ಕೊಪ್ಪ: ಶಮಿತಾ ಸಾವಿನ ಕುರಿತು ಪೋಸ್ಟ್ ಮಾಡಿದ್ದಕ್ಕೆ ನೊಟೀಸ್ ಕೊಟ್ಟ ಪೊಲೀಸರು!

ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ಜೂನ್ 29ರಂದು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಸಾವನ್ನಪ್ಪಿದ್ದ ವಿದ್ಯಾರ್ಥಿನಿ ಶಮಿತಾ ಪ್ರಕರಣ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಕಾರ್ಡ್ ಅಭಿಯಾನ ನಡೆಸುತ್ತಿದ್ದ ಇಬ್ಬರಿಗೆ ಪೊಲೀಸ್ ಇಲಾಖೆ ಇದೀಗ ನೊಟೀಸ್ ನೀಡಿದೆ.

ನೊಟೀಸ್ ನಲ್ಲಿ ಏನಿದೆ?

ಕುಮಾರಿ ಶಮಿತಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣವಾದ ಫೇಸ್ಬುಕ್ ಹಾಗೂ ವಾಟ್ಸಾಪ್ ಸ್ಟೇಟಸ್ ಹಾಕುತ್ತಿರುವುದು ಕಂಡುಬಂದಿದ್ದು, ಈ ಅನುಮಾನಾಸ್ಪದ ಸಾವಿಗೆ ಸಂಬಂಧಪಟ್ಟಂತೆ ತಮ್ಮ ಬಳಿ ಯಾವುದಾದರೂ ಸಾಕ್ಷ್ಯಾಧಾರಗಳು, ದಾಖಲೆಗಳು ಇದ್ದಲ್ಲಿ ಖುದ್ದು ಹಾಜರಾಗಿ ನೀಡುವಂತೆ ಅನಿಲ್ ಹಾಗೂ ವಿನಯ್ ಶಿವಪುರ ಅವರಿಗೆ ಕೊಪ್ಪ ಠಾಣೆ ಸಬ್ ಇನ್ಸ್ಪೆಕ್ಟರ್ ನೊಟೀಸ್ ನೀಡಿದ್ದಾರೆ. ಇದಲ್ಲದೆ ಶಮಿತಾ ಸಾವಿನ ಕುರಿತು ಇನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡದಂತೆ ಮೌಖಿಕವಾಗಿ ಸೂಚನೆ ನೀಡಿದ್ದಾರೆಂಬ ಮಾಹಿತಿ ಲಭ್ಯವಾಗಿದೆ. ಪೊಲೀಸ್ ಇಲಾಖೆ ನೀಡಿದ ಈ ನೊಟೀಸ್ ಇದೀಗ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಅನುಮಾನ ಮೂಡಿಸಿದೆ.

ಒಂದೆಡೆ ಶಮಿತಾ ಸಾವನ್ನಪ್ಪಿ ಸುಮಾರು 22 ದಿನ ಕಳೆದರೂ ಇನ್ನೂ ಮರಣೋತ್ತರ ಪರೀಕ್ಷೆಯ ರಿಪೋರ್ಟ್ ಬಂದಿಲ್ಲ. ಇನ್ನೊಂದೆಡೆ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿ ಸಾಮಾಜಿಕ ಜಾಲತಾದಲ್ಲಿ ಪ್ರಶ್ನಿಸಿದರೆ ಅವರಿಗೂ ನೊಟೀಸ್ ನೀಡಲಾಗಿದೆ.

ಏನಿದು ಪ್ರಕರಣ

ಕೊಪ್ಪ ತಾಲೂಕಿನ ಬೊಮ್ಲಾಪುರ ಸಮೀಪದ ಹೊಕ್ಕಳಿಕೆ ಗ್ರಾಮದ ಶಮಿತಾ ಎಂಬ ವಿದ್ಯಾರ್ಥಿನಿ, ಮೊರಾರ್ಜಿ ವಸತಿ ಶಾಲೆಯಲ್ಲಿ 9ನೇ ತರಗತಿಯಲ್ಲಿ ಓದುತ್ತಿದ್ದರು. 2025ರ ಜೂನ್ 29ರಂದು ಶಾಲೆಯ ಶೌಚಾಲಯದಲ್ಲಿ ನೇಣು ಬಿಗಿದುಕೊಂಡ ಸ್ಥತಿಯಲ್ಲಿ ಪತ್ತೆಯಾಗಿದ್ದಳು. ರಾತ್ರಿಯವರೆಗೂ ಸ್ನೇಹಿತರೊಂದಿಗೆ ಸಂತೋಷವಾಗಿ ಮಾತನಾಡಿದ್ದ ಶಮಿತಾ, ಬೆಳಗಿನ ಜಾವ ಆತ್ಮಹತ್ಯೆಗೆ ಶರಣಾಗಿದ್ದರು.

ಇದೇ ರೀತಿಯ ಘಟನೆ 2023ರ ಜುಲೈ 27ರಂದು ಸಂಭವಿಸಿತ್ತು. ಆಗ ವಿದ್ಯಾರ್ಥಿನಿ ಅಮೂಲ್ಯ ಶಾಲೆಯ ಇದೇ ಬಾತ್‌ರೂಂನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಎರಡೂ ಘಟನೆಗಳು ಒಂದೇ ಸ್ಥಳದಲ್ಲಿ, ಒಂದೇ ಶೈಲಿಯಲ್ಲಿ, ಕಬ್ಬಿಣದ ರಾಡ್‌ಗೆ ನೇಣುಬಿಗಿದುಕೊಂಡಿರುವುದು ಸಾರ್ವಜನಿಕರಲ್ಲಿ ಮತ್ತು ಪೋಷಕರಲ್ಲಿ ಅನುಮಾನಕ್ಕೆ ಕಾರಣವಾಗಿತ್ತು.

ಇದಾದ ಬಳಿಕ ಕೊಪ್ಪದಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆಗಳು ನಡೆದಿದ್ದವು. ಈ ಬಳಿಕ ಶಾಲೆಯ ಪ್ರಾಂಶುಪಾಲೆ ರಜಿನಿ ಹಾಗೂ ವಾರ್ಡನ್ ಓರ್ವರನ್ನು ಸಸ್ಪೆಂಡ್ ಮಾಡಲಾಗಿತ್ತು.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.