ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಅಧಿಕಾರ ದುರ್ಬಳಕೆ ಆರೋಪ ಕೇಳಿಬಂದ ಹಿನ್ನೆಲೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಅವರನ್ನು ವರ್ಗಾವಣೆ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಶಿವಮೊಗ್ಗ ಲೆಕ್ಕಾಧೀಕ್ಷಕರ ಹುದ್ದೆಯಿಂದ ಕೋಲಾರ ಸಮಾಜ ಕಲ್ಯಾಣ ಇಲಾಖೆ ಲೆಕ್ಕಾಧೀಕ್ಷಕರ ಹುದ್ದೆಗೆ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಇದನ್ನೂ ಓದಿ; ಪೌರ ಕಾರ್ಮಿಕರ ನೇಮಕಾತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್; 1433 ಹುದ್ದೆ ಮಂಜೂರು

ಸಿ.ಎಮ್ ಗೆ ಪತ್ರ ಬರೆದಿದ್ದ ಜಿಲ್ಲಾ ಉಸ್ತುವಾರಿ ಸಚಿವ:
ರಾಯಲ್ಟಿ ಪಾವತಿಸದೆ ಶಿವಮೊಗ್ಗದ ಅಬ್ಬಲಗೆರೆ ಕೆರೆಯಿಂದ ಅಕ್ರಮವಾಗಿ ಮಣ್ಣು ಸಾಗಿಸಿ ಸರ್ಕಾರದ ಖಜಾನೆಗೆ 71,45,920 ರೂ. ನಷ್ಟ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಕಾರ್ಯಪಾಲಕ ಇಂಜಿನಿಯರ್ ವರದಿ ನೀಡಿದ್ದರು. ಅದರಂತೆ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಸಿ.ಎಸ್.ಷಡಕ್ಷರಿಯವರನ್ನು ಕೂಡಲೆ ವರ್ಗಾವಣೆ ಮಾಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದರು. ಅದರಂತೆ ಇದೀಗ ಷಡಕ್ಷರಿಯವರನ್ನು ಶಿವಮೊಗ್ಗದಿಂದ ಕೋಲಾರಕ್ಕೆ ವರ್ಗಾವಣೆ ಮಾಡಲಾಗಿದೆ.
ಆಲ್ದೂರು: ಕಾಡಾನೆ ತುಳಿತಕ್ಕೆ ಮತ್ತೊಬ್ಬ ಕಾರ್ಮಿಕ ಮಹಿಳೆ ಬಲಿ
ಆಲ್ದೂರು: (ನ್ಯೂಸ್ ಮಲ್ನಾಡ್ ವರದಿ) ಕಾಡಾನೆ ತುಳಿದು ಕಾರ್ಮಿಕ ಮಹಿಳೆ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು ಸಮೀಪದ ಹೆಡದಾಳು ಗ್ರಾಮದಲ್ಲಿ ಘಟನೆ ನಡೆದಿದೆ. ವೀಣಾ (45) ಕಾಡಾನೆ ತುಳಿತಕ್ಕೆ ಮೃತಪಟ್ಟ ಮಹಿಳೆ.
ಅಜ್ಜಂಪುರ: ಕುಸಿದು ಬಿದ್ದು 8ನೇ ತರಗತಿ ವಿದ್ಯಾರ್ಥಿನಿ ಸಾವು
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) 8ನೇ ತರಗತಿ ವಿದ್ಯಾರ್ಥಿನಿಯೋರ್ವಳು ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲ್ಲೂಕಿನ ಸೊಕ್ಕೆ ಗ್ರಾಮದಲ್ಲಿ ನಡೆದಿದೆ. ಉಷಾ (13) ಮೃತ ಪಟ್ಟ ವಿದ್ಯಾರ್ಥಿನಿ.
ಹಲವು ಬಾರಿ ಆಕೆಯ ಪೊಷಕರಿಗೆ ತಿಳಿಸಿ ಮನೆಗೆ ಕಳುಹಿಸಿ ಅಲ್ಲಿಯೇ ವ್ಯಾಸಂಗ ಮಾಡುವಂತೆ ಹೇಳಿದ್ದರು. ಆದರೆ, ಪೋಷಕರು ಇದೊಂದು ವರ್ಷ ವ್ಯಾಸಂಗ ಮಾಡಲಿ ಮುಂದಿನ ವರ್ಷ ಬದಲಾಯಿಸುವುದಾಗಿ ಹೇಳಿ ವಸತಿ ಶಾಲೆಯಲ್ಲಿ ಬಿಟ್ಟಿದ್ದರು. ಇತ್ತೀಚೆಗೆ ಉಷಾ ತುಂಬಾ ಡಿಪ್ರೆಷನ್ ಗೆ ಒಳಗಾಗಿದ್ದಳು. ಪೋಷಕರು ಚಿಕಿತ್ಸೆ ಕೊಡಿಸಿದ್ದು ಪ್ರತಿ ದಿನ ಮಾತ್ರೆಗಳನ್ನು ತೆಗೆದುಕೊಳ್ಳುತ್ತಿದ್ದಳು.
ದುರಾದೃಷ್ಟವಶಾತ್ ಆಸ್ಪತ್ರೆಗೆ ಬರುವಷ್ಟರಲ್ಲಿ ಬಾಲಕಿ ತೀರಿಕೊಂಡಿದ್ದಳು. ವಿದ್ಯಾರ್ಥಿನಿ ಅಗಲಿಕೆ ತುಂಬಾ ನೋವು ತಂದಿದೆ ಎಂದು ವಸತಿ ಶಾಲೆಯ ಪ್ರಾಂಶುಪಾಲ ತಿಳಿಸಿದ್ದಾರೆ. ಸಾವಿನ ಬಗ್ಗೆ ಅನುಮಾನ ಬಾರದಿರಲು ಪೋಸ್ಟ್ ಮಾರ್ಟಂಗಾಗಿ ಮೃತದೇಹವನ್ನ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕಳಿಸಿದ್ದಾರೆ.












