ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನಲ್ಲಿ meri meti mera desh ಅಭಿಯಾನದಡಿಯಲ್ಲಿ ಅಮೃತ ಕಲಶ ಯಾತ್ರೆ ಹಾಗೂ ಕಾರ್ಯಕ್ರಮವನ್ನು ಕೊಪ್ಪ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಯಿತು.

ಇದನ್ನೂ ಓದಿ; ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್ ಕಾರ್ಡ್ ರದ್ದು | ಕಾರಣವೇನು?

ದೇಶದ ಗಡಿಗಳಲ್ಲಿ ದುಡಿಯುವ ಯೋಧರ ಕಾರಣದಿಂದ ದೇಶದ ಪ್ರಜೆಗಳು ಸುರಕ್ಷಿತವಾಗಿರಲು ಸಾಧ್ಯವಾಗಿದೆ. ಅವರ ಸೇವೆಯನ್ನು ಸ್ಮರಿಸುವುದು ನಮ್ಮೆಲ್ಲರ ಆಧ್ಯ ಕರ್ತವ್ಯವಾಗಿದೆ. ಈ ಕಾರ್ಯಕ್ರಮವನ್ನು ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಪುಟ್ಟೇಗೌಡರವರು ಉದ್ಘಾಟಿಸಿದರು.

ಮಾಜಿ ಸೈನಿಕರಾದ ಕ್ಯಾಪ್ಟನ್ ಶ್ರೀ ಎ.ಗೋಪಲ್, ಎನ್.ಕೆ ವಿಜಯ ನಿಲುವಾಗಿಲು, ರಮೇಶ್ ಶಾಸ್ತ್ರಿ, ಎ.ಎನ್. ಸುಬ್ಬಣ್ಣ, ಶ್ರೀಸಂದೀಪ್ ಬಿ.ಎಂ ರವರೆಲ್ಲರನ್ನು ಈ ಕಾರ್ಯಕ್ರಮದಲಲಿ ಸನ್ಮಾನಿಸಲಾಯಿತು. ಮುಖ್ಯ ಅತಿಥಿಗಳಾಗಿ ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾದ ಶ್ರಿ ಅಂಜನಪ್ಪ ಎಲ್, ಹರಂದೂರು ಗ್ರಾಮ ಪಂಚಾಯತಿ ಅಧ್ಯಕ್ಷರಾದ ಶ್ರೀ ಸುರೇಶ್ ಭಾಗವಹಿಸಿದ್ದರು.

ಇನ್ನು 22 ಗ್ರಾಮ ಪಂಚಾಯಿತಿಗಳಿಂದ ಸಂಗ್ರಹಿಸಿದ ಪವಿತ್ರವಾದ ಮಣ್ಣನ್ನು ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಹಾಗೂ ವೇದಿಕೆಯಲ್ಲಿ ಉಪಸ್ಥಿತರಾದ ಗಣ್ಯರು, ನೆಹರು ಯುವ ಕೇಂದ್ರದ ಸ್ವಯಂ ಸೇವಕರಾದ ಶ್ರೀ ಶಿವಾನಂದ.ಎ. ಎಸ್ ಇವರಿಗೆ ಹಸ್ತಾಂತರಿಸಿದರು. ಪಟ್ಟಣ ಪಂಚಾಯಿತಿ ಕೊಪ್ಪ ಹಾಗೂ ಅಂಚೆ ಇಲಾಖೆ ಕೊಪ್ಪ ಇವರ ಪವಿತ್ರವಾದ ಮಣ್ಣನ್ನು ಅಮೃತ ಕಲಶ ಯಾತ್ರೆಯಲ್ಲಿ ಸಂಗ್ರಹಿಸಲಾಯಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವೀರಗಾಸೆ ಕಲಾ ತಂಡದವರು ನೃತ್ಯ ಮಾಡುವುದರ ಮೂಲಕ ಅಮೃತ ಕಲಶ ಯಾತ್ರೆಯಲ್ಲಿ ಇನ್ನಷ್ಟು ಮೆರುಗನ್ನು ನೀಡಿದರು.
ಈ ಕಾರ್ಯಕ್ರಮದಲ್ಲಿ ಕೊಪ್ಪ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಶ್ರೀ ಚಂದ್ರಶೇಖರ್ ಹಾಗೂ ಸಿಬ್ಬಂದಿಗಳು, ತಾಲ್ಲೂಕು ಪಂಚಾಯಿತಿ ಸಿಬ್ಬಂದಿಗಳು, ಅಂಚೆ ಇಲಾಖೆಯ ಸಿಬ್ಬಂದಿಗಳು, ಎನ್.ಆರ್.ಎಲ್.ಎಂ ಜಿಪಿಎಲ್ಎಫ್ ನ ಸಿಬ್ಬಂದಿಗಳು, ಕೊಪ್ಪ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್ ನ ಯೋಜನಾಧಿಕಾರಿಗಳಾದ ವೆಂಕಟೇಶ್ ಮೂರ್ತಿರವರು ಹಾಗೂ ವಿಧ್ಯಾರ್ಥಿ,ವಿಧ್ಯಾರ್ಥಿನಿಯರು, ಕಾಲೇಜಿನ ಉಪನ್ಯಾಸಕರು, ಹಾಗೂ ಮತ್ತಿತರರು ಭಾಗವಹಿಸಿದ್ದರು.
ಚಿಕ್ಕಮಗಳೂರು: ಜಿಲ್ಲಾದ್ಯಂತ 6 ದಿನಗಳ ಕಾಲ ನಿಷೇಧಾಜ್ಞೆ ಜಾರಿ
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ಕುರಿತು ಚರ್ಚೆ ಸದ್ದು ಮಾಡುತ್ತಿದೆ. ಈ ಮಧ್ಯೆ ಕಾಫಿನಾಡಿನಲ್ಲೂ ಮಹಿಷ ದಸರಾ ಸಂಬಂಧ ಪರ ವಿರೋಧ ಚರ್ಚೆಗಳು ವ್ಯಾಪಕವಾಗಿವೆ. ಈ ಹಿನ್ನೆಲೆಯಲ್ಲಿ ಹಾಗೂ ಮಹಿಷ ದಸರಾ ಕಾರ್ಯಕ್ರಮಕ್ಕೆ ವಿರೋಧ ವ್ಯಕ್ತಪಡಿಸಿ ಕೆಲ ಸಂಘಟನೆಗಳು ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದ ಬೆನ್ನಲ್ಲೇ ಮುಂಜಾಗ್ರತಾ ಕ್ರಮವಾಗಿ (ಇಂದಿನಿಂದ) ಅಕ್ಟೋಬರ್ 19 ರಿಂದ ಅಕ್ಟೋಬರ್ 24 ರ ವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.
ಮಹಿಷ ದಸರಾ ಆಚರಣೆ ಸಂಬಂಧ ಜಿಲ್ಲಾದ್ಯಂತ ಯಾವುದೇ ಪೋಸ್ಟರ್, ಬ್ಯಾನರ್, ಬಂಟಿಂಗ್ಸ್ ಆಳವಡಿಸುವುದು, ಪ್ರತಿಭಟನೆ ಮತ್ತು ಮೆರವಣಿಗೆ ನಡೆಸುವುದು, ಅವಹೇಳನಕಾರಿ ಘೋಷಣೆಗಳು, ಭಾಷಣಗಳು, ಪ್ರಕಟಣೆಗಳು, ಅವಾಚ್ಯ ಶಬ್ದಗಳ ಬಳಕೆ, ಪ್ರಚೋದನಕಾರಿ ಭಾಷಣ, ಗಾಯನ ಇತ್ಯಾದಿ ಚಟುವಟಿಕೆಗಳನ್ನು ನಿಷೇಧಿಸಿ ಡಿಸಿ ಆದೇಶಿಸಿದ್ದಾರೆ.
ಮೈಸೂರು ಜಿಲ್ಲೆಯ ಬಳಿಕ ಉಡುಪಿ, ಚಿಕ್ಕಮಗಳೂರು ಜಿಲ್ಲೆಯಲ್ಲೂ ಮಹಿಷ ದಸರಾ ಆಚರಣೆಗೆ ದಲಿತ ಸಂಘಟನೆಗಳು ಸಿದ್ಧತೆ ನಡೆಸಿದ್ದವು. ಇದೇ ತಿಂಗಳು 20 ರಂದು ಹಮ್ಮಿಕೊಂಡಿರುವ ಮಹಿಷ ದಸರಾಕ್ಕೆ ಕಾಫಿನಾಡಿನಲ್ಲೂ ಭಾರಿ ವಿರೋಧ ವ್ಯಕ್ತವಾಗಿದೆ. ಅದರಲ್ಲೂ ಮಹಿಷ ದಸರಾ ಉದ್ಘಾಟನೆಗೆ ಪ್ರೋ. ಭಗವಾನ್ ಆಗಮನದ ಬಗ್ಗೆ ಕೆಲ ಸಂಘಟನೆಗಳು ಆಕ್ಷೇಪ ಎತ್ತಿದ್ದವು. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮವಾಗಿ 6 ದಿನಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಿದೆ.
ಅಕ್ಟೋಬರ್ 19 ರಿಂದ 24 ರ ವರೆಗೆ ಜಿಲ್ಲೆಯಲ್ಲಿ ಯಾವುದೇ ರೀತಿಯ ಮೆರವಣಿಗೆ, ಪ್ರಚೋದನಾತ್ಮಕ ಭಾಷಣ, ಪೋಸ್ಟರ್, ಪ್ಲೆಕ್ಸ್ ಹಾಕಬಾರದು. ಈ ಸಂದರ್ಭದಲ್ಲಿ ಯಾವುದೇ ಪ್ರತಿಭಟನೆ ನಡೆಸುವಂತಿಲ್ಲ. ನಿಷೇಧಾಜ್ಞೆ ಅವಧಿಯಲ್ಲಿ ಘೋಷಣೆಗಳನ್ನು ಕೂಗುವುದು, ಆವೇಶಭರಿತರಾಗಿ ಭಾಷಣ ಮಾಡುವುದು, ಸಂಗೀತ ಕಾರ್ಯಕ್ರಮ ನಡೆಸುವುದನ್ನು ನಿಷೇಧಿಸಲಾಗಿದೆ. ನಿಷೇಧಾಜ್ಞೆ ಹಿನ್ನೆಲೆಯಲ್ಲಿ ಶಸ್ತ್ರಗಳು, ದೊಣ್ಣೆ, ಕತ್ತಿಗಳು, ಈಟಿ, ಗದೆ, ಬಂದೂಕು, ಚಾಕು, ಕೋಲು, ಲಾಟಿಗಳು ಸೇರಿದಂತೆ ದೈಹಿಕ ಹಿಂಸೆಯನ್ನುಂಟು ಮಾಡುವ ಇತರೆ ಯಾವುದೇ ವಸ್ತುಗಳನ್ನು ಒಯ್ಯುವುದನ್ನು ನಿಷೇಧಿಸಲಾಗಿದೆ.
ಇನ್ನು ಪಟಾಕಿಗಳನ್ನು ಸಿಡಿಸುವುದು, ಯಾವುದೇ ಸ್ಫೋಟಕಗಳನ್ನು ಒಯ್ಯುಲು ಅವಕಾಶವಿಲ್ಲ. ಯಾವುದೇ ವ್ಯಕ್ತಿಯು ಈ ಆದೇಶವನ್ನು ಉಲ್ಲಂಘಿಸಿದ್ದಲ್ಲಿ ಅಂತವರ ವಿರುದ್ಧ ನಿಯಮಾನುಸಾರ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕ್ರಮ ಕೈ ಗೊಳ್ಳಲಾಗುವುದೆಂದು ಜಿಲ್ಲಾಧಿಕಾರಿ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
ಅಕ್ಟೋಬರ್ 20 ರಂದು ಮಹಿಷ ದಸರಾ ಅಂಗವಾಗಿ ಚಿಕ್ಕಮಗಳೂರು ನಗರದ ಹನುಮಂತಪ್ಪ ಸರ್ಕಲ್ ನಿಂದ ಆಜಾದ್ ಪಾರ್ಕ್ ಸರ್ಕಲ್ ವರೆಗೆ ಮೆರವಣಿಗೆ ನಡೆಸಲು ಮಹಿಷ ದಸರಾ ಆಚರಣಾ ಸಮಿತಿ ಮುಂದಾಗಿತ್ತು. ಜೊತೆಗೆ, ಸಭಾ ಕಾರ್ಯಕ್ರಮವನ್ನು ಚಿಂತಕ ಪ್ರೊ. ಭಗವಾನ್ ನೆರವೇರಿಸಲಿದ್ದರು. ಆದರೆ ನಿಷೇಧಾಜ್ಞೆ ಜಾರಿಯಿಂದಾಗಿ ಮೆರವಣಿಗೆಗೆ ಅವಕಾಶ ಸಿಗುವುದು ಅನುಮಾನವಾಗಿದೆ. ಜೊತೆಗೆ, ಒಕ್ಕಲಿಗರ ಸಂಘ, ಶ್ರೀರಾಮ ಸೇನೆ ಕಾರ್ಯಕರ್ತರು ಚಿಕ್ಕಮಗಳೂರಿಗೆ ಭಗವಾನ್ ಬಂದಲ್ಲಿ ಅವರಿಗೆ ಮಸಿ ಬಳಿಯುವುದಾಗಿ ಎಚ್ಚರಿಕೆ ನೀಡಿದ್ದರು. ಹೀಗಾಗಿ ಭಗವಾನ್ ಚಿಕ್ಕಮಗಳೂರಿಗೆ ಬಾರದಂತೆ ಗಡಿಪಾರು ಮಾಡಬೇಕು ಎಂದು ಡಿಸಿಗೆ ಮನವಿ ಸಲ್ಲಿಸಲಾಗಿತ್ತು.
ಈ ಎಲ್ಲಾ ಘಟನಾವಳಿಗಳನ್ನು ಅವಲೋಕಿಸಿದ ಎಸ್.ಪಿ ವಿಕ್ರಮ್ ಆಮಟೆ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಮುಂಜಾಗ್ರತಾ ಕ್ರಮವಾಗಿ ಅ.19 ರಿಂದ 24 ರ ವರೆಗೆ ನಿಷೇಧಾಜ್ಞೆ ಜಾರಿಗೊಳಿಸುವಂತೆ ಡಿಸಿ ಮೀನಾ ನಾಗರಾಜ್ ಅವರಿಗೆ ಶಿಫಾರಸ್ಸು ಮಾಡಿದ್ದರು. ಎಸ್.ಪಿ ಶಿಫಾರಸ್ಸಿನ ಮೇರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ.












