
ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ಕೃಷಿ ಹೊಂಡಕ್ಕೆ ಹಾರಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕುದುರೆಗುಂಡಿ ಸಮೀಪ ನಡೆದಿದೆ. ಮತ್ತುಗದಾನಿಯ ಶ್ರೀಧರ್(49) ಆತ್ಮಹತ್ಯೆ ಮಾಡಿಕೊಂಡ ರೈತ.
ಇದನ್ನೂ ಓದಿ: ಶಾಲಾ ಶಿಕ್ಷಕರು, ಸಿಬ್ಬಂದಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್; ಸರ್ಕಾರದ ಈ ಆದೇಶ ನೋಡಿ

ಕೆಸವೆ ಪಿಎಸಿಎಸ್‌ನಲ್ಲಿ ಸುಮಾರು ಒಂದು ಲಕ್ಷ ರೂ. ಸಾಲ ಮಾಡಿದ್ದು, ತಮ್ಮ ಜಮೀನಿನ ಕೃಷಿ ಹೊಂಡಕ್ಕೆ ಹಾರಿ ಶನಿವಾರ ಸಂಜೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಭಾನುವಾರ ಕೊಪ್ಪ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ್ದು, ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: 10th ಹಾಗೂ PUC ವಿದ್ಯಾರ್ಥಿಗಳ ಗಮನಕ್ಕೆ; 40,000 ಸ್ಕಾಲರ್ ಶಿಪ್ ಗೆ ಹೀಗೆ ಅರ್ಜಿ ಸಲ್ಲಿಸಿ













