
ಬೆಂಗಳೂರು: (ನ್ಯೂಸ್ ಮಲ್ನಾಡ್ ವರದಿ) ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕರ್ನಾಟಕ ಸಾಂಸ್ಕೃತಿಕ ಅಕಾಡೆಮಿ (ರಿ) ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರಿಗೆ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಕನ್ನಡ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಭೂಷಣ ಪ್ರಶಸ್ತಿ, ಶಿಕ್ಷಣ ರತ್ನ ಪ್ರಶಸ್ತಿ, ಸಮಾಜ ರತ್ನ ಪ್ರಶಸ್ತಿ, ಕರ್ನಾಟಕ ರತ್ನ ಶ್ರೀ ಪ್ರಶಸ್ತಿ ಹಾಗೂ ಕರ್ನಾಟಕ ವೀರ ರತ್ನ ಪ್ರಶಸ್ತಿಗಳನ್ನು ನೀಡಲು ಅಕಾಡೆಮಿ ನಿರ್ಧರಿಸಿದೆ.
ಶಿಕ್ಷಣ, ನೃತ್ಯ, ಸಂಗೀತ, ಸಂಸ್ಕೃತಿ, ಕ್ರೀಡೆ, ಕೈಗಾರಿಕೆ, ಕಾನೂನು, ಪತ್ರಿಕೋದ್ಯಮ, ಸಮಾಜಸೇವೆ, ವೈದ್ಯಕೀಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವ ಸಾಧಕರನ್ನು ಪ್ರಶಸ್ತಿಗೆ ಪರಿಗಣಿಸಲಾಗುವುದು ಎಂದು ಅಕಾಡೆಮಿ ತಿಳಿಸಿದೆ.
ಆಸಕ್ತರು ತಮ್ಮ ವಿವರಗಳು ಹಾಗೂ ಸಾಧನೆಗೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 10, 2026 ಕೊನೆಯ ದಿನವಾಗಿದ್ದು, ಅರ್ಜಿಗಳನ್ನು ಪರಿಶೀಲಿಸಿ ಪ್ರಶಸ್ತಿಗೆ ಅರ್ಹರನ್ನು ಆಯ್ಕೆ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಸಂಪರ್ಕ: ಕರ್ನಾಟಕ ಸಾಂಸ್ಕೃತಿಕ ಅಕಾಡೆಮಿ (ರಿ), ಬೆಂಗಳೂರು.
ಮೊಬೈಲ್: 9916690077, 8123253337.
ಇ-ಮೇಲ್:karnatakasamskruthikaacademy@gmail.com













