ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಮಲೆನಾಡಿನಲ್ಲಿ ಸ್ವಲ್ಪ ಕಡಿಮೆಯಾಗಿದ್ದ ಮಳೆ ಆರ್ಭಟ ಮತ್ತೆ ಬಿರುಸುಗೊಂಡಿದೆ. ಬುಧವಾರ ರಾತ್ರಿಯಿಂದ ಮಳೆ ಗಾಳಿಯ ತೀವ್ರತೆ ಹೆಚ್ಚಾಗಿದ್ದು, ಭಾರೀ ಗಾಳಿ ಮಳೆಯಿಂದಾಗಿ ಮಲೆನಾಡು ಭಾಗದಲ್ಲಿ ಸಾವಿರಾರು ಮರಗಳು ಧರೆಗುರುಳಿವೆ.

ಇದನ್ನೂ ಓದಿ: ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನಲ್ಲಿ ರಸ್ತೆಗೆ ಅಡ್ಡಲಾಗಿ ಬೃಹತ್ ಮರ ಬಿದ್ದ ಪರಿಣಾಮ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತ್ತು.
ಇದನ್ನೂ ಓದಿ: 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
ಹಾಂದಿ, ಕಬ್ಬಿಣ ಸೇತುವೆ, ಮಾವಿನಹಳ್ಳಿ ಗ್ರಾಮದಲ್ಲಿ ಮರಗಳ ಜೊತೆಗೆ ವಿದ್ಯುತ್ ಕಂಬಗಳು ಬಿದ್ದಿದ್ದು, ಪರಿಣಾಮ ರಾಷ್ಟ್ರಿಯ ಹೆದ್ದಾರಿ 173 ರ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಅರಣ್ಯ ಇಲಾಖೆ ಹಾಗೂ ಸ್ಥಳಿಯರಿಂದ ಮರ ತೆರವು ಕಾರ್ಯಾಚರಣೆ ನಡೆಸಿದ್ದು, ಮೂರ್ನಾಲ್ಕು ಮರ ಬಿದ್ದ ಪರಿಣಾಮ ಪ್ರಯಾಣಿಕರು, ವಾಹನ ಸವಾರರು ಪರದಾಡಿದರು.












