ಕಳಸ: ಹೃದಯಾಘಾತದಿಂದ ಕಳಸ ಠಾಣೆಯ ASI ನಿಧನ

ಕಳಸ: (ನ್ಯೂಸ್ ಮಲ್ನಾಡ್ ವರದಿ) ಹೃದಯಾಘಾತದಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಎಎಸೈ ಜಿ.ಕೆ.ಮುರುಳಿಧರ್ ಇಂದು ನಿಧನ ಹೊಂದಿದ್ದಾರೆ. ಮುರುಳಿಧರ್ ಅವರಿಗೆ ಇಂದು ಬೆಳಗ್ಗಿನ ಜಾವ ಎದೆನೋವು ಕಾಣಿಸಿಕೊಂಡಿದ್ದು ತಕ್ಷಣ ಕಳಸದ ಕಾವೇರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಆಸ್ಪತ್ರೆಗೆ ಬಂದ ಕೆಲವೇ ಕ್ಷಣಗಳಲ್ಲಿ ಕೊನೆಯುಸಿರೆಳೆದಿದ್ದಾರೆ.

 

ಇದನ್ನೂ ಓದಿ; ವಿದ್ಯಾರ್ಥಿಗಳೇ ಗಮನಿಸಿ; ಎಲ್‌ಐಸಿ ವಿದ್ಯಾಧನ್ ಸ್ಕಾಲರ್‌ಶಿಪ್ ಅರ್ಜಿ ಆಹ್ವಾನ

ಮುರುಳಿಧರ್ ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಬೀರೂರಿನವರಾಗಿದ್ದು, ನಾಲ್ಕು ವರ್ಷಗಳಿಂದ ಕಳಸ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಹಾಗೆಯೇ ಚಿಕ್ಕಮಗಳೂರು ಬಸವನಹಳ್ಳಿ ಠಾಣೆ, ಶೃಂಗೇರಿ, ಕುದುರೆಮುಖ ಠಾಣೆಗಳಲ್ಲೂ ಕೂಡ ಕಾರ್ಯನಿರ್ವಹಿಸಿದ್ದರು. ಇವರ ನಿವೃತ್ತಿಗೆ ಇನ್ನು ಕೇವಲ 11 ತಿಂಗಳು ಬಾಕಿಯಿತ್ತು ಎಂದು ತಿಳಿದುಬಂದಿದೆ.

 

ಇದನ್ನೂ ಓದಿ; ಇಂದಿನ ಅಡಿಕೆ ಮಾರುಕಟ್ಟೆ ಹೇಗಿದೆ | ಬೆಟ್ಟೆ, ಗೊರಬಲು, ಸರಕು, ಇಡಿ | 23-09-2023

ಇವರಿಗೆ ಪತ್ನಿ ಹಾಗೂ ಓರ್ವ ಪುತ್ರಿ ಇದ್ದು, ಅಕಾಲಿಕ ನಿಧನನಿಂದ ಸಿಬ್ಬಂದಿ ವರ್ಗ ಹಾಗೂ ಸಾರ್ವಜನಿಕರು ಕಂಬನಿ ಮಿಡಿದಿದ್ದಾರೆ. ಮುರಳಿಧರ್ ಅವರ ಪಾರ್ಥೀವ ಶರೀರವನ್ನು ಇಲಾಖೆಯ ಸಕಲ ಗೌರವದೊಂದಿಗೆ ಇಂದು ಅಂತ್ಯ ಸಂಸ್ಕಾರ ನೆರವೇರಿಸಲಾಗುತ್ತದೆ.

 

ಅನಗತ್ಯ ಸುಳ್ಳು ಸುದ್ದಿಗಳನ್ನು ಹರಡುವುದು ಬೇಡ | ಯಾವುದೇ ಮಾಹಿತಿಯನ್ನು ಕೇಳಿದರೆ ನಾನು ನೀಡುತ್ತೇನೆ-ಎಸ್ಪಿ

ಶಿವಮೊಗ್ಗ : (ನ್ಯೂಸ್ ಮಲ್ನಾಡ್ ವರದಿ) ಜಿಲ್ಲೆಯ ಹಲವೆಡೆ ಗಣೇಶ ವಿಸರ್ಜನೆ ನಡೆಯುತ್ತಿದ್ದು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ರಕ್ಷಣೆ ಇಲಾಖೆ ಸೂಕ್ತ ಕ್ರಮ ಕೈಗೊಂಡಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರು ಶಾಂತಿ ಕಾಪಾಡುವ, ಶ್ರದ್ಧಾಭಕ್ತಿಯ ಆಚರಣೆ ಮಾಡಲು ಮುಂದಾಗಬೇಕು ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ತಿಳಿಸಿದರು.

ಜಿಲ್ಲೆಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಅದಕ್ಕೆ ಅವಕಾಶ ನೀಡದಂತೆ ಎಲ್ಲರೂ ರೂಪಿಸಬೇಕಿದೆ. ಅನಗತ್ಯ ಸುಳ್ಳು ಸುದ್ದಿಗಳನ್ನು ಹರಡುವುದು ಬೇಡ. ಯಾವುದೇ ಮಾಹಿತಿಯನ್ನು ಕೇಳಿದರೆ ನಾನು ನೀಡುತ್ತೇನೆ. ಜಿಲ್ಲೆಯ ಎಲ್ಲಾ ಮುದ್ರಣ ಹಾಗೂ ದೃಶ್ಯ ಮಾಧ್ಯಮಗಳು ಅತ್ಯಂತ ಸಹಕಾರಿಯಾಗಿ ಪೊಲೀಸ್ ಇಲಾಖೆಯೊಂದಿಗೆ ಕೈಜೋಡಿಸಿದೆ ಎಂದು ತಿಳಿಸಿದರು.
ಇನ್ನು ಶಿವಮೊಗ್ಗ ಸೂಕ್ಷ್ಮ ಪ್ರದೇಶವಾಗಿದ್ದು ಯಾವುದೇ ವಿಷಯವಾಗಿದ್ದರೂ ಅದನ್ನು ನನ್ನ ಗಮನಕ್ಕೆ ತನ್ನಿ. ವ್ಯವಸ್ಥಿತವಾಗಿ ಗಣೇಶ ವಿಸರ್ಜನೆ ಆಚರಣೆಗೆ ಅವಕಾಶ ಮಾಡಿಕೊಡಲಾಗುತ್ತದೆ ಎಂದರು.
ಚಿಕ್ಕಮಗಳೂರು: ವ್ಯಕ್ತಿಯ ಮೇಲೆ ಲಾಂಗ್ ಬೀಸಿದ ಯುವಕ
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಹಳೇ ದ್ವೇಷದ ಹಿನ್ನೆಲೆ ಯುವಕನೋರ್ವ ಲಾಂಗ್ ಬೀಸಿದ ಪರಿಣಾಮ ವ್ಯಕ್ತಿಯ ಹೆಬ್ಬೆರಳು ತುಂಡಾಗಿರು ಘಟನೆ ಚಿಕ್ಕಮಗಳೂರು ತಾಲೂಕಿನ ಸಗವಿಪುರದಲ್ಲಿ ನಡೆದಿದೆ.
ಕುಮಾರಸ್ವಾಮಿ ಎಂಬ ವ್ಯಕ್ತಿಯ ಮೇಲೆ ಯುವಕ ಕೌಶಿಕ್ ಹಳೆ ದ್ವೇಷದ ಹಿನ್ನೆಲೆ ಲಾಂಗ್ ಬೀಸಿದ್ದು ಈ ವೇಳೆ ಲಾಂಗ್ ತಗುಲಿ ಕುಮಾರಸ್ವಾಮಿಯ ಹಬ್ಬೆರಗಳು ತುಂಡಾಗಿದೆ.
ತಕ್ಷಣ ಕುಮಾರಸ್ವಾಮಿ ಅವರನ್ನು ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಧ್ಯದ ಅಮಲಿನಲ್ಲಿ ಯುವಕ ದಾಳಿ ನಡೆಸಿದ್ದಾನೆ ಎನ್ನಲಾಗುತ್ತಿದ್ದು ಭಯಭೀತರಾದ ಕುಟುಂಬಸ್ಥರು ಪೊಲೀಸರ ಮೊರೆ ಹೋಗಿದ್ದಾರೆ. ಪ್ರಕರಣದ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.