
ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ಚಾಲಕನ ನಿಯಂತ್ರಣ ತಪ್ಪಿ ಮಾರುತಿ ಸುಜುಕಿ ಬ್ರೇಝ್ ಕಾರೊಂದು ಪಲ್ಟಿಯಾಗಿರುವ ಘಟನೆ ಕೊಪ್ಪ ತಾಲೂಕಿನ ಅಗಳಗಂಡಿ ಗ್ರಾ.ಪಂ. ವ್ಯಾಪ್ತಿಯ ಹೆಗ್ಗಾರುಕೊಡಿಗೆ ಸಮೀಪ ಶೃಂಗೇರಿ – ಹೊರನಾಡು ಮುಖ್ಯ ರಸ್ತೆಯಲ್ಲಿ ನಡೆದಿದೆ.
ಇದನ್ನೂ ಓದಿ: 1ಲಕ್ಷ ಹೂಡಿಕೆ ಮಾಡಿದ್ರೆ ಸಿಗುತ್ತೆ 2ಲಕ್ಷ…!; ಅಂಚೆ ಅಚೇರಿಯಲ್ಲಿದೆ ಭರ್ಜರಿ ಸ್ಕೀಮ್

ಬೆಂಗಳೂರು ಮೂಲದ ಪ್ರವಾಸಿಗರು ಶೃಂಗೇರಿಯಿಂದ ಹೊರನಾಡಿಗೆ ತೆರಳುವಾಗ ಕಾರು ಚಾಲಕನ ನಿಯಂತ್ರಣ ತಪ್ಪಿ ಸುಮಾರು 60 ಅಡಿ ಆಳಕ್ಕೆ ಬಿದ್ದಿದೆ. ಸದ್ಯ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಹೆಗ್ಗಾರು ಕುಡಿಗೆಯಲ್ಲಿ ಈ ಹಿಂದೆ ಸುರಿದ ಮಳೆಗೆ ರಸ್ತೆ ಕುಸಿದಿದ್ದು, ಅದರ ತಡೆಗೋಡೆ ಕಾಮಗಾರಿ ಪ್ರಗತಿ ಹಂತದಲ್ಲಿದೆ. ಸರಿಯಾದ ಸೂಚನಾ ಫಲಕ ಹಾಕದೆ ಇರುವ ಕಾರಣ ಈ ಅಪಘಾತಕ್ಕೆ ಕಾರಣವಾಗಿದೆ ಎಂದು ಸ್ಥಳೀಯರು ದೂರಿದ್ದಾರೆ.
ಇದನ್ನೂ ಓದಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಜಾಬ್; ವಿದ್ಯಾರ್ಹತೆ ಡಿಟೈಲ್ಸ್ ಇಲ್ಲಿದೆ ನೋಡಿ













