ಶೃಂಗೇರಿ/ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಹಿಳೆಯರ ಮಾಂಗಲ್ಯದ ಬಗ್ಗೆ ಮಾತನಾಡಿದ್ದು, ಹೆಣ್ಣುಮಕ್ಕಳ ಮೇಲಾಗಲಿ ದೇಶದ ಸಂಸ್ಕೃತಿಯ ಬಗ್ಗೆಯಾಗಲಿ ಗೌರವವಿಲ್ಲ ಎಂದು ರಾಜ್ಯ ಕೆಪಿಸಿಸಿ ಪ್ರಚಾರ ಸಮಿತಿ ಸಹ ಅಧ್ಯಕ್ಷ ಸುಧೀರ್ ಕುಮಾರ್ ಮುರೊಳ್ಳಿ ದೂರಿದರು.
ಇದನ್ನೂ ಓದಿ: ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್

ಗ್ಯಾರಂಟಿಗಳಿಂದ ಹೆಣ್ಣುಮಕ್ಕಳು ದಾರಿ ತಪ್ಪಿದ್ದಾರೆಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಅಲ್ಲದೆ ಚಿತ್ರನಟಿ ಶ್ರುತಿ ಅವರು ಮಹಿಳೆಯರ ಬಗ್ಗೆ ಕೀಳಾಗಿ ಮಾತನಾಡಿದ್ದಾರೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಹಾಸನದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೊ ಎಲ್ಲೆಡೆ ವೈರಲ್ ಆಗಿದೆ. ಬಿಜೆಪಿಯ ಹಾಸನದ ನಾಯಕರಾದ ದೇವರಾಜ್ ಗೌಡ ಅವರು ಇದೇ ಕಾರಣಕ್ಕಾಗಿ ಬಿಜೆಪಿ ಅಧ್ಯಕ್ಷರಿಗೆ ಪತ್ರ ಬರೆದು ಜೆಡಿಎಸ್ ನೊಂದಿಗೆ ಮೈತ್ರಿ ಪಕ್ಷಕ್ಕೆ ಮುಜುಗರವಾಗಲಿದೆ ಎಂದು ಎಚ್ಚರಿಸಿದ್ದರು ಎಂದರು.
ಇದನ್ನೂ ಓದಿ: ಬಿಡುಗಡೆ ಆಯ್ತು 9ನೇ ಕಂತಿನ ಗೃಹಲಕ್ಷ್ಮಿ ಹಣ; ಈ ಜಿಲ್ಲೆಗಳಿಗೆ ಮೊದಲು ಹಣ ಜಮಾ!; ಇಲ್ಲಿದೆ ನೋಡಿ ಡಿಟೈಲ್ಸ್
ತಮಿಳುನಾಡಿನ ಅಣ್ಣಾಮಲೈ ಐಪಿಎಸ್ ಹುದ್ದೆ ಬಿಟ್ಟು ಹೋದ ನಿಷ್ಪ್ರಯೋಜಕ, ಅಪ್ರಬುದ್ಧ ವ್ಯಕ್ತಿ. ಮೇಕೆದಾಟು ಯೋಜನೆ ಮಾಡಿದರೆ ಪ್ರತಿಭಟನೆ ಮಾಡುತ್ತೇನೆ ಎಂದಿದ್ದವರನ್ನು ಕರೆದುಕೊಂಡು ಬಂದು ಪ್ರಚಾರ ಮಾಡಿಸುತ್ತಿದ್ದಾರೆ.
ಇನ್ನು ಕೋಟ ಶ್ರೀನಿವಾಸ ಪೂಜಾರಿಗೆ ಕಾಫಿ ಬೆಳೆಗಾರರು, ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಗೊತ್ತಿಲ್ಲ. ನೀವು ಹೇಗೆ ಸಂಸದರಾಗಿ ಕೆಲಸ ಮಾಡುತ್ತೀರಿ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಕೋಟ ಅವರು, ನಾನು ಹಿಂದಿನ ಸಂಸದರ ರೀತಿಯಲ್ಲಿಯೇ ಕೆಲಸ ಮಾಡುವುದಾಗಿ ಉತ್ತರ ನೀಡಿದ್ದರು. ಹಿಂದಿನ ಸಂಸದರು ಯಾವುದೇ ಕೆಲಸ ಮಾಡದಿರುವುದರಿಂದ ಗೋ ಬ್ಯಾಕ್ ಅಭಿಯಾನ ನಡೆಸಿದ್ದು ಎಂದರು.
ಇದನ್ನೂ ಓದಿ: ಬ್ಯಾಂಕ್ ಆಫ್ ಬರೋಡದಲ್ಲಿ ಜಾಬ್ ಆಫರ್; ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ನಾಯಕರನ್ನೇ ಮರೆತ ಬಿಜೆಪಿ ಸುಧೀರ್ಕುಮಾರ್ ಮುರೊಳ್ಳಿ ವ್ಯಂಗ್ಯ:
ಶೃಂಗೇರಿ: ಗೋ ಬ್ಯಾಕ್ ಶೋಭಾ ಅಭಿಯಾನವನ್ನು ಪರೋಕ್ಷವಾಗಿ ಬಿಜೆಪಿ ಬೆಂಬಲಿಸಿದೆ ಎಂಬುದು ಚುನಾವಣೆ ಪ್ರಚಾರದ ಕರಪತ್ರದಲ್ಲಿ ತಿಳಿಯುತ್ತದೆ ಎಂದು ಕೆಪಿಸಿಸಿ ವಕ್ತಾರ ಸುಧೀರ್ಕುಮಾರ್ ಮುರೊಳ್ಳಿ ಹೇಳಿದರು.
ತನ್ನ ಚುನಾವಣೆ ಪ್ರಚಾರದ ಕರಪತ್ರದಲ್ಲಿ ಹಾಲಿ ಸಂಸದೆ ಶೋಭಾ ಕರಂದ್ಲಾಜೆ ಅವರನ್ನು ಮರೆತಿದ್ದು, ನರೇಂದ್ರ ಮೋದಿ ಭಾವಚಿತ್ರವನ್ನು ಮಾತ್ರ ಹಾಕಿದೆ. ಪಕ್ಷವನ್ನು ತಳಮಟ್ಟದಿಂದ ವಾಜಪೇಯಿ, ಅಡ್ವಾಣಿ ಮುಂತಾದ ನಾಯಕರನ್ನು ಮರೆತಿರುವುದು ದುರಾದೃಷ್ಟಕರ ಹಾಗೂ ಸರ್ವಾಧಿಕಾರದ ಸಂದೇಶ ನೀಡುತ್ತದೆ ಎಂದು ಆರೋಪಿಸಿದರು.
ಇದನ್ನೂ ಓದಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಜಮಾ ಕುರಿತು ಬಿಗ್ ಅಪ್ಡೇಟ್; ಮಿಸ್ ಮಾಡ್ದೆ ಈ ಸುದ್ದಿ ಓದಿ
ಕಾಂಗ್ರೆಸ್ ಅಭ್ಯರ್ಥಿ ತಾನು ಈವರೆಗೆ ಮಾಡಿರುವ ಸಾಧನೆ ತಿಳಿಸುವ ಮೂಲಕ ಎಲ್ಲರಿಗೂ ಚಿರಪರಿಚಿತರಾಗಿದ್ದಾರೆ. ಜಯಪ್ರಕಾಶ್ ಹೆಗ್ಡೆ ಉತ್ತಮ ಸಂಸದೀಯ ಪಟುವಾಗಿದ್ದು, ಜಿಲ್ಲೆಯ ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.












