ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ಮಂಗನ ಕಾಯಿಲೆಗೆ ಕಾಫಿನಾಡು ಚಿಕ್ಕಮಗಳೂರಲ್ಲಿ ಮತ್ತೊಂದು ಬಲಿಯಾಗಿದೆ. ಕೊಪ್ಪ ತಾಲೂಕಿನ ಬಿಂತ್ರವಳ್ಳಿ ಗ್ರಾಮದ ರತ್ನ (68) ಎಂಬುವವರು ಮೃತಪಟ್ಟಿದ್ದಾರೆ.
ಇದನ್ನೂ ಓದಿ; ರೈತರ ಖಾತೆಗೆ ನೇರವಾಗಿ ಡಿಬಿಟಿ ಆಗಿದೆ ಬೆಳೆ ವಿಮೆ ಹಣ!; ನಿಮ್ಮ ಖಾತೆಗೆ ಹಣ ಬಂದಿದ್ಯಾ ಚೆಕ್ ಮಾಡಿ

ತೀವ್ರ ಜ್ವರದಿಂದ ಬಳಲುತ್ತಿದ್ದ ರತ್ನ ಅವರು ರಕ್ತ ಪರೀಕ್ಷೆಯಲ್ಲಿ ಮಂಗನ ಕಾಯಿಲೆ ಇರುವುದು ದೃಢವಾಗಿತ್ತು. ಈ ಹಿನ್ನೆಲೆ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಂಗನಕಾಯಿಲೆಗೆ ಮತ್ತೊಂದು ಬಲಿಯನ್ನು ಪಡೆದಂತೆ ಆಗಿದ್ದು, ಇದೀಗ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 4 ಕ್ಕೆ ಏರಿಕೆ ಆಗಿದೆ.
ಇದನ್ನೂ ಓದಿ; ರಾಜ್ಯದ ರೈತರೇ ಗಮನಿಸಿ; ಕೃಷಿ ಸಾಲದ ಮೇಲಿನ ಬಡ್ಡಿ ಮನ್ನಾಗೆ ದಿನಾಂಕ ವಿಸ್ತರಣೆ
ಮಲೆನಾಡು ಭಾಗದಲ್ಲಿ ದಿನದಿಂದ ದಿನಕ್ಕೆ ಮಂಗನಕಾಯಿಲೆ ಹೆಚ್ಚುತ್ತಿದ್ದು, ಕೊಪ್ಪ , ಎನ್.ಆರ್.ಪುರ, ಶೃಂಗೇರಿ ತಾಲೂಕಿನಲ್ಲಿ ಕಾಯಿಲೆ ಹೆಚ್ಚುತ್ತಿದೆ. ಸದ್ಯ ಆಸ್ಪತ್ರೆಯಲ್ಲಿ 11 ಕೆ.ಎಫ್.ಡಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಬಾಳೆಹೊನ್ನೂರು: ಪ್ರಧಾನಿ ಮೋದಿಗಾಗಿ 102 ವರ್ಷದ ಶತಾಯುಷಿ ಅಜ್ಜಿಯ ಟೆಂಪಲ್ ರನ್
ಬಾಳೆಹೊನ್ನೂರು: (ನ್ಯೂಸ್ ಮಲ್ನಾಡ್ ವರದಿ) ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ತಿಮ್ಲಾಪುರ ಗ್ರಾಮದ ಶಿವಮ್ಮ ಎಂಬ 102 ವರ್ಷದ ಅಜ್ಜಿ ಪ್ರಧಾನಿ ಮೋದಿಗಾಗಿ ಟೆಂಪಲ್ ರನ್ ಮಾಡುತ್ತಿದ್ದಾರೆ.
ಇದನ್ನೂ ಓದಿ; ಗೃಹಜ್ಯೋತಿ ಯೋಜನೆಯ ಫಲಾನುಭವಿಗಳಿಗೆ ಬಿಗ್ ಶಾಕ್; ಇನ್ಮುಂದೆ ಇಂತಹವರಿಗೆ ಇಲ್ಲ ಫ್ರೀ ಕರೆಂಟ್
ಜೈ ಶ್ರೀರಾಮ್… ದೇಶಕ್ಕೆ ಒಳ್ಳೆದಾಗಬೇಕು, ಮಳೆ-ಬೆಳೆ ಚೆನ್ನಾಗಿ ಆಗಬೇಕು. ಮೋದಿ ಮತ್ತೆ ಪ್ರಧಾನ ಮಂತ್ರಿ ಆಗಬೇಕು. ಮೋದಿ ದೇಶಕ್ಕೆ ಒಳ್ಳೆದು ಮಾಡ್ತಾನೆ, ಅವನು ಬಂದ್ರೆ ಒಳ್ಳೆದಾಗುತ್ತೆ ಎನ್ನುತ್ತಾ ಬಾಳೆಹೊನ್ನೂರಿನ ರಂಭಾಪುರಿ ಮಠಕ್ಕೆ ಭೇಟಿ ನೀಡಿದ್ದಾರೆ.
ಇದನ್ನೂ ಓದಿ; ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟದ ಹಿಂದಿದ್ದಾರೆ ಮಲೆನಾಡಿನ ಇಬ್ಬರು; ಟೋಪಿಯಲ್ಲಿದ್ದ ಕೂದಲಿನಿಂದ ಸಿಕ್ಕಿತು ಮಹತ್ವದ ಸುಳಿವು
ರಂಭಾಪುರಿ ಶ್ರೀಗಳ ದರ್ಶನ ಮಾಡಿ ಆಶೀರ್ವಾದ ಪಡೆದ ಶಿವಮ್ಮ ಮಳೆ-ಬೆಳೆ ಇಲ್ಲ, ದೇಶದ ಜನ ಸಮಸ್ಯೆಯಲ್ಲಿದ್ದಾರೆ. ಕಾಡು ಪ್ರಾಣಿಗಳು ಕುಡಿಯೋಕೆ ನೀರಿಲ್ಲದೆ ಪರದಾಡುತ್ತಿವೆ. ದೇಶಕ್ಕೆ ಮೋದಿ ಪ್ರಧಾನಿಯಾದರೆ ಮಳೆ-ಬೆಳೆ ಆಗಿ ದೇಶ ಸುಭಿಕ್ಷವಾಗಿರುತ್ತೆ. ನನ್ನ ಸ್ವಾರ್ಥಕ್ಕಾಗಿ ಏನೂ ಇಲ್ಲ… ಸ್ವಾರ್ಥಕ್ಕೆ ಹೇಳ್ತಿಲ್ಲ. ದೇವರ ಬಳಿ ನನಗಾಗಿ ಏನನ್ನು ಕೇಳಿಕೊಂಡಿಲ್ಲ, ದೇಶ, ಮೋದಿಗಾಗಿ ಬೇಡಿದ್ದೇನೆ ಎಂದು ಮೋದಿಗಾಗಿ ಮಗನ ಜೊತೆ ದೇವಾಲಯಗಳನ್ನ ಸುತ್ತುತ್ತಿರೋ ಶಿವಮ್ಮ ಹೇಳಿದ್ದಾರೆ.
ಇದನ್ನೂ ಓದಿ; ಉಚಿತ ಅಣಬೆ ಬೇಸಾಯ ತರಬೇತಿ ಪಡೆಯಲು ಅರ್ಜಿ ಆಹ್ವಾನ!; ಕೂಡಲೇ ಅರ್ಜಿ ಸಲ್ಲಿಸಿ
ಮಲೆಮಹದೇಶ್ವರ ಬೆಟ್ಟಕ್ಕೂ ಭೇಟಿ ನೀಡಿದ್ದ ಶಿವಮ್ಮ ಬಾಳೆಹೊನ್ನೂರಿನ ರಂಭಾಪುರಿ ಮಠಕ್ಕೆ ಆಗಮಿಸಿದ್ದಾರೆ.












