ಕೊಪ್ಪ: ಹಗಲು ದರೋಡೆ ಕೇಂದ್ರ ವಾಗಿದೆ ಸರ್ಕಾರಿ ಕಚೇರಿಗಳು | ಸರ್ಕಾರದ ವಿರುದ್ಧ ಜೀವರಾಜ್ ಆರೋಪ

ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ರಾಜ್ಯ ಸರ್ಕಾರದ ಕಾರ್ಯವೈಖರಿ ಖಂಡಿಸಿ ಹಾಗೂ ಕ್ಷೇತ್ರದ ಸರ್ಕಾರಿ ಕಛೇರಿಗಳಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪಿಸಿ ಬಿಜೆಪಿ ವತಿಯಿಂದ ಬಸ್ ನಿಲ್ದಾಣ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

 

ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-25.10.2023

ಪಟ್ಟಣ ಪಂಚಾಯಿತಿ, ನಗರ ಸಭೆಗೆ ಅಧ್ಯಕ್ಷರನ್ನು ಆಯ್ಕೆ ಮಾಡಲು ಸರ್ಕಾರಕ್ಕೆ ಆಗಿಲ್ಲ. ಕಾಂಗ್ರೆಸ್ ಸದಸ್ಯರಿಲ್ಲದಿದ್ದರಿಂದ ಅಧ್ಯಕ್ಷರ ಮೀಸಲಾತಿ ಪಟ್ಟಿ ಮಾಡಿಲ್ಲ. ಮುಖ್ಯಾಧಿಕಾರಿ ಮೂಲಕ ದಂಧೆ ಮಾಡಲು ತೊಡಗಿದ್ದಾರೆ ಎಂದು ಮಾಜಿ ಶಾಸಕ ಜೀವರಾಜ್ ಆರೋಪಿಸಿದರು. ಅಧಿಕಾರಕ್ಕೆ ಬಂದು ೫ ತಿಂಗಳಾಗಿದ್ದರೂ ಅಕ್ರಮ ಸಕ್ರಮ ಸಮಿತಿ ರಚನೆಯಾಗಿಲ್ಲ. ನಾವು ಕೊಟ್ಟಿರುವ ಸಾಗುವಳಿ ಚೀಟಿಗೆ ಪಹಣಿ ಮಾಡಿಕೊಟ್ಟಿಲ್ಲ. ಜನರಿಗೆ ಹಕ್ಕುಪತ್ರ ಕೊಡಲು ವಿಫಲರಾಗಿದ್ದಾರೆ. ಬಿಜೆಪಿ ನೇತೃತ್ವದ ಸರ್ಕಾರ ಇದ್ದಾಗ ವಿವಿಧ ಸಮುದಾಯಗಳಿಗೆ ಬಿಡುಗಡೆ ಮಾಡಿದ್ದ ಹಣವನ್ನು ಕೊಡಿಸುವ ಕೆಲಸವನ್ನು ಶಾಸಕರು ಮಾಡಬೇಕು ಎಂದು ಒತ್ತಾಯಿಸಿದರು.

 

ಇದನ್ನೂ ಓದಿ; ತುಸು ಏರಿದ ಚಿನ್ನದ ಬೆಲೆ; ಬೆಳ್ಳಿಯೂ ತುಸು ಅಗ್ಗ; ಇಲ್ಲಿದೆ ಇವತ್ತಿನ ದರಪಟ್ಟಿ

ಭ್ರಷ್ಟಾಚಾರ ಪದಕ್ಕೆ ನಮ್ಮ ಶಾಸಕರು ಟಿಪ್ಸ್ ಎಂಬ ಹೊಸ ವ್ಯಾಖ್ಯಾನ ನೀಡಿದ್ದಾರೆ. ಟಿಪ್ಸ್ ಎಂಬುದೂ ಭ್ರಷ್ಟಾಚಾರ ವ್ಯಾಪ್ತಿಗೆ ಬರುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿರುವುದು ಶಾಸಕರಿಗೆ ಗೊತ್ತಿಲ್ಲ. ಭಗವಾನ್ ಅವರು ಹಿಂದೂ ಧರ್ಮ, ಒಕ್ಕಲಿಗರನ್ನು ಅವಹೇಳನ ಮಾಡಿದ್ದಾರೆ. ಅವರು ಸಿದ್ದರಾಮಯ್ಯನವರ ದುಷ್ಟಕೂಟದ ಸದಸ್ಯ, ರಾಜ್ಯ ಕಾಂಗ್ರೆಸ್ ಇಂಡಿಯಾ ಒಕ್ಕೂಟಕ್ಕೆ ಹಣ ಸಂಗ್ರಹಿಸಿಕೊಡುವ ಭ್ರಷ್ಟ ಸರ್ಕಾರವಾಗಿದೆ ಎಂದು .ಮುಖಂಡ ರಾಮಸ್ವಾಮಿ ಆರೋಪಿಸಿದರು.

 

ಗೃಹಲಕ್ಷ್ಮಿ ಹಣ ಕೇವಲ 1 ತಿಂಗಳು ಬಂದಿದ್ದು, ಎರಡನೇ ತಿಂಗಳಲ್ಲಿ ದೃಢೀಕರಣ ಮೆಸೇಜ್ ಮಾತ್ರ ಬಂದಿದೆ. ಕ್ಷೇತ್ರದ ಶಾಸಕರು 3 ತಾಲ್ಲೂಕನ್ನು ಬರಪೀಡಿತ ಪಟ್ಟಿಗೆ ಸೇರಿಸಲು ವಿಫಲರಾಗಿದ್ದಾರೆ ಎಂದು ಮುಖಂಡ ಜೆ. ಪುಣ್ಯಪಾಲ್ ಟೀಕಿಸಿದರು.

ಇನ್ನು ಪುರಭವನದಿಂದ ಬಸ್ ನಿಲ್ದಾಣದವರೆಗೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಸರ್ಕಾರ, ಕ್ಷೇತ್ರದ ಶಾಸಕರ ವಿರುದ್ಧ ಧಿಕ್ಕಾರ ಕೂಗಿದರು. ಮಂಡಲ ಪ್ರಧಾನ ಕಾರ್ಯದರ್ಶಿ ಕೆಸವೆ ರಾಘವೇಂದ್ರ, ಎಂ.ಕೆ. ಕಿರಣ್ ಮಡಬಳ್ಳಿ, ಕಸಬಾ ಹೋಬಳಿ ಘಟಕದ ಅಧ್ಯಕ್ಷ ರೇವಂತ್, ಮೇಗುಂದಾ ಘಟಕದ ಅಧ್ಯಕ್ಷ ಸಂತೋಷ್ ಅರೆನೂರು, ಹರಿಹರಪುರ ಘಟಕದ ಅಧ್ಯಕ್ಷ ಅಜಿತ್, ಮಣಿಕಂಠನ್ ಕಂದಸ್ವಾಮಿ, ಮಹಿಳಾ ಮೋರ್ಚಾದ ಪದಾಧಿಕಾರಿಗಳು, ಪಟ್ಟಣ ಪಂಚಾಯಿತಿ ಬಿಜೆಪಿ ಸದಸ್ಯರು ಇದ್ದರು.

 

Khandya Temple: ಹುಲಿ ಉಗುರು ಧರಿಸಿದ್ದ ಆರೋಪದಡಿ ದೇವಸ್ಥಾನದ ಅರ್ಚಕರಿಬ್ಬರ ಬಂಧನ

ಬಾಳೆಹೊನ್ನೂರು: (ನ್ಯೂಸ್ ಮಲ್ನಾಡ್ ವರದಿ) ಹುಲಿ ಉಗುರಿನ ಡಾಲರ್ ಹಾಕಿಕೊಂಡಿದ್ದ ಆರೋಪದ ಮೇಲೆ ದೇವಸ್ಥಾನದ ಪ್ರಧಾನ ಅರ್ಚಕರಿಬ್ಬರನ್ನು ಬಂಧಿಸಿರುವ ಘಟನೆ ಚಿಕ್ಕಮಗಳೂರು ತಾಲ್ಲೂಕಿನ ಖಾಂಡ್ಯದಲ್ಲಿ ನಡೆದಿದೆ.

ಬಾಳೆಹೊನ್ನೂರು ಸಮೀಪದ ಖಾಂಡ್ಯಾದ ಪ್ರಸಿದ್ಧ ಮಾರ್ಕಾಂಡೇಶ್ವರ ಸ್ವಾಮಿ ದೇವಾಲಯದ ಅರ್ಚಕರಾದ ಕೃಷ್ಣಾನಂದ ಹೊಳ್ಳ ಹಾಗೂ ನಾಗೇಂದ್ರ ಜೋಯಿಸ್ ಬಂಧಿತರು. ಸದ್ಯ ಇಬ್ಬರನ್ನು ಅರಣ್ಯ ಇಲಾಖೆ ತೀವ್ರ ವಿಚಾರಣೆ ನಡೆಸುತ್ತಿದೆ. ಬಂಧಿತರಿಂದ ಮೂರು ಹುಲಿ ಉಗುರು ವಶಕ್ಕೆ ಪಡೆಯಲಾಗಿದೆ. ಇಬ್ಬರು ಅರ್ಚಕರ ವಿರುದ್ಧ ಬಾಳೆಹೊನ್ನೂರು ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಹಿಂದೆ ಇಬ್ಬರನ್ನು ಬಂಧಿಸಿದ್ದ ಅರಣ್ಯ ಇಲಾಖೆ

ಹುಲಿ ಉಗುರು ಧರಿಸಿದ್ದ ಆರೋಪದಡಿ ಮೂಡಿಗೆರೆ ತಾಲೂಕಿನ ಇಬ್ಬರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದರು. ತಾಲೂಕಿನ ಬಿ.ಹೊಸಳ್ಳಿಯ ಕುಂಡ್ರ ನಿವಾಸಿ ಸತೀಶ್ ಮತ್ತು ಹುಲ್ಲೇ ಮನೆ ಕುಂದೂರು ನಿವಾಸಿ ರಂಜಿತ್ ರನ್ನು ಬಂಧಿಸಲಾಗಿತ್ತು.

ಹುಲಿ ಉಗುರು ಧರಿಸಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆ ಸಿಬ್ಬಂದಿ ಮೂಡಿಗೆರೆ ಕಡೆಯಿಂದ ಚಿಕ್ಕಮಗಳೂರಿಗೆ ಪ್ರಯಾಣಿಸುತ್ತಿದ್ದ ಸತೀಶ್‌ನನ್ನು ಚಿಕ್ಕಮಗಳೂರು ಸಮೀಪದ ಮತ್ತಾವರ ಅರಣ್ಯ ಮಾಹಿತಿ ಕೇಂದ್ರದ ಬಳಿ ತಡೆದು ಬಂಧಿಸಿದ್ದರು.

ಸತೀಶ್ ಕುತ್ತಿಗೆಗೆ ಧರಿಸಿದ್ದ ಬೆಳ್ಳಿ ಸರದಲ್ಲಿ ಹುಲಿ ಉಗುರು ಇರುವುದು ಪತ್ತೆಯಾಗಿದೆ. ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದಾಗ ಹುಲಿ ಉಗುರನ್ನು ತನಗೆ ಮೂಡಿಗೆರೆ ತಾಲೂಕಿನ ಹುಲ್ಲೇ ಮನೆ ಕುಂದೂರು ನಿವಾಸಿ ರಂಜಿತ್ ನೀಡಿದ್ದು ಎಂದು ಮಾಹಿತಿ ನೀಡಿದ್ದನು. ನಂತರ ರಂಜಿತ್‌ನನ್ನು ಹುಲ್ಲೇ ಮನೆಯ ನಿವಾಸದಲ್ಲಿ ಅರಣ್ಯ ಅಧಿಕಾರಿಗಳು ವಶಕ್ಕೆ ಪಡೆದಿದ್ದರು.

ವ್ಯಕ್ತಿಯೊಬ್ಬರು ದೂರು ನೀಡಿದ ಆಧಾರದ ಮೇರೆಗೆ ರಾಜರಾಜೇಶ್ವರಿ ನಗರದ ಬಳಿ ರಿಯಾಲಿಟಿ ಶೋ ನಡೆಯುತ್ತಿದ್ದ ಬಿಗ್‌ಬಾಸ್​ ಮನೆಗೆ ಭಾನುವಾರ ರಾತ್ರಿ ತೆರಳಿದ್ದ ಅರಣ್ಯಾಧಿಕಾರಿಗಳು ಸಂತೋಷ್ ಅವರನ್ನು ವಶಕ್ಕೆ ಪಡೆದಿದ್ದರು. ಸದ್ಯ ವರ್ತೂರು ಸಂತೋಷ್​ನನ್ನು​ ಅರಣ್ಯಾಧಿಕಾರಿಗಳು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿದ್ದಾರೆ. ವರ್ತೂರು ಸಂತೋಷ್ ಬಂಧನದ ಬೆನ್ನಲ್ಲೇ ರಾಜ್ಯಾದ್ಯಂತ ಅರಣ್ಯ ಇಲಾಖೆ ಹುಲಿ ಉಗುರು ಧರಿಸಿದವರ ಮೇಲೆ ಕ್ರಮ ಕೈಗೊಳ್ಳಲು ಸಜ್ಜಾಗಿದೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.