ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ಕರ್ನಾಟಕ ಗಮಕ ಕಲಾ ಪರಿಷತ್ತು, ಬೆಂಗಳೂರು ಇವರ ವತಿಯಿಂದ 2025–26ನೇ ಸಾಲಿನಲ್ಲಿ ನಡೆಸಿದ ಗಮಕ ವಿದ್ವತ್ ಪರೀಕ್ಷೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ವೈಕುಂಠಪುರದ ಕಮಲಾಕ್ಷಿ ರಮೇಶ್ (ಕಲಾ ರಮೇಶ್) ಅವರು ರಾಜ್ಯ ಮಟ್ಟದಲ್ಲಿ ತೃತೀಯ ರ್ಯಾಂಕ್ ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ಇದನ್ನೂ ಓದಿ: ಈ ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ ಸಿಗಲಿದೆ ₹1,00,000 ಸ್ಕಾಲರ್ಶಿಪ್; ಡಿಟೇಲ್ಸ್ಗಾಗಿ ಜಸ್ಟ್ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

ಇವರು ಗಮಕವನ್ನು ಗಮಕ ವಿದೂಷಿ ಶ್ರೀಮತಿ ಗಾಯತ್ರಿ ನಾಗರಾಜ್, ಉಂಟೊಳ್ಳಿ ಅವರಿಂದ ಅಭ್ಯಾಸ ಮಾಡಿದ್ದಾರೆ. ತಮ್ಮ ಪರಿಶ್ರಮ ಹಾಗೂ ಗುರುಗಳ ಮಾರ್ಗದರ್ಶನದಿಂದ ರಾಜ್ಯ ಮಟ್ಟದಲ್ಲಿ ತೃತೀಯ ಸ್ಥಾನ ಗಳಿಸುವ ಮೂಲಕ ಜಿಲ್ಲೆಯ ಹೆಗ್ಗಳಿಕೆಗೆ ಕಾರಣರಾಗಿದ್ದಾರೆ.
ಇದನ್ನೂ ಓದಿ: ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ; ಏನೆಲ್ಲಾ ತಿದ್ದುಪಡಿ ಮಾಡಿಬಹುದು? ಸಂಪೂರ್ಣ ಮಾಹಿತಿ ಇಲ್ಲಿದೆ
ಗಮಕ ವಿದ್ವತ್ ಪರೀಕ್ಷೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಶ್ರೀಮತಿ ಶಾರದಾಂಬಾ ಹಾಗೂ ಶ್ರೀಮತಿ ಕಸ್ತೂರಿ ನಾರಾಯಣ್ ಅವರು ಡಿಸ್ಟಿಂಕ್ಷನ್ನಲ್ಲಿ ತೇರ್ಗಡೆಯಾಗಿದ್ದಾರೆ. ಅಗಳಗಂಡಿ ಸಹೋದರಿಯರಾದ ಶ್ರೀಮತಿ ವೀಣಾ, ಶ್ರೀಮತಿ ಮೀನಾಕ್ಷಿ, ಶ್ರೀಮತಿ ಸುನೀಲಾ, ಶ್ರೀಮತಿ ಯಶೋದಾ ಹಾಗೂ ಶ್ರೀಮತಿ ಅಶ್ವಿನಿ ಜಿ.ವಿ. ಅವರು ಪ್ರಥಮ ಸ್ಥಾನದೊಂದಿಗೆ ಉತ್ತೀರ್ಣರಾಗಿದ್ದಾರೆ. ಅಗಳಗಂಡಿಯ ಶ್ರೀಮತಿ ರಜಿನಿ ಅವರು ಗಮಕ ಪ್ರೌಢ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.
ಇದನ್ನೂ ಓದಿ: ಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್; ಈ ದಿನ ಆಗಲಿದೆ 27ನೇ ಕಂತಿನ ಹಣ ಜಮಾ












