾರಿದ್ದು, ಈ ವೇಳೆ ಇಂಜಿನ್ ನಿಂದ ಹೊರ ಸೂಸಿದ ಹೊಗೆಯಿಂದ ಉಸಿರುಗಟ್ಟಿ ಮೃತಪಟ್ಟಿದ್ದಾರೆ.

ಇದನ್ನೂ ಓದಿ; ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ

ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಪಟ್ಟಣದ ಪೊಲೀಸರು ಅವಘಡದಲ್ಲಿ ಸಾವನ್ನಪ್ಪಿದ ಯುವಕರಿಬ್ಬರ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

ಜಯಪುರ: ಚಾಲಕನ ನಿಯಂತ್ರಣ ತಪ್ಪಿ ಅಯ್ಯಪ್ಪ ಮಾಲಾಧಾರಿಗಳ ಬಸ್ ಪಲ್ಟಿ

ಜಯಪುರ: (ನ್ಯೂಸ್ ಮಲ್ನಾಡ್ ವರದಿ) ಚಾಲಕನ ನಿಯಂತ್ರಣ ತಪ್ಪಿ ಅಯ್ಯಪ್ಪ ಮಾಲಾಧಾರಿಗಳ ಬಸ್ ಪಲ್ಟಿಯಾಗಿರುವ ಘಟನೆ ಭಾನುವಾರ (ನಿನ್ನೆ)  ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಗುಡ್ಡೆತೋಟದ ಬಳಿ ನಡೆದಿದೆ.

 

ಶೃಂಗೇರಿಯಿಂದ ಹೊರನಾಡಿಗೆ ತೆರಳುತ್ತಿದ್ದ ಅಯ್ಯಪ್ಪ ಮಾಲಾಧಾರಿಗಳ ಬಸ್ ಗುಡ್ಡೇತೋಟದ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ 15 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನ ರಂಗಸಮುದ್ರ ಗ್ರಾಮದ 34 ಅಯ್ಯಪ್ಪ ಮಾಲಾಧಾರಿಗಳು ಶೃಂಗೇರಿಯಿಂದ ಹೊರನಾಡಿಗೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದ್ದು, ಗಾಯಾಳುಗಳನ್ನು ಜಯಪುರ, ಶೃಂಗೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.