ಖಾಸಗಿ ಬಸ್ ಹಾಗೂ ಕಾರಿನ ನಡುವೆ ಡಿಕ್ಕಿ | ಐವರು ಪ್ರಯಾಣಿಕರಿಗೆ ಗಾಯ..!

ಕಾರ್ಕಳ: (ನ್ಯೂಸ್ ಮಲ್ನಾಡ್ ವರದಿ) ಖಾಸಗಿ ಬಸ್ ಹಾಗೂ ಕಾರಿನ ನಡುವೆ ನಡೆದ ಅಪಘಾತದಲ್ಲಿ ಐವರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ಮಾಳ ಎಸ್ ಕೆ ಬಾರ್ಡರ್ ನಲ್ಲಿ ಸೋಮವಾರ ನಡೆದಿದೆ.

 

ಇದನ್ನೂ ಓದಿ; ಪಿಎಂ ವಿಶ್ವಕರ್ಮ ಯೋಜನೆ; ಈ ಯೋಜನೆಯಲ್ಲಿ ಸಿಗುತ್ತೆ 15 ಸಾವಿರ ಸಹಾಯಧನ; ಯಾರೆಲ್ಲಾ ಈ ಯೋಜನೆಗೆ ಅರ್ಹರು, ಅರ್ಹತೆಗಳೇನು; ಸವಲತ್ತು ಪಡೆಯಲು ಹೀಗೆ ನೋಂದಣಿ ಮಾಡಿಕೊಳ್ಳಿ

ಶೃಂಗೇರಿಯಿಂದ ಕಾರ್ಕಳ ಮಾರ್ಗವಾಗಿ ಮಂಗಳೂರಿಗೆ ಸಾಗುತ್ತಿದ್ದ ಖಾಸಗಿ ಬಸ್ ಹಾಗೂ ಉಡುಪಿಯಿಂದ ಶೃಂಗೇರಿ ಕಡೆಗೆ ಹೋಗುತ್ತಿದ್ದ ಕಾರು ಮುಖಾಮುಖಿ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡವರನ್ನು ಸಂಗಮೇಶ್ (55), ಸುವರ್ಣ (45), ಸಾಕ್ಷಿ (20), ಸವನ್ (25) ಮತ್ತು ರಾಘವೇಂದ್ರ (32) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ; ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗಾವಕಾಶ; 1,25,000ರ ವರೆಗೆ ಮಾಸಿಕ ವೇತನ;  ನೇರ ಸಂದರ್ಶನದ ಮೂಲಕ ಆಯ್ಕೆ

ಸ್ಥಳಕ್ಕೆ ಕಾರ್ಕಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

ಕಾರ್ಕಳ: ಖಾಸಗಿ ಬಸ್ ಹಾಗೂ ಬೊಲೆರೊ ಕಾರು ಡಿಕ್ಕಿ | ಜಯಪುರ ಮೂಲದ ವ್ಯಕ್ತಿ ಸಾವು, ಇಬ್ಬರು ಗಂಭೀರ

ಕಾರ್ಕಳ/ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಖಾಸಗಿ ಬಸ್ ಹಾಗೂ ಬೊಲೆರೊ ಕಾರು ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ನಿಟ್ಟೆ ಗ್ರಾಮದ ಮಂಜರರ್ ಪಲ್ಕೆ ಎಂಬಲ್ಲಿ ನಡೆದಿದೆ.

 

ಇದನ್ನೂ ಓದಿ; 25 ಸಾವಿರ ರೂ ಟಾಟಾ ಕಂಪನಿಯಿಂದ ವಿದ್ಯಾರ್ಥಿವೇತನ; ಯಾರು ಈ ವಿದ್ಯಾರ್ಥಿ ವೇತನಕ್ಕೆ ಅರ್ಹರು; ಹೇಗೆ ಅರ್ಜಿ ಸಲ್ಲಿಸುವುದು, ದಾಖಲೆಗಳು ಯಾವುದು?

ಚಿಕ್ಕಮಗಳೂರು ಜಿಲ್ಲೆಯ ಜಯಪುರ ನಿವಾಸಿ ಶಿವಪ್ಪ (48) ಮೃತಪಟ್ಟವರು. ಮಂಜು (45), ಸುಜಯ (28) ಗಾಯಗೊಂಡವರು. ತಾಲ್ಲೂಕಿನ ನಿಟ್ಟೆ ಗ್ರಾಮದ ಮಂಜರರ್ ಪಲ್ಕೆ ಎಂಬಲ್ಲಿ ನಂದಳಿಕೆ ಕಡೆಯಿಂದ ಬರುತ್ತಿದ್ದ ಬೊಲೆರೊ ಕಾರ್ಕಳ ಕಡೆಯಿಂದ ಬರುತ್ತಿದ್ದ ಮುಂಬೈ ಬಸ್ ಗೆ ಡಿಕ್ಕಿ ಹೊಡೆದಿದೆ. ಗಾಯಾಳುಗಳನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ; NTPC ನಲ್ಲಿ ಉದ್ಯೋಗಾವಕಾಶ; 100 ಹುದ್ದೆಗಳಿಗೆ ಅರ್ಜಿ ಆಹ್ವಾನ; 50,000 ದಿಂದ 1,60,000 ವರೆಗೆ ವೇತನ

ತಾಲ್ಲೂಕಿನ ನಂದಳಿಕೆಯ ತಮ್ಮ ಕುಟುಂಬದ ಮನೆಗೆ ದೇವರ ಕಾರ್ಯಕ್ಕಾಗಿ ಚಿಕ್ಕಮಗಳೂರು ಜಿಲ್ಲೆಯ ಜಯಪುರದಿಂದ ಬೆಳಿಗ್ಗೆ ಬಂದಿದ್ದ ಕುಟುಂಬದ ಸದಸ್ಯರು ಮನೆಯಲ್ಲಿ ಪೂಜೆ ಮುಗಿಸಿ ಮಧ್ಯಾಹ್ನ ಹಿಂದಿರುಗುತ್ತಿದ್ದರು. ಮೃತಪಟ್ಟ ಶಿವಪ್ಪ ಕುಟುಂಬದ ಗುರಿಕಾರನಾಗಿ ಮುಂದೆ ನಿಂತು ದೈವದ ಕೆಲಸದ ವಿಧಿವಿಧಾನಗಳನ್ನು ನಡೆಸಿಕೊಟ್ಟಿದ್ದರು ಎನ್ನಲಾಗಿದೆ.

ಇದನ್ನೂ ಓದಿ; ಯುವನಿಧಿ ಜಾರಿಗೆ ದಿನಾಂಕ ಫಿಕ್ಸ್; ಡಿಪ್ಲೋಮಾ, ಪದವೀಧರರು ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

ಖಾಸಗಿ ಬಸ್ ನಲ್ಲಿದ್ದ 12 ಮಂದಿ ಪ್ರಯಾಣಿಕರನ್ನು ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.