
ಕೊಪ್ಪದಲ್ಲಿ ₹10 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಪ್ರಕರಣ ಪತ್ತೆ



ಕೊಪ್ಪ:(ನ್ಯೂಸ್ ಮಲ್ನಾಡ್ ವರದಿ) ಪೊಲೀಸ್ ಠಾಣಾ ವ್ಯಾಪ್ತಿಯ ಗುಣವಂತೆ ಗ್ರಾಮದ ಚೋಳಕೊಪ್ಪ ನಿವಾಸಿ ಪ್ರಮೋದ್ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮೂಡಿಗೆರೆ ತಾಲೂಕಿನ ಗಾಂಧಿ ಗ್ರಾಮದ ಪ್ರವೀಣ್ ಬಿನ್ ಜಯರಾಮ್ (39) ಎಂಬಾತನು ಚಿನ್ನಾಭರಣಗಳನ್ನು ಕಳ್ಳತನ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ಈ ಸಂಬಂಧ ಕೊಪ್ಪ ಪೊಲೀಸ್ ಠಾಣೆಯಲ್ಲಿ ಮೊ.ನಂ. 72/2026, ಕಲಂ 306ರಂತೆ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ, ಸುಮಾರು ₹10 ಲಕ್ಷ ಮೌಲ್ಯದ 76 ಗ್ರಾಂ ತೂಕದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಕೊಪ್ಪ ಪಿಎಸ್ಐ ಮಧು ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು.