ಚಿಕ್ಕಮಗಳೂರು : (ನ್ಯೂಸ್ ಮಲ್ನಾಡ್ ವರದಿ) ಭದ್ರಾ ನದಿಯಲ್ಲಿ ಸ್ನಾನಕ್ಕೆ ಎಂದು ಇಳಿದ ಯುವಕ ಕಾಲು ಜಾರಿ ಬಿದ್ದು ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹೆಬ್ಬಾಳೆ ಸೇತುವೆ ಬಳಿ ನಡೆದಿದೆ. ಬೆಂಗಳೂರು ನಗರದ ಶ್ರೀನಗರ ಮೂಲದ ಗೋಕುಲ್ (25) ಮೃತ ದುರ್ದೈವಿ.
ಇದನ್ನೂ ಓದಿ; ಐಒಸಿಎಲ್ ನಲ್ಲಿ ಉದ್ಯೋಗಾವಕಾಶ; 1720 ಹುದ್ದೆಗಳಿಗೆ ಅರ್ಜಿ ಆಹ್ವಾನ; ನೇಮಕಾತಿಯ ಕುರಿತು ಇಲ್ಲಿದೆ ಮಾಹಿತಿ

ತನ್ನ ಮೂವರು ಸ್ನೇಹಿತರ ಜೊತೆ ಹೊರನಾಡು ಅನ್ನಪೂರ್ಣೇಶ್ವರಿ ದರ್ಶನಕ್ಕೆ ಬಂದಿದ್ದರು. ವಿಜಯದಶಮಿಯ ಹೊರನಾಡು ಅನ್ನಪೂರ್ಣೇಶ್ವರಿ ದೇಗುಲದಲ್ಲಿ ಪೂಜೆ ಮಾಡಿಸಿಕೊಂಡು ಅನ್ನಪೂರ್ಣೇಶ್ವರಿ ದರ್ಶನದ ಬಳಿಕ ಪ್ರಸಾದ ಸವಿದು ಬೆಂಗಳೂರಿಗೆ ಹಿಂತಿರುಗುತ್ತಿದ್ದರು. ಹೊರನಾಡಿನಿಂದ 10 ಕಿಲೋಮೀಟರ್ ಮುಂದೆ ಬಂದ ಯುವಕರು ಹೆಬ್ಬಾಳ ಸೇತುವೆ ಬಳಿ ಭದ್ರಾ ನದಿಯಲ್ಲಿ ಸ್ನಾನ ಮಾಡಲು ಮುಂದಾಗಿದ್ದಾರೆ. ಈ ವೇಳೆ ಸ್ನಾನಕ್ಕೆ ಎಂದು ಇಳಿದ ಗೋಕುಲ್ ಕಾಲು ಚಾರಿ ಬಿದ್ದು ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.
ಇದನ್ನೂ ಓದಿ; 2 ನೇ ವಾರಕ್ಕೆ ಕಾಲಿಟ್ಟ ಜಲಪಾತ ಸಿನಿಮಾ; ರಿವ್ಯೂಸ್ ಮತ್ತು ರೇಟಿಂಗ್ ನ ರೇಸ್ ನಲ್ಲೂ ಮುಂದಿರುವ ಪರಿಸರ ಕಾಳಜಿ ಸಿನಿಮಾ
ಮೃತ ಗೋಕುಲ್ ಜೊತೆಗಿದ್ದ ಸ್ನೇಹಿತರು ರಕ್ಷಿಸಲು ಪ್ರಯತ್ನಿಸಿದ್ದಾರೆ. ಆದರೆ ಅದು ಸಾಧ್ಯವಾಗಿಲ್ಲ. ಸ್ನೇಹಿತರ ಕಣ್ಣೆದುರೇ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಕಳಸ ಪೊಲೀಸರು ಮೃತ ದೇಹವನ್ನು ಕಳಸ ತಾಲೂಕು ಆಸ್ಪತ್ರೆಗೆ ತಂದಿದ್ದಾರೆ. ಕಳಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿಕ್ಕಮಗಳೂರು: ಆತ್ಮ ಯೋಜನೆಯಡಿ ಅಂತಾರಾಷ್ಟ್ರೀಯ ರೈತ ಮಹಿಳಾ ದಿನಾಚರಣೆ ಹಾಗೂ ವಿಶ್ವ ಆಹಾರ ದಿನಾಚರಣೆ
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಅಂತಾರಾಷ್ಟ್ರೀಯ ರೈತ ಮಹಿಳಾ ದಿನಾಚರಣೆ ಹಾಗೂ ವಿಶ್ವ ಆಹಾರ ದಿನಾಚರಣೆಯನ್ನು ಜಂಟಿ ಉಪ ನಿರ್ದೇಶಕರ ಕಛೇರಿ ಆವರಣದಲ್ಲಿ ನಡೆಸಲಾಯಿತು.
ಕೃಷಿ ಕ್ಷೇತ್ರದಲ್ಲಿ ಶೇ 75% ರಷ್ಟು ಮಹಿಳೆಯರು ಕೃಷಿ ಚಟುವಟಿಕೆಗಳನ್ನು ನಿರ್ವಹಿಸುತ್ತಿದ್ದಾರೆ. ರೈತ ಮಹಿಳೆಯರಿಗಾಗಿ ಕೃಷಿಯಲ್ಲಿ ತರಬೇತಿ, ಬೆಳೆ ಪ್ರಾತ್ಯಕ್ಷಿಕೆಗಳು, ಅಧ್ಯಯನ ಪ್ರವಾಸ, ಸ್ವಸಹಾಯ ಗುಂಪುಗಳ ರಚನೆಗಳಂತಹ ಹಲವು ಕಾರ್ಯಕ್ರಮಗಳನ್ನು ರೂಪಿಸಿ ಕೃಷಿ ತಾಂತ್ರಿಕತೆಗಳ ಕುರಿತು ಅರಿವು ಮೂಡಿಸಲಾಗುತ್ತಿದೆ. ಸಾವಯವ ಕೃಷಿಯನ್ನು ಕೈಗೊಂಡು ವಿಷ ಮುಕ್ತ ಆಹಾರ ಉತ್ಪಾದನೆಗಳಿಗೆ ಸಂಕಲ್ಪ ಮಾಡಬೇಕು. ಸರ್ಕಾರದಿಂದ ದೊರೆಯುವ ಯೋಜನೆಗಳ ಬಗ್ಗೆ ರೈತರಿಗೆ ಜಾಗೃತಿ ಮೂಡಿಸಬೇಕು. ರೈತ ಮಹಿಳೆಯರು ತಮ್ಮ ಜೀವನ ಕಟ್ಟಿಕೊಳ್ಳಲು ಬ್ಯಾಂಕ್ ಗಳ ಮೂಲಕ ಸಿಗುವ ಸಹಾಯಧನ ಪಡೆಯಲು ಉತ್ತೇಜನ ನೀಡಬೇಕು ಎಂದು ಜಂಟಿ ಕೃಷಿ ನಿರ್ದೇಶಕರಾದ ಸುಜಾತ ಹೆಚ್.ಎಲ್ ರವರು ಹೇಳಿದರು.
ಬೇಸಾಯ ಶಾಸ್ತ್ರ ತೋಟಗಾರಿಕೆ ಮಹಾ ವಿದ್ಯಾಲಯ ಸಹಾಯಕ ಪ್ರಾಧ್ಯಾಪಕರಾದ ಯಮುನಾ.ಬಿ.ಸಿ ರವರು ಪೌಷ್ಟಿಕ ಆಹಾರ ಮಹತ್ವ ಕುರಿತು ಸವಿವರ ಮಾಹಿತಿಯನ್ನು ನೀಡಿದರು, ಕಾರ್ಯಕ್ರಮದಲ್ಲಿ ಜಿಲ್ಲೆಯ ಏಳು ತಾಲ್ಲೂಕುಗಳ 50 ರೈತ ಹಾಗೂ ರೈತ ಮಹಿಳೆಯರು ಭಾಗವಹಿಸಿದ್ಧರು, ಆಸಕ್ತ ರೈತ ಮಹಿಳೆಯರು ತಮ್ಮ ಕೃಷಿಯಲ್ಲಿನ ಅನುಭವವನ್ನು ವೇದಿಕೆಯಲ್ಲಿ ಹಂಚಿಕೊಂಡರು.
ಈ ಸಂದರ್ಭದಲ್ಲಿ ಕೃಷಿಯಲ್ಲಿ ಸಾಧನೆ ಮಾಡಿದ ರೈತ ಮಹಿಳೆಯರಾದ ಮಂಗಳಕುಮಾರ್, ಚಂದ್ರಕಲಾಪ್ರಕಾಶ್ ಇವರನ್ನು ಸನ್ಮಾನಿಸಲಾಯಿತು, ಸಹಾಯಕ ಕೃಷಿ ನಿರ್ದೇಶಕರಾದ ವಿಜಯಲಕ್ಷ್ಮೀ ಚಂದ್ರಶೇಖರ್, ಕೃಷಿ ಅಧಿಕಾರಿ ಸುಜಾತ ಉಪಸ್ಥಿತರಿದ್ದರು, ಆತ್ಮಯೋಜನೆ ಉಪ ಯೋಜನಾ ನಿರ್ದೇಶಕರಾದ ಜಿ.ಪಿ.ಪ್ರಿಯಾಂಕ ಕಾರ್ಯಕ್ರಮವನ್ನು ನಿರೂಪಿಸಿದರು.












