ಕಳಸ: ಶ್ರೀ ರಾಮ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದ ಹಿನ್ನೆಲೆ ಶ್ರೀರಾಮ ಮಹಾಪ್ರಣೀಪತ್ಯೋತ್ಸವ ಕಾರ್ಯಕ್ರಮ

ಕಳಸ: (ನ್ಯೂಸ್ ಮಲ್ನಾಡ್ ವರದಿ) ಅಯೋಧ್ಯೆಯಲ್ಲಿ ಶ್ರೀ ರಾಮ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕೆಳಭಾಗದಲ್ಲಿ ಶ್ರೀ ರಾಮ ಸೇವಾ ಯುವಕ ಸಂಘ (ರಿ.) ಕೆಳಭಾಗ ಮತ್ತು ಶ್ರೀರಾಮ ಭಕ್ತವೃಂದ ಇವರ ಸಹಯೋಗದಲ್ಲಿ, “ಶ್ರೀರಾಮ ಮಹಾಪ್ರಣೀಪತ್ಯೋತ್ಸವ” ಕಾರ್ಯಕ್ರಮವನ್ನು ಇದೇ ಸೋಮವಾರ 22.01.2024 ರಂದು ಹಮ್ಮಿಕೊಳ್ಳಲಾಗಿದೆ.

 

ಇದನ್ನೂ ಓದಿ; ಡಿಸಿಸಿ ಬ್ಯಾಂಕ್‌ ನಲ್ಲಿ ಉದ್ಯೋಗ; 93 ಹುದ್ದೆಗಗಳಿಗೆ ಅರ್ಜಿ ಆಹ್ವಾನ

ಸೋಮವಾರ ಬೆಳಿಗ್ಗೆ 9 ಗಂಟೆಗೆ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ಪ್ರಾರ್ಥನೆ ಮತ್ತು ಶ್ರೀರಾಮನ ವಿಗ್ರಹದ ಮೆರವಣಿಗೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಕಲರ್ಸ್ ಕನ್ನಡ ಖ್ಯಾತಿಯ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ತುಳುನಾಡ ಗಾನಗಂಧರ್ವ ಬಿರುದಾಂಕಿತ ಪುತ್ತೂರು ಜಗದೀಶ್ ಆಚಾರ್ಯ ಮತ್ತು ಬಳಗದವರಿಂದ ಸಂಗೀತ ಗಾನ ಸಂಭ್ರಮವನ್ನು ಆಯೋಜಿಸಲಾಗಿದೆ.

ಇದನ್ನೂ ಓದಿ; ಗೃಹಜ್ಯೋತಿ ನಿಯಮದಲ್ಲಿ ಮಹತ್ವದ ಬದಲಾವಣೆ; ಏನದು ಬದಲಾವಣೆ?

ಇನ್ನು ಅಯೋಧ್ಯಾಪತಿ ಶ್ರೀ ರಾಮಮಂದಿರದ ಉದ್ಘಾಟನಾ ಕಾರ್ಯಕ್ರಮದ ನೇರ ವೀಕ್ಷಣೆಗೆ ಎಲ್. ಇ. ಡಿ. ಸ್ಕ್ರೀನ್ ವ್ಯವಸ್ಥೆ ಕೂಡ ಮಾಡಲಾಗಿದೆ.

 

ತೀರ್ಥಹಳ್ಳಿ: ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿ ನೇಣಿಗೆ ಶರಣು | ಕಾರಣ ನಿಗೂಢ

ತೀರ್ಥಹಳ್ಳಿ: (ನ್ಯೂಸ್ ಮಲ್ನಾಡ್ ವರದಿ) ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಬಿಳುಕೊಪ್ಪ ಗ್ರಾಮದಲ್ಲಿ ನಡೆದಿದೆ. ಅಧೀಕ್ಷಾ (20) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.

 

ಇದನ್ನೂ ಓದಿ; ಚಾಕ್ ಪೀಸ್ ನಲ್ಲಿ ಯುವಕನ ಕೈಚಳಕ; ರಾಮ ಮಂದಿರ ಕಲಾಕೃತಿ ನಿರ್ಮಾಣ

ಬಾಳೆಬೈಲು ಕಾಲೇಜಿನಲ್ಲಿ ಅಂತಿಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ ಅಧೀಕ್ಷಾ, ಗುರುವಾರ ರಾತ್ರಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾಳೆ. ಬೆಳಗ್ಗೆ ಯುವತಿ ಹೊರಗೆ ಬಾರದೇ ಇದ್ದಿದ್ದರಿಂದ ಅನುಮಾನಗೊಂಡು ಬಾಗಿಲು ತೆರೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

ಈ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬರಬೇಕಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.