ಡಾ.ಪ್ರದೀಪ್ ಕೆಂಜಿಗೆ ಅವರ ಕೃತಿಗೆ ಕನ್ನಡ ಸಾಹಿತ್ಯ ಅಕಾಡೆಮಿ ಅತ್ಯುತ್ತಮ ಪುಸ್ತಕ ಪ್ರಶಸ್ತಿ

ಕೊಟ್ಟಿಗೆಹಾರ: (ನ್ಯೂಸ್ ಮಲ್ನಾಡ್ ವರದಿ) ಲೇಖಕರಾದ ಡಾ.ಪ್ರದೀಪ್ ಕೆಂಜಿಗೆ ಅವರ ನರವಾನರ ಕೃತಿಗೆ ಕನ್ನಡ ಸಾಹಿತ್ಯ ಅಕಾಡೆಮಿಯಿಂದ ಕೊಡಮಾಡುವ ಅತ್ಯುತ್ತಮ ಪುಸ್ತಕ ಪ್ರಶಸ್ತಿ ದೊರೆತಿದೆ.


ನ್ನೂ ಓದಿ: ಆಸ್ತಿ ನೋಂದಣಿ ನಿಯಮಗಳಲ್ಲಿ ಮಹತ್ವದ ಬದಲಾವಣೆ; ಇನ್ಮುಂದೆ ಆಸ್ತಿ ರಿಜಿಸ್ಟ್ರೇಷನ್ ಗೆ ಈ ದಾಖಲೆಗಳು ಕಡ್ಡಾಯ!


2024ರಲ್ಲಿ ಪ್ರಕಟವಾದ ವಿವಿಧ 17 ಸಾಹಿತ್ಯ ಪ್ರಕಾರದ ಕೃತಿಗಳಿಗೆ ವಿಮರ್ಶಕರ ಅಭಿಪ್ರಾಯಗಳನ್ನು ಆಧರಿಸಿ ಅತ್ಯುತ್ತಮ ಕೃತಿಗಳೆಂದು ಪರಿಗಣಿಸಿ ಆಯ್ಕೆ ಮಾಡಲಾಗಿದ್ದು ಸಂಕೀರ್ಣ ಪ್ರಕಾರದಲ್ಲಿ ಡಾ.ಪ್ರದೀಪ್ ಕೆಂಜಿಗೆ ಅವರ ನರವಾನರ ಕೃತಿಗೆ ಅತ್ಯುತ್ತಮ ಪುಸ್ತಕ ಪ್ರಶಸ್ತಿ ದೊರೆತಿದೆ. ಪ್ರಶಸ್ತಿ 25 ಸಾವಿರ ನಗದು ಬಹುಮಾನ, ಫಲಕ ಪ್ರಮಾಣ ಪತ್ರವನ್ನು ಒಳಗೊಂಡಿದೆ.

ನರವಾನರ ಕೃತಿ ಚಿಂಪಾಂಜಿಗಳ ನಡವಳಿಕೆ, ಜೀವನವಿಧಾನ ಮುಂತಾದವುಗಳನ್ನು ವಿಶ್ಲೇಷಿಸುವ ವೈಜ್ಞಾನಿಕ ಕೃತಿಯಾಗಿದ್ದು ಜೀವ ವಿಜ್ಞಾನದ ಸಂಶೋಧನೆಗಳನ್ನು, ಹಲವಾರು ವಿಸ್ಮಯಕಾರಿ ಸಂಗತಿಗಳನ್ನು ಮನಮುಟ್ಟುವಂತೇ ಈ ಕೃತಿಯಲ್ಲಿ ಕಟ್ಟಿಕೊಟ್ಟಿದ್ದಾರೆ. ಡಾ.ಪ್ರದೀಪ್ ಕೆಂಜಿಗೆ ಅವರು ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರೊಡನೆ ಪ್ಯಾಪಿಲಾನ್ 1. 2, ವಿಸ್ಮಯ 1 2 3 ಕೃತಿಗಳನ್ನು ರಚಿಸಿದ್ದಾರೆ. ಪಶ್ಚಿಮ ಘಟ್ಟಗಳ ಜೀವ ವೈವಿಧ್ಯತೆ ಹಾಗೂ ಅದರ ಮೇಲೆ ಕ್ರಿಮಿನಾಶಕಗಳ ದುಷ್ಪರಿಣಾಮಗಳ ಅಧ್ಯಯನದಲ್ಲಿ ಪಿಎಚ್‌ಡಿ ಪಡೆದಿದ್ದಾರೆ. ಕೆಫೆ ಕಾಫಿ ಡೇಯಲ್ಲಿ ಸಂಶೋಧನಾ ಮತ್ತು ಅಭಿವೃದ್ದಿ ವಿಭಾಗದ ಮುಖ್ಯ ವಿಜ್ಞಾನಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಪ್ರಸ್ತುತ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ಅಧ್ಯಕ್ಷರಾಗಿದ್ದಾರೆ. (ವರದಿ- ತನು ಕೊಟ್ಟಿಗೆಹಾರ)


ನ್ನೂ ಓದಿ: 6 ರಾಶಿಗೆ ಪ್ರಗತಿಯ ಹಾದಿ ತೆರೆಯಲಿದೆ.. ಭರ್ಜರಿ ಲಕ್‌!


 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.