ಕೊಪ್ಪ: ಕೃಷಿ ಮೇಳದ ಪೂರ್ವಭಾವಿ ಸಭೆ ನಾಳೆ

ಕೊಪ್ಪ:  (ನ್ಯೂಸ್ ಮಲ್ನಾಡ್ ವರದಿ) ಹರಿಹರಪುರ ಮಠದ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಸಹಭಾಗಿತ್ವ, ತುಮಕೂರಿನ ಗಾಂಧೀಜಿ ಸಹಜ ಬೇಸಾಯ ಆಶ್ರಮದ ಮಂಜುನಾಥ್ ಎಚ್. ಅವರ ನೇತೃತ್ವದಲ್ಲಿ 2024 ರ ಜನವರಿಯಲ್ಲಿ ಕೃಷಿ ಮೇಳ ನಡೆಸುವ ಸಲುವಾಗಿ ಹರಿಹರಪುರ ಮಠದ ಸಭಾಂಗಣದಲ್ಲಿ ಡಿ.12 ರಂದು ಮಧ್ಯಾಹ್ನ 3 ಕ್ಕೆ ಪೂರ್ವಭಾವಿ ಸಭೆ ಕರೆಯಲಾಗಿದೆ.

 

ಇದನ್ನೂ ಓದಿ; 25 ಸಾವಿರ ರೂ ಟಾಟಾ ಕಂಪನಿಯಿಂದ ವಿದ್ಯಾರ್ಥಿವೇತನ; ಯಾರು ಈ ವಿದ್ಯಾರ್ಥಿ ವೇತನಕ್ಕೆ ಅರ್ಹರು; ಹೇಗೆ ಅರ್ಜಿ ಸಲ್ಲಿಸುವುದು, ದಾಖಲೆಗಳು ಯಾವುದು?

ಸಭೆಯಲ್ಲಿ ಸಾವಯವ ಮತ್ತು ನೈಸರ್ಗಿಕ ಕೃಷಿ ಚಿಂತನಾ ಮಂಥನ ಕಾರ್ಯಕ್ರಮ, ಅಡಿಕೆ ಹಳದಿಎಲೆ, ಎಲೆಚುಕ್ಕಿ ರೋಗಗಳ ಬಗ್ಗೆ ಚರ್ಚೆ, ರೈತರ ಮಕ್ಕಳು ಇಂದು ಗುಳೆ ಹೋಗುತ್ತಿರುವುದು, ಗ್ರಾಮ ಮಟ್ಟದಲ್ಲಿ ಉದ್ಯೋಗ ತರುವುದು ಹೇಗೆ, ಸರ್ಕಾರಿ ಇಲಾಖೆ ಜವಾಬ್ದಾರಿಗಳು, ಮಲೆನಾಡು ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿ ಮಾಡುವ ಕುರಿತು, ಹೈನುಗಾರಿಕೆ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಕೃಷಿಕ ಹೆಗ್ಗಾರುಕೊಡಿಗೆ ಆದರ್ಶ್ ತಿಳಿಸಿದ್ದಾರೆ.

ಇದನ್ನೂ ಓದಿ; NTPC ನಲ್ಲಿ ಉದ್ಯೋಗಾವಕಾಶ; 100 ಹುದ್ದೆಗಳಿಗೆ ಅರ್ಜಿ ಆಹ್ವಾನ; 50,000 ದಿಂದ 1,60,000 ವರೆಗೆ ವೇತನ

ಕೃಷಿ ಮೇಳ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಮತ್ತು ತೀರ್ಥಹಳ್ಳಿ ತಾಲೂಕಿಗೆ ಮಾತ್ರ ಸೀಮಿತವಾಗಿದ್ದು ಜಿಲ್ಲೆಯ ಸಾವಯವ ಕೃಷಿಯಲ್ಲಿ ಸಾಧನೆಗೈದ ಕೃಷಿಕರಿಗೆ ಸನ್ಮಾನಿಸಲು ಇಚ್ಚಿಸಿದ್ದು ಸಾವಯವ ಕೃಷಿ ಮಾಡುವ ರೈತರು ತಾವು ಸಾವಯವ ಕೃಷಿಯಲ್ಲಿ ಮಾಡಿದ ಸಾಧನೆಯೊಂದಿಗೆ 8762942355. 8762742355, 84315229164 ಸಂಖ್ಯೆಗೆ ನೋಂದಾಯಿಸಿಕೊಳ್ಳುವಂತೆ ತಿಳಿಸಿದ್ದಾರೆ.

 

ಮೂಡಿಗೆರೆ: 4 ಸಾವಿರ ಅಡಿ ಪ್ರಪಾತದಿಂದ ಹಾರಿ ಆತ್ಮಹತ್ಯೆಗೆ ಶರಣಾಗಿದ್ದ ಯುವಕ | ಪ್ರಪಾತದಿಂದ ಮೇಲಕ್ಕೆ ತರಲು ಎರಡು ದಿನ ಹರಸಾಹಸ

ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ರಾಣಿಝರಿ ಜಲಪಾತದ ಬಳಿ ಸುಮಾರು 4 ಸಾವಿರ ಅಡಿ ಪ್ರಪಾತದಿಂದ ಹಾರಿ ಆತ್ಮಹತ್ಯೆಗೆ ಶರಣಾಗಿದ್ದ ಬೆಂಗಳೂರು ಮೂಲದ ಟೆಕ್ಕಿ ಭರತ್ ಮೃತದೇಹವನ್ನ ಪ್ರಪಾತದಿಂದ ಮೇಲಕ್ಕೆ ತರಲಾಗಿದೆ.

 

ಶನಿವಾರ ಸಂಜೆ ವೇಳೆಯೇ ಮೃತದೇಹ ಪತ್ತೆಯಾಗಿದ್ದರು ದಟ್ಟಕಾನನ, ಕಾಡುಪ್ರಾಣಿಗಳ ಕಾಟ, ಕತ್ತಲಲ್ಲಿ 4 ಸಾವಿರ ಅಡಿ ಪ್ರಪಾತದಿಂದ ಮೃತದೇಹ ಹೊರತರೋದು ಕಷ್ಟಸಾಧ್ಯ ಎಂದು ಪೊಲೀಸರು, ಅರಣ್ಯ ಸಿಬ್ಬಂದಿಗಳು ಸೇರಿದಂತೆ ಸ್ಥಳಿಯರು ಕಾರ್ಯಾಚರಣೆಯನ್ನ ನಿಲ್ಲಿಸಿದ್ದರು.

ನಿನ್ನೆ ರಾಣಿಝರಿ ಜಲಪಾತದ ಕಡೆಯಿಂದ ಪ್ರಪಾತಕ್ಕೆ ಇಳಿದ 25 ಜನರ ತಂಡ ನಿನ್ನೆ ಹರಸಾಹಸಪಟ್ಟು ಮೃತದೇಹವನ್ನ ಮೇಲಕ್ಕೆ ತಂದಿದ್ದಾರೆ. 4 ಸಾವಿರ ಅಡಿಯ ಪ್ರಪಾತದಿಂದ ಮೃತದೇಹವನ್ನ ತರೋದು ಅಷ್ಟು ಸುಲಭವಲ್ಲ. ಆದರೆ, 25 ಜನರ ತಂಡ ಸುಮಾರು 5 ಕಿ.ಮೀ. ಮೃತದೇಹವನ್ನ ಹೊತ್ತು ತಂದು ತೀರಾ ಕಡಿದಾದ ಪ್ರದೇಶದಲ್ಲಿ ಮರದಿಂದ ಮರಕ್ಕೆ ಹಗ್ಗ ಕಟ್ಟಿಕೊಂಡು ಮೃತದೇಹ ಹೊತ್ತುಕೊಂಡು ಹಗ್ಗದ ಮೂಲಕ ಬೆಟ್ಟ ಹತ್ತಿದ್ದಾರೆ.

ಇದನ್ನೂ ಓದಿ; ಯುವನಿಧಿ ಜಾರಿಗೆ ದಿನಾಂಕ ಫಿಕ್ಸ್; ಡಿಪ್ಲೋಮಾ, ಪದವೀಧರರು ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

ಇನ್ನು ರಾಣಿಝರಿ ವ್ಯೂ ಪಾಯಿಂಟ್ ನಿಂದ ಮೃತದೇಹವಿದ್ದ 4 ಸಾವಿರ ಅಡಿ ಪ್ರಪಾತಕ್ಕೆ ಸುಮಾರು 14 ಕಿ.ಮೀ. ಆಗಲಿದೆ. 4 ಸಾವಿರ ಅಡಿ ಪ್ರಪಾತದಿಂದ ಬಿದ್ದ ರಭಸಕ್ಕೆ ಭರತ್ ಮೃತದೇಹ ಸಂಪೂರ್ಣ ಛಿದ್ರವಾಗಿತ್ತು. ಸಾಲದಕ್ಕೆ ದಟ್ಟಕಾನನ ತಂಪಾದ ವಾತಾವರಣಕ್ಕೆ ಕೊಳೆತು ಹೋಗಿತ್ತು. ಆದರೂ, ಮೃತದೇಹವನ್ನ ಹೊತ್ತುಕೊಂಡು ಬೆಟ್ಟ ಹತ್ತಿ ಮೃತದೇಹವನ್ನ ಮೇಲಕ್ಕೆ ತಂದಿದ್ದಾರೆ.

ಘಟನೆ ವಿವರ:
ಡಿಸೆಂಬರ್ 6 ರಂದು ಚಿಕ್ಕಮಗಳೂರು ಜಿಲ್ಲೆಯ ರಾಣಿಝರಿ ಜಲಪಾತಕ್ಕೆ ಪ್ರವಾಸಕ್ಕೆ ಬಂದಿದ್ದ ಯುವಕ ತನ್ನ ಮೊಬೈಲ್, ಬೈಕ್, ಐಡಿ ಕಾರ್ಡ್, ಬಟ್ಟೆಯನ್ನ ಗುಡ್ಡದ ತುದಿಯಲ್ಲಿ ಬಿಟ್ಟು ನಾಪತ್ತೆಯಾಗಿದ್ದ. ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ಮೂರು ದಿನಗಳ ಬಳಿಕ ಅವರ ಕುಟುಂಬಸ್ಥರು ಪ್ರಕರಣ ದಾಖಲಿಸಿ ಹುಡುಕಲು ಮುಂದಾಗಿದ್ದರು. ಬೆಂಗಳೂರಿನಲ್ಲಿ ಎಂ.ಎನ್.ಸಿ.ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕ ಕೆಲಸ ಕಳೆದುಕೊಂಡಿದ್ದಕ್ಕೆ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಶಂಕಿಸಲಾಗಿದೆ. ಈ ಸಂಬಂಧ ಬಣಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇನ್ನು ಈ ಕಾರ್ಯಾಚರಣೆಯಲ್ಲಿ ಬಾಳೂರು ಪೊಲೀಸರು, ಅರಣ್ಯ ಇಲಾಖೆ, ಸ್ಥಳೀಯರು, ಧರ್ಮಸ್ಥಳ ವಿಪತ್ತು ನಿರ್ವಹಣ ಘಟಕ, ಸಮಾಜ ಸೇವಕ ಅರಿಫ್, ಹಾಗೂ ಬಣಕಲ್ ನ ಸಮಾಜ ಸೇವಕರ ತಂಡ ಇದ್ದರು.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.