
ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಗ್ಯಾಂಗ್ ಒಂದರ ಮೇಲೆ ಪೊಲೀಸರು ದಾಳಿ ಮಾಡಿದ್ದು, ಅಕ್ರಮ ಗಾಂಜಾ ಹಾಗೂ ಒಂದು ಅಪಾಚಿ ಬೈಕ್ ವಶಪಡಿಸಿಕೊಂಡಿರುವ ಘಟನೆ ಕೊಪ್ಪದಲ್ಲಿ ನಡೆದಿದೆ.
ಇದನ್ನೂ ಓದಿ; ಮುಂದಿನ ಉಡುಪಿ-ಚಿಕ್ಕಮಗಳೂರು ಲೋಕಸಭೆ ಅಭ್ಯರ್ಥಿ ಚೈತ್ರಾ ಕುಂದಾಪುರ; ಏನಿದು ಸ್ಟೋರಿ?

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಬೇರುಕೊಡುಗೆ ದೇವಸ್ಥಾನದ ಬಳಿ ಗಾಂಜಾ ಸಾಗಿಸುತ್ತಿದ್ದ ಗ್ಯಾಂಗ್ ಮೇಲೆ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ್ದು, ಸುಮಾರು 750 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ. ಆರೋಪಿಗಳಾದ ಬಾಳೆಹೊನ್ನೂರು ಮೂಲದ ವಿಜಯ (26) ಹಾಗೂ ಕೊಪ್ಪದ ರಾಘವೇಂದ್ರ ನಗರದ ನಿವಾಸಿ ನಿತಿನ್ ಅಲಿಯಾಸ್ ಬುಲ್ಲಿ (24) ಯನ್ನು ವಶಕ್ಕೆ ತೆಗದುಕೊಳ್ಳಲಾಗಿದೆ. ಆರೋಪಿ ವಿಜಯ್ ಮೇಲೆ ಈ ಹಿಂದೆಯೇ ಜಯಪುರ, ಬಾಳೆಹೊನ್ನೂರು, ಉಡುಪಿ ಹಾಗೂ ಮಂಗಳೂರು ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿವೆ

ಇದನ್ನೂ ಓದಿ; 14 ನ್ಯೂಸ್ ಆ್ಯಂಕರ್ಗಳನ್ನು ಬಹಿಷ್ಕರಿಸಿದ i.n.d.i.a ಮೈತ್ರಿಕೂಟ; ಯಾರೆಲ್ಲ ಪಟ್ಟಿಯಲ್ಲಿದ್ದಾರೆ?
ಕೊಪ್ಪ ಪಿಎಸ್ ಐ ಕೌಶಿಕ್ ಅವರ ನೇತೃತ್ವದಲ್ಲಿ ದಾಳಿ ನಡೆದಿದ್ದು ಈ ವೇಳೆ ಸಿಬ್ಬಂದಿಗಳಾದ ಅಮಿತ್, ಪ್ರಸನ್ನ, ಪ್ರಶಾಂತ್ ಹಾಗೂ ನವೀನ್ ಇದ್ದರು. ಈ ಕುರಿತು ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರವಾಸದಲ್ಲಿರುವಾಗಲೇ ವೈದ್ಯನ ಮೇಲೆ ಚಾಕು ಇರಿತ
ಚಿಕ್ಕಮಗಳೂರು; (ನ್ಯೂಸ್ ಮಲ್ನಾಡ್ ವರದಿ) ವೈದ್ಯನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್. ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ನಡೆದಿದೆ.
ವೈದ್ಯ ಗಣೇಶ್ ತೋಟದ ಕಾರ್ಮಿಕರ ಮೇಲೆ, ಪಕ್ಕದ ತೋಟದ ಕಾರ್ಮಿಕರಿಂದ ಹಲ್ಲೆ ನಡೆದಿತ್ತು, ಕೂಡಲೇ ಚಿಕಿತ್ಸೆಗೆಂದು ಸ್ಥಳಕ್ಕೆ ಹೋದ ವೈದ್ಯ ಗಣೇಶ್ ಮೇಲೂ ಕೂಡ ಚಾಕುವಿನಿಂದ ಕೈ ಹಾಗೂ ಹೊಟ್ಟೆ ಭಾಗಕ್ಕೆ ಹಲ್ಲೆ ಮಾಡಲಾಗಿದೆ.
ತೀವ್ರ ಅಸ್ವಸ್ಥರಾಗಿದ್ದ ವೈದ್ಯ ಗಣೇಶ್ ನನ್ನು ಕೂಡಲೇ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿದೆ. ಇನ್ನು ಸಚಿವ ದಿನೇಶ್ ಗುಂಡೂರಾವ್ ಹಲ್ಲೆಗೊಳಗಾದ ವೈದ್ಯ ಗಣೇಶ್ ಅವರ ಆರೋಗ್ಯವನ್ನು ವಿಚಾರಿಸಿದರು.
ಇದನ್ನೂ ಓದಿ; arecanut price: 15 ಸೆಪ್ಟೆಂಬರ್ 2023 ಅಡಿಕೆ ರೇಟ್, ಇಂದಿನ ಅಡಿಕೆ ಧಾರಣೆ ಎಲ್ಲೆಲ್ಲಿ ಎಷ್ಟಿದೆ? ಇಲ್ಲಿದೆ ಮಾಹಿತಿ
ಹಲ್ಲೆ ಸಂಬಂಧ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.













