ಕೊಡಗು: (ನ್ಯೂಸ್ ಮಲ್ನಾಡ್ ವರದಿ) ಕಾಡಾನೆ ದಾಳಿಗೆ ಕೂಲಿ ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಪಾಲಿಬೆಟ್ಟ ಗ್ರಾಮದಲ್ಲಿ ನಡೆದಿದೆ. ಹನುಮಂತ (57) ಕಾಡಾನೆ ದಾಳಿಗೆ ಬಲಿಯಾದ ಕಾರ್ಮಿಕ.
ಇದನ್ನೂ ಓದಿ: ಬಸ್ ಗಳ ಸುರಕ್ಷತೆಗೆ ಮಹತ್ವದ ಕ್ರಮ; ಈ ನಿಯಮಗಳ ಪಾಲನೆ ಕಡ್ಡಾಯ!

ಎಮ್ಮೆ ಗುಂಡಿ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಕಾಡಾನೆ ದಾಳಿ ನಡೆಸಿದೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ.
ಕಾಡಾನೆ ಸೆರೆ ಹಿಡಿಯದ ಅರಣ್ಯ ಇಲಾಖೆ ಅಧಿಕಾರಿಗಳ ಬೇಜವಾಬ್ದಾರಿಯೇ ಘಟನೆಗೆ ಕಾರಣ, ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಇದನ್ನೂ ಓದಿ: ರಾಜ್ಯದ ಪೊಲೀಸ್ ಸಿಬ್ಬಂದಿಗಳ ಸ್ಲೋಚ್ ಕ್ಯಾಪ್ ಗೆ ಗುಡ್ ಬೈ; ಪೊಲೀಸ್ ಪೇದೆಗಳಿಗೆ ಹೊಸ ಟೋಪಿ












