ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ಕಾಡಾನೆ ದಾಳಿಗೆ ರೈತರೊಬ್ಬರು ಬಲಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಸೀತೂರು ಗ್ರಾಮ ಪಂಚಾಯತಿ ಹಿಂಭಾಗ ನಡೆದಿದೆ. ಕೆರೆಗದ್ದೆ ನಿವಾಸಿ ಉಮೇಶ್ (55) ಸಾವು ಕಾಡಾನೆ ದಾಳಿಗೆ ಬಲಿಯಾಗಿರುವ ರೈತ.
ಇದನ್ನೂ ಓದಿ; ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಜಾಬ್ ಆಫರ್; 10th ಪಾಸ್ ಆದವರು ಅರ್ಜಿ ಸಲ್ಲಿಸಿ

ಕಳೆದ ಒಂದು ವಾರದಿಂದ ಮೂರು ಕಾಡಾನೆಗಳ ಹಿಂಡು ಸೀತೂರಿನಲ್ಲಿ ಸಂಚಾರ ಮಾಡುತ್ತಿದ್ದು, ಅಪಾರ ಪ್ರಮಾಣದ ಬೆಳೆ ನಷ್ಟ ಮಾಡಿತ್ತು. ಇದೀಗ ಉಮೇಶ್ ಎನ್ನುವವರ ಮೇಲೆ ಏಕಾಏಕಿ ದಾಳಿ ಮಾಡಿದೆ. ಎನ್. ಆರ್ ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಈ ನಡೆದಿದೆ.
ಕೆಲವು ದಿನದ ಹಿಂದೆ ಸಹ ಇದೇ ಸೀತೂರಿನ ಕೃಷ್ಣೆಗೌಡ್ರು ಎಂಬುವವರ ತೋಟಕ್ಕೆ ಆನೆಗಳು ನುಗ್ಗಿ ಸುಮಾರು 50 ಕ್ಕೂ ಹೆಚ್ಚು ಅಡಿಕೆ ಮರಗಳನ್ನ ನಾಶ ಮಾಡಿದ್ದವು ಆದರೆ ಅರಣ್ಯ ಇಲಾಖೆ ಹಾಗೂ ಜನಪ್ರತಿನಿಧಿಗಳು ಈ ಬಗ್ಗೆ ಕ್ರಮ ವಹಿಸಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಇದನ್ನೂ ಓದಿ; ಇ-ಖಾತೆ ಪಡೆಯುವವರಿಗೆ ಮುಖ್ಯ ಮಾಹಿತಿ; ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್












