ಚಿಕ್ಕಮಗಳೂರು: ಚಂದ್ರದ್ರೋಣ ಬೆಟ್ಟದಲ್ಲಿ ಕೇರಳದ ಬಾಲಕಿ ನಾಪತ್ತೆ

ಚಿಕ್ಕಮಗಳೂರು:  (ನ್ಯೂಸ್ ಮಲ್ನಾಡ್ ವರದಿ) ಕಾಫಿನಾಡಿನ ಪ್ರಸಿದ್ಧ ಚಂದ್ರದ್ರೋಣ ಪರ್ವತ ಶ್ರೇಣಿಯ ಚಾರಣಕ್ಕೆ ಬಂದಿದ್ದ ಕೇರಳ ಮೂಲದ 10ನೇ ತರಗತಿ ಬಾಲಕಿಯೊಬ್ಬಳು ನಾಪತ್ತೆಯಾಗಿರುವ ಘಟನೆ ನಡೆದಿದೆ. ನಾಪತ್ತೆಯಾದ ಬಾಲಕಿಯನ್ನು ಕೇರಳದ ಪಾಲಕ್ಕಾಡ್ ನಿವಾಸಿ ಶ್ರೀ ನಂದಾ ಎಂದು ಗುರುತಿಸಲಾಗಿದೆ.


ಇದನ್ನೂ ಓದಿ: ಆಸ್ತಿ ನೋಂದಣಿ ನಿಯಮಗಳಲ್ಲಿ ಮಹತ್ವದ ಬದಲಾವಣೆ; ಇನ್ಮುಂದೆ ಆಸ್ತಿ ರಿಜಿಸ್ಟ್ರೇಷನ್ ಗೆ ಈ ದಾಖಲೆಗಳು ಕಡ್ಡಾಯ!


ಕೇರಳದ ಪಾಲಕ್ಕಾಡ್‌ನಿಂದ ಸುಮಾರು 40 ಪ್ರವಾಸಿಗರ ತಂಡ ಚಿಕ್ಕಮಗಳೂರು ಜಿಲ್ಲೆಯ ಪ್ರೇಕ್ಷಣೀಯ ಸ್ಥಳಗಳ ವೀಕ್ಷಣೆಗೆ ಆಗಮಿಸಿತ್ತು. ಚಂದ್ರದ್ರೋಣ ಪರ್ವತ ಸಾಲಿನಲ್ಲಿ ಸಂಚರಿಸುತ್ತಿದ್ದ ವೇಳೆ ಬಾಲಕಿ ತಂಡದಿಂದ ಬೇರ್ಪಟ್ಟು ನಾಪತ್ತೆಯಾಗಿದ್ದಾಳೆ.

ಬಾಲಕಿ ನಾಪತ್ತೆಯಾದ ವಿಷಯ ತಿಳಿಯುತ್ತಿದ್ದಂತೆಯೇ ಎಚ್ಚೆತ್ತ ಜಿಲ್ಲಾಡಳಿತ, ತಡರಾತ್ರಿವರೆಗೂ ಹುಡುಕಾಟ ನಡೆಸಿದೆ. ಸುಮಾರು 30ಕ್ಕೂ ಹೆಚ್ಚು ಪೊಲೀಸ್, ಅಗ್ನಿಶಾಮಕ ದಳ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳು ರಾತ್ರಿ 1 ಗಂಟೆಯವರೆಗೆ ಬೆಟ್ಟದ ಮೂಲೆ ಮೂಲೆಗಳಲ್ಲಿ ಹುಡುಕಾಟ ನಡೆಸಿದರು. ಆದರೆ, ದಟ್ಟವಾದ ಮಂಜು ಮತ್ತು ಭಾರೀ ಕತ್ತಲು ಆವರಿಸಿದ್ದರಿಂದ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಸಿಬ್ಬಂದಿಗಳು ವಾಪಸ್ಸಾಗಿದ್ದರು.


ಇದನ್ನೂ ಓದಿ: 6 ರಾಶಿಗೆ ಪ್ರಗತಿಯ ಹಾದಿ ತೆರೆಯಲಿದೆ.. ಭರ್ಜರಿ ಲಕ್‌!


ಇಂದು ಮುಂಜಾನೆಯಿಂದಲೇ ಕಾರ್ಯಾಚರಣೆಯನ್ನು ಪುನರಾರಂಭಿಸಲಾಗಿದ್ದು, ಅರಣ್ಯ ಇಲಾಖೆ ಹಾಗೂ ಪೊಲೀಸರ ಜಂಟಿ ತಂಡಗಳು ಬೆಟ್ಟದ ತಪ್ಪಲಿನಲ್ಲಿ ಜಾಲಾಡುತ್ತಿವೆ. ದಟ್ಟ ಅರಣ್ಯ ಮತ್ತು ಕಡಿದಾದ ಪರ್ವತ ಪ್ರದೇಶವಾಗಿರುವುದರಿಂದ ಬಾಲಕಿಯನ್ನು ಪತ್ತೆ ಹಚ್ಚಲು ಡೋನ್ ಕ್ಯಾಮೆರಾಗಳನ್ನು ಬಳಸಲಾಗುತ್ತಿದೆ.

ಅಗ್ನಿಶಾಮಕ ದಳ ಮತ್ತು ಸ್ಥಳೀಯ ಅರಣ್ಯ ರಕ್ಷಕರು ವಿವಿಧ ತಂಡಗಳಾಗಿ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಶೋಧ ನಡೆಸುತ್ತಿದ್ದಾರೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.