ಕೊಪ್ಪ: ದತ್ತ ಜಯಂತಿ ಅಂಗವಾಗಿ ಡಿ.11ಕ್ಕೆ ಹಿಂದೂ ಸಂಗಮ ಬೃಹತ್ ಶೋಭಾಯಾತ್ರೆ

ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ದತ್ತ ಜಯಂತಿ ಅಂಗವಾಗಿ ವಿಶ್ವ ಹಿಂದೂ ಪರಿಷತ್‌-ಬಜರಂಗದಳ ಕೊಪ್ಪ ಪ್ರಖಂಡ ಇವರ ವತಿಯಿಂದ ಹಿಂದೂ ಸಂಗಮ ಬೃಹತ್ ಶೋಭಾಯಾತ್ರೆಯನ್ನು ಇದೇ ಬುಧವಾರ (11-12-2024) ಹಮ್ಮಿಕೊಳ್ಳಲಾಗಿದೆ ಎಂದು ವಿನಯ್ ಶಿವಪುರ ತಿಳಿಸಿದ್ದಾರೆ.


ಇದನ್ನೂ ಓದಿ; ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್; ಅನ್ನಚಕ್ರ ಯೋಜನೆಗೆ ಚಾಲನೆ!, ಏನಿದು ಯೋಜನೆ, ಇಲ್ಲಿದೆ ನೋಡಿ ಡಿಟೈಲ್ಸ್


ಬುಧವಾರ ಸಂಜೆ 4-30ರ ಸುಮಾರಿಗೆ ಕೊಪ್ಪದ ಕುವೆಂಪು ವೃತ್ತದಿಂದ ಬಸ್‌ ನಿಲ್ದಾಣದವರೆಗೆ ಬೃಹತ್ ಶೋಭಾಯಾತ್ರೆ ನಡೆಯಲಿದ್ದು, ಸಂಜೆ 5 ಗಂಟೆಗೆ ಕೊಪ್ಪ ಬಸ್‌ ನಿಲ್ದಾಣದ ಆವರಣದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ.

ಈ ಕಾರ್ಯಕ್ರಮಕ್ಕೆ ದಿಕ್ಕೂಚಿ ಭಾಷಣಕಾರರಾಗಿ ಹಿಂದೂಪರ ಹೋರಾಟಗಾರರಾದ ಪುನೀತ್ ಕೆರೆಹಳ್ಳಿ ಆಗಮಿಸಲಿದ್ದಾರೆ.


ಇದನ್ನೂ ಓದಿ; ರಾಜ್ಯದ ಕಾರ್ಮಿಕರೇ ಗಮನಕ್ಕೆ; ನೋಂದಣಿಗೆ ಅರ್ಜಿ ಆಹ್ವಾನ, ಈ ದಾಖಲೆಗಳು ಕಡ್ಡಾಯ!


ದತ್ತಜಯಂತಿ ಹಿನ್ನಲೆಯಲ್ಲಿ ಖಾಕಿ ಹೈ ಅಲರ್ಟ್:

ಇದೇ ತಿಂಗಳ 14 ರಂದು ದತ್ತಪೀಠದಲ್ಲಿ ದತ್ತ ಜಯಂತಿ ಹಿನ್ನೆಲೆಯಲ್ಲಿ ಕೆಲ ನಿರ್ದಿಷ್ಟ ಪ್ರದೇಶಗಳಲ್ಲಿ ಅಂಗಡಿ ಮುಂಗಟ್ಟು ತೆರೆಯದಂತೆ ಜಿಲ್ಲಾಡಳಿತ ಆದೇಶಿಸಿದೆ.

ಭಾರಿ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದು, ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ, ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ದತ್ತಮಾಲಾಧಾರಿಗಳು ದತ್ತಪೀಠಕ್ಕೆ ಆಗಮಿಸಿ ನಿರ್ಗಮಿಸುವ ಮಾರ್ಗದಲ್ಲಿ ಬರುವ ಚಿಕ್ಕಮಗಳೂರು ನಗರದ ಪ್ರಮುಖ ರಸ್ತೆ / ಆಲ್ದೂರು, ಹಾಂದಿ, ವಸ್ತಾರೆಯ ಎಲ್ಲಾ ರೀತಿಯ ಅಂಗಡಿ, ಮುಂಗಟ್ಟು, ಹೋಟೆಲ್‌ ಗಳನ್ನು ಡಿ. 14 ರಂದು ಬೆಳಿಗ್ಗೆ 4 ಗಂಟೆಯಿಂದ ರಾತ್ರಿ 12 ಗಂಟೆಗೆ ವರೆಗೆ ಮುಚ್ಚಿಸುವಂತೆ ಸೂಚಿಸಲಾಗಿದೆ.


ಇದನ್ನೂ ಓದಿ; ಬೆಳೆ ಸಾಲ ಪಡೆದ ಹಾಗೂ ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಇಲ್ಲಿದೆ ನೋಡಿ ಡಿಟೈಲ್ಸ್


ದತ್ತ ಜಯಂತಿ ಹಿನ್ನೆಲೆ ಜಿಲ್ಲೆ ಸೇರಿದಂತೆ ದತ್ತಪೀಠದಲ್ಲಿ ಈಗಾಗಲೇ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಬರುವ ಸಾವಿರಾರು ಭಕ್ತರಿಗೆ ಯಾವುದೇ ತೊಂದರೆ ಆಗದಂತೆ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ, ತುರ್ತು ಸಂದರ್ಭದಲ್ಲಿ ಆರೋಗ್ಯ ಘಟಕಗಳನ್ನು ಸ್ಥಾಪಿಸಲಾಗುತ್ತೆ. ಅಲ್ಲದೆ ಈಗಾಗಲೇ ಎರಡು ಸಮುದಾಯದ ಪ್ರಮುಖರನ್ನು ಕರೆಸಿ, ಶಾಂತಿ ಸಭೆ ನಡೆಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆದಂತೆ ಶಾಂತಿಯುತ ಕಾರ್ಯಕ್ರಮ ನಡೆಸಿ ಕೊಡುವುದಾಗಿ ಮನವಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.