
ತರೀಕೆರೆ: (ನ್ಯೂಸ್ ಮಲ್ನಾಡ್ ವರದಿ) ಕಾಫಿನಾಡ ಬಯಲುಸೀಮೆ ಭಾಗದಲ್ಲಿ ನಿನ್ನೆ ಸಂಜೆಯಿಂದ ಧಾರಾಕಾರ ಮಳೆಯಿಂದ ಕಲ್ಲತ್ತಿಗಿರಿ ಜಲಪಾತ ಮೈದುಂಬಿ ಹರಿಯುತ್ತಿದೆ.
ಇದನ್ನೂ ಓದಿ: ಸರ್ಕಾರದಿಂದ ರೈತರಿಗೆ ಭರ್ಜರಿ ಗಿಫ್ಟ್..!; ಮಹತ್ವದ ಆದೇಶ ಕೊಟ್ಟ ಸಿಎಂ ಸಿದ್ದರಾಮಯ್ಯ!

ಕೆಮ್ಮಣ್ಣುಗುಂಡಿ ಗುಡ್ಡಗಾಡು ತಪ್ಪಲ್ಲಿನಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ತರೀಕೆರೆ ತಾಲೂಕಿನ ಕಲ್ಲತ್ತಿಗಿರಿ ಜಲಪಾತದ ಸೊಬಗು ಮತ್ತಷ್ಟು ಹೆಚ್ಚಾಗಿದೆ. ಮೊನ್ನೆವರೆಗೂ ಜಲಪಾತದಲ್ಲಿ ನೀರಿನ ಪ್ರಮಾಣ ಕಡಿಮೆ ಇತ್ತು. ಇದೀಗ ಧಾರಾಕಾರ ಮಳೆಯಿಂದಾಗಿ ಕಲ್ಲತ್ತಿಗಿರಿ ಜಲಪಾತಕ್ಕೆ ಜೀವ ಕಳೆ ಬಂದಿದ್ದು, ಪ್ರವಾಸಿಗರನ್ನ ಕೈ ಬೀಸಿ ಕರೆಯುತ್ತಿದೆ. ಹಾಲ್ನೊರೆಯಂತೆ ಉಕ್ಕಿ ಹರಿಯುತ್ತಿರುವ ಜಲಪಾತ ಸೊಬಗು ಪ್ರವಾಸಿಗರ ಮನಸ್ಸಿಗೆ ಖುಷಿ ನೀಡುತ್ತಿದ್ದು, ಕಲ್ಲತ್ತಿಗಿರಿ ಜಲಪಾತಕ್ಕೆ ಪ್ರವಾಸಿಗರು ಭೇಟಿ ನೀಡಿ ಖುಷಿ ಪಡುತ್ತಿದ್ದಾರೆ.

ಕೊಪ್ಪ: ಫೇಸ್ಬುಕ್ ನಲ್ಲಿ ಪಾಕಿಸ್ತಾನ್ ಜಿಂದಾಬಾದ್ ಪೋಸ್ಟ್ ಮಾಡಿದ್ದವನ ಬಂಧನ
ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ಫೇಸ್ಬುಕ್ನಲ್ಲಿ ಪಾಕಿಸ್ತಾನ ಪರ ಪೋಸ್ಟ್ ಮಾಡಿದ ಕೊಪ್ಪ ಮೂಲದ ಮೊಹಮ್ಮದ್ ಅಸ್ಗರ್ ಎಂಬ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿಯಾಗಿ ಸಂದೇಶ ಪ್ರಕಟಿಸಿರುವ ಈತ ಬಜರಂಗ ದಳದ ವಿರುದ್ಧವೂ ಫೇಸ್ಬುಕ್ ನಲ್ಲಿ ಅಸಭ್ಯ ಪೋಸ್ಟ್ ಮಾಡಿದ್ದ. ಇದಕ್ಕೆ ಹಿಂದೂ ಸಂಘಟನೆಗಳಿಂದ ಆಕ್ರೋಶ ವ್ಯಕ್ತವಾಗಿತ್ತು.
ಫೇಸ್ಬುಕ್ ಪೋಸ್ಟ್ ಮಾಡಿದ ಬಳಿಕ ಅಕೌಂಟನ್ನೇ ಆತ ಡಿಲೀಟ್ ಮಾಡಿದ್ದಾನೆ. ಇದೀಗ ಘಟನೆ ಸಂಬಂಧ ಸ್ವಯಂಪ್ರೇರಿತರಾಗಿ ಸುಮೊಟೊ ಪ್ರಕರಣ ದಾಖಲಿಸಿಕೊಂಡಿರುವ ಕೊಪ್ಪ ಠಾಣೆಯ ಪೊಲೀಸರು, ಸದ್ಯ ಅಸ್ಗರ್ ನನ್ನು ಬಂಧಿಸಿದ್ದಾರೆ.
ವಿಧಾನಸಭೆ ಆವರಣದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಪ್ರಕರಣದ ನೆನಪು ಮಾಸುವ ಮುನ್ನವೇ ಮತ್ತ ಅಂಥದ್ದೇ ಘಟನೆ ವರದಿಯಾಗಿರುವುದು ಮಲೆನಾಡು ಭಾಗದ ಜನರಲ್ಲಿ ಆತಂಕ ಸೃಷ್ಟಿಸಿದೆ.













