ಕೊಪ್ಪ: ಮುಂದುವರೆದ ಮಳೆ, ಸೇತುವೆ ಮುಳುಗಡೆ | ಅಕ್ಕಪಕ್ಕದ ತೋಟ, ಗದ್ದೆಗಳಿಗೂ ನುಗ್ಗಿದ ನೀರು

ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ಮಲೆನಾಡಿನಲ್ಲಿ ಭಾಗದಲ್ಲಿ ಕಳೆದ ಒಂದು ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ನಾನಾ ಅವಾಂತರಗಳು ಸೃಷ್ಟಿಯಾಗಿದ್ದು, ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿದೆ. ಇದರಿಂದ ಅಕ್ಕಪಕ್ಕದ ತೋಟ ಹಾಗೂ ಗದ್ದೆಗಳಿಗೆ ನೀರು ನುಗ್ಗಿದೆ.


ಇದನ್ನೂ ಓದಿ: ಅನಧಿಕೃತ ಪಂಪ್ ಸೆಟ್ ಹೊಂದಿರುವವರಿಗೆ ಗುಡ್ ನ್ಯೂಸ್ ನೀಡಿದ ಇಂಧನ ಸಚಿವ; ಏನದು? ಮಿಸ್ ಮಾಡ್ದೆ ಈ ಸುದ್ದಿ ಓದಿ


ಕೊಪ್ಪ ತಾಲ್ಲೂಕಿನ ಭಂಡಿಗಡಿ ಸಮೀಪದ ಹೊಳೆಹೊದ್ದುವಿನಲ್ಲಿ ಇಂತಹದೇ ಘಟನೆ ನಡೆದಿದ್ದು, ರೈತರು ಕಂಗಾಲಾಗಿದ್ದಾರೆ. ಮಲೆನಾಡು ಭಾಗದಲ್ಲಿ ಮಳೆಯ ಅರ್ಭಟಕ್ಕೆ ಹೊಳೆಹೊದ್ದು ಸಮೀಪದ ಸೇತುವೆ ಮುಳುಗಡೆ ಆಗಿ ಅಕ್ಕಪಕ್ಕದ ತೋಟ, ಗದ್ದೆಗಳಿಗೆ ನದಿ ನೀರು ನುಗ್ಗಿದೆ.


ಇದನ್ನೂ ಓದಿ: ಕೃಷಿ ಪಂಪ್ ಸೆಟ್ ಹೊಂದಿರುವವರಿಗೆ ಮತ್ತೊಂದು ಮುಖ್ಯ ಮಾಹಿತಿ; ಏನದು? ಇಲ್ಲಿದೆ ನೋಡಿ


ಭಾರೀ ಮಳೆಗೆ ನಾಟಿ ಮಾಡಿದ್ದ ಜಮೀನು ಜಲಾವೃತ!:
ಮಲೆನಾಡಿನಲ್ಲಿ ಸುರಿದ ಭಾರೀ ಮಳೆಗೆ ಎಸ್ಟೇಟ್ ನ ಕೆರೆ ಏರಿ ಹೊಡೆದು ಭಾರೀ ಪ್ರಮಾಣದ ನೀರು ಹೊರಕ್ಕೆ ಬಂದ ಪರಿಣಾಮ ಜಮೀನುಗಳು ಜಲಾವೃತಗೊಂಡಿವೆ. ಕೊಪ್ಪ ತಾಲೂಕಿನ ಹೇರೂರು ಸಮೀಪದ ದೇವಗೋಡು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸುಮಾರು ಎರಡು ಎಕರೆ ವಿಸ್ತೀರ್ಣದ ಕೆರೆ ಏರಿ ಹೊಡೆದು ಭಾರೀ ನೀರು ಹೊರಕ್ಕೆ ಬಂದಿದೆ. ಇದರ ಪರಿಣಾಮ, ನಾಟಿ ಮಾಡಿದ್ದ ಜಮೀನು ಜಲಾವೃತಗೊಂಡಿದೆ.


ಇದನ್ನೂ ಓದಿ: ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?


ನಾಟಿ ಮಾಡಿದ್ದ ಭತ್ತದ ಜಮೀನು ಸಂಪೂರ್ಣ ಹಾನಿಯಾಗಿದ್ದು, ರೈತರಿಗೆ ತೀವ್ರ ನಷ್ಟ ಉಂಟಾಗಿದೆ.


ಇದನ್ನೂ ಓದಿ: ವಾಹನ ಸವಾರರೇ ಎಚ್ಚರ; ರಸ್ತೆಯಲ್ಲಿ ಗಂಟೆಗೆ ಇಷ್ಟು ವೇಗದ ಮಿತಿ ಮೀರಿದರೆ ದಂಡ; ಆಗಸ್ಟ್ 1 ರಿಂದ ಈ ನಿಯಮ ಉಲ್ಲಂಘಿಸಿದ್ರೆ ಬೀಳುತ್ತೆ ಕೇಸ್..!


 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.