ಕಳಸ/ಚಿಕ್ಕಮಗಳೂರು: ಕಾಡ್ಗಿಚ್ಚಿಗೆ ಸುಟ್ಟು ಕರಕಲಾದ ಅರಣ್ಯ: ಬೆಂಕಿ‌ ನಂದಿಸಲು‌ ಹರಸಾಹಸ

ಕಳಸ/ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹೊರನಾಡು ಸಮೀಪದ ಬಲಿಗೆ ಮತ್ತು ಮಾವಿನಹೊಲ ಗ್ರಾಮಗಳ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಈ ಬೆಂಕಿಯಿಂದ ಹತ್ತಾರು ಎಕರೆ ಅರಣ್ಯ ಸಂಪತ್ತು ಸುಟ್ಟು ಕರಕಲಾಗಿದೆ.


ಇದನ್ನೂ ಓದಿ: ಜಿಲ್ಲಾ ಡಿಸಿಸಿ ಬ್ಯಾಂಕ್‌ ನಲ್ಲಿ ಜಾಬ್‌ ಆಫರ್‌; ಆಕರ್ಷಕ ಸಂಬಳ, ಅರ್ಜಿ ಲಿಂಕ್‌ ಇಲ್ಲಿದೆ ನೋಡಿ


ಗುಡ್ಡ ಪ್ರದೇಶದಲ್ಲಿ ಬೆಂಕಿ ಹಬ್ಬಿದ ಪರಿಣಾಮ, ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸ್ಥಳೀಯರು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಅಗ್ನಿಶಾಮಕ ವಾಹನಗಳು ಹೋಗಲು ಸಾಧ್ಯವಿಲ್ಲದ ಸ್ಥಳಗಳಲ್ಲಿ, ಸೊಪ್ಪು ಮತ್ತು ಇತರ ಸಾದ್ಯವಾದ ಸಾಧನಗಳನ್ನು ಬಳಸಿಕೊಂಡು ಬೆಂಕಿ ನಂದಿಸುವ ಪ್ರಯತ್ನ ನಡೆಯುತ್ತಿದೆ.

ನಿನ್ನೆಯಷ್ಟೆ ಐತಿಹಾಸಿಕ ದೇವರು ಮನೆ ಗುಡ್ಡದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ಅರಣ್ಯ ಇಲಾಖೆಯ ಸಿಬ್ಬಂದಿ ತ್ವರಿತ ಕಾರ್ಯಾಚರಣೆಯ ಮೂಲಕ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.


ಇದನ್ನೂ ಓದಿ: ಈ ಬಾರಿ 10th ಪರೀಕ್ಷೆಯಲ್ಲಿ ಹೊಸ ರೂಲ್ಸ್!; ವಿದ್ಯಾರ್ಥಿಗಳಿಗೆ ಈ ನಿಯಮ ಕಡ್ಡಾಯ ಅಂದ್ರು ಶಿಕ್ಷಣ ಸಚಿವ


ಮುಳ್ಳಯ್ಯನಗಿರಿ, ದೇವರಮನೆ ಗುಡ್ಡದಲ್ಲಿ ಬೆಂಕಿ ನೆನ್ನೆ ತಡ ರಾತ್ರಿ ಕಿಡಿಗೇಡಿಗಳು ಹಚ್ಚಿದ ಬೆಂಕಿಯಿಂದ ಹತ್ತಾರು ಎಕರೆ ಶೋಲಾ ಹುಲ್ಲುಗಾವಲು ಪ್ರದೇಶ ಭಸ್ಮವಾಗಿದೆ.

ಕಳೆದ ವಾರವೂ ಕಿಡಿಗೇಡಿಗಳ ಕೃತ್ಯಕ್ಕೆ ನೂರಾರು ಎಕರೆ ಅರಣ್ಯ ಭಸ್ಮವಾಗಿದ್ದು, ಐತಿಹಾಸಿಕ ಸ್ಥಳದ ಸುರಕ್ಷತೆ ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದು ಈ ಪ್ರದೇಶದಲ್ಲಿ ನಿಗಾ ದಳವನ್ನು ಬಿಗಿಗೊಳಿಸಲಾಗಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.


ಇದನ್ನೂ ಓದಿ: ಪಂಪ್ಸೆಟ್ ಅಳವಡಿಕೆಗೆ ಸರ್ಕಾರದಿಂದ ಸಿಗಲಿದೆ ಶೇ.80% ರಷ್ಟು ಸಹಾಯಧನ!; ಈ ರೀತಿ ಅರ್ಜಿ ಸಲ್ಲಿಸಿ ಪಡೆಯಿರಿ


 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.