ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹರಿಹರಪುರದ ಶ್ರೀ ಮಠದ ಆವರಣದಲ್ಲಿ ಫೆಬ್ರವರಿ 25 ಭಾನುವಾರದಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಉಚಿತ ದಂತ ಪಂಕ್ತಿ ಜೋಡಣಾ ಶಿಬಿರ ಆಯೋಜಿಸಲಾಗಿದೆ ಎಂದು ಕೊಪ್ಪ ಸರ್ಕಾರಿ ಆಸ್ಪತ್ರೆಯ ದಂತ ಆರೋಗ್ಯ ಅಧಿಕಾರಿ ಡಾ. ಗಾನವಿ ತಿಳಿಸಿದ್ದಾರೆ.
ಇದನ್ನೂ ಓದಿ; ಪ್ರೊಬೆಷನರಿ ನೌಕರರನ್ನು ಏಕಾಏಕಿ ವಜಾ ಮಾಡುವಂತಿಲ್ಲ: ಹೈಕೋರ್ಟ್ ಆದೇಶ

ಸಂಪೂರ್ಣ ದಂತ ಪಂಕ್ತಿ ಕಳೆದುಕೊಂಡಿರುವ 45 ವರ್ಷ ಮೇಲ್ಪಟ್ಟ ಬಿಪಿಎಲ್ ಕಾಡುದಾರರ ಫಲಾನುಭವಿಗಳಿಗೆ ಉಚಿತ ದಂತ ಪಂಕ್ತಿ ಜೋಡಣೆಯನ್ನು ಮಾಡಲಾಗುವುದು. ಶಿಬಿರದಲ್ಲಿ 50 ಕ್ಕೂ ಹೆಚ್ಚು ನುರಿತ ವೈದ್ಯರು ಹಾಗೂ ಇತರೆ ವೈದ್ಯಕೀಯ ಸಿಬ್ಬಂದಿಗಳು ಭಾಗವಹಿಸಲಿದ್ದು, ಜಿಲ್ಲೆಯ ನಾಗರೀಕರು ಇದರ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಹಾಗೂ ಜಿಲ್ಲಾ ಕಾರ್ಯಕ್ರಮ ಅಧಿಕಾರಿಗಳು, ಒರಲ್ ಹೆಲ್ತ್ ಪಾಲಿಸಿ ಮತ್ತು ದಂತ ಆರೋಗ್ಯ ಚಿಕ್ಕಮಗಳೂರು ಇವರು ತಿಳಿಸಿದ್ದಾರೆ.
ಇದನ್ನೂ ಓದಿ; ಗಮನಿಸಿ; ಈ ಕಾರ್ಡ್ ನಲ್ಲಿ 5 ಲಕ್ಷ ಉಚಿತ ಚಿಕಿತ್ಸೆ; ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ
ಫಲಾನುಭವಿಗಳು ಫೆಬ್ರವರಿ 17 ರ ಒಳಗಾಗಿ ತಮ್ಮ ತಾಲೂಕಿನ ಸರ್ಕಾರಿ ಆಸ್ಪತ್ರೆಯ ದಂತ ಆರೋಗ್ಯ ಅಧಿಕಾರಿಗಳನ್ನು ಭೇಟಿ ಮಾಡಿ ಹೆಸರು ನೋಂದಾಯಿಸಿಕೊಳ್ಳಬಹುದು. ಮೊದಲು ಬಂದ ಐವತ್ತು ಜನರಿಗೆ ಆದ್ಯತೆ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಬೈಕ್ ಚಲಾಯಿಸಿದ ಅಪ್ರಾಪ್ತ ಬಾಲಕ | ತಾಯಿಗೆ 30 ಸಾವಿರ ದಂಡ!
ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಅಪ್ರಾಪ್ತ ಬಾಲಕನಿಗೆ ಬೈಕ್ ಚಲಾಯಿಸಲು ಕೊಟ್ಟ ಬಾಲಕನ ತಾಯಿಗೆ 30 ಸಾವಿರ ರೂಪಾಯಿ ದಂಡ ವಿಧಿಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಇದನ್ನೂ ಓದಿ; ರಾಜ್ಯದ ರೈತರಿಗೆ ಗುಡ್ ನ್ಯೂಸ್; ಬರಪರಿಹಾರದ ಹಣ ಜಮಾ; ನಿಮಗೂ ಬಂತಾ ಹಣ, ಹೀಗೆ ಚೆಕ್ ಮಾಡಿ
2024 ರ ಜನವರಿ 30 ರಂದು ಶಿವಮೊಗ್ಗ ಪೂರ್ವ ಸಂಚಾರಿ ಠಾಣೆ ಪಿ.ಎಸ್.ಐ ನವೀನ್ ಕುಮಾರ್ ಮಠಪತಿ ಅವರು ಶಿವಮೊಗ್ಗ ನಗರದ ಎಸ್ ಪಿ.ಎಂ ರಸ್ತೆಯ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಹತ್ತಿರ ವಾಹನ ತಪಾಸಣೆ ಮಾಡುತ್ತಿದ್ದ ವೇಳೆಯಲ್ಲಿ 17 ವರ್ಷದ ಅಪ್ರಾಪ್ತ ಬಾಲಕ ಯಾವುದೇ ಚಾಲನಾ ಪರವಾನಗಿ ಪತ್ರವಿಲ್ಲದೆ ದ್ವಿಚಕ್ರ ವಾಹನ ಚಲಾಯಿಸುತ್ತಿರುವುದು ಕಂಡು ಬಂದಿದ್ದು, ಇದನ್ನ ಗಮನಿಸಿದ ಪಿ.ಎಸ್.ಐ ಅಪ್ರಾಪ್ತನಿಗೆ ವಾಹನವನ್ನು ಚಾಲನೆ ಮಾಡಲು ಅವಕಾಶ ನೀಡಿದ ಬಾಲಕನ ತಾಯಿ ವಿರುದ್ಧ ಶಿವಮೊಗ್ಗ ಪೂರ್ವ ಸಂಚಾರಿ ಪೊಲೀಸ್ ಠಾಣೆಯಲ್ಲಿ ಲಘು ಪ್ರಕರಣವನ್ನು ದಾಖಲಿಸಿದ್ದರು. ಪ್ರಕರಣ ಸಂಬಂಧ ಘನ ನ್ಯಾಯಾಲಯಕ್ಕೆ ದೋಷಾರೋಪಣಾ ವರದಿಯನ್ನು ಸಲ್ಲಿಸಿದ್ದರು.
ಇದೀಗ ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ವಾಹನ ಓಡಿಸಲು ಅವಕಾಶ ನೀಡಿದ ಬಾಲಕನ ತಾಯಿಗೆ ಶಿವಮೊಗ್ಗ ಜಿಲ್ಲಾ ನ್ಯಾಯಾಲಯ 30 ಸಾವಿರ ರೂ ದಂಡ ವಿಧಿಸಿದೆ.












