ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಜಿಲ್ಲೆಯ ಕೊಪ್ಪ ಹಾಗೂ ಶೃಂಗೇರಿ ತಾಲೂಕಿನ ಮೂವರಲ್ಲಿ ಮಂಗನ ಕಾಯಿಲೆ ಪತ್ತೆಯಾಗಿದೆ. ಶೃಂಗೇರಿ ತಾಲೂಕಿನಲ್ಲಿಒಂದು ಮಂಗನ ಕಾಯಿಲೆ 79 ವರ್ಷದ ವ್ಯಕ್ತಿ ಹಾಗೂ ಕೊಪ್ಪ ತಾಲೂಕಿನಲ್ಲಿ ಎರಡು ಮಂಗನ ಕಾಯಿಲೆ ಪತ್ತೆಯಾಗಿದೆ. ಕೊಪ್ಪ ತಾಲೂಕಿನ ಭತ್ರಹಳ್ಳಿ ಜೋಗಿಸರದ 35 ವರ್ಷದ ಖಾಸಗಿ ಶಾಲಾ ಶಿಕ್ಷಕಿಗೆ ಮಂಗನ ಕಾಯಿಲೆ ಪತ್ತೆಯಾಗಿದೆ.
ಇದನ್ನೂ ಓದಿ; ಕೃಷಿ ಉಪಕರಣ ಪಡೆಯಲು ಅರ್ಜಿ ಆಹ್ವಾನ

ಖಾಸಗಿ ಶಾಲಾ ಶಿಕ್ಷಕಿ ಚಿಕ್ಕಮಗಳೂರು ನಗರದಲ್ಲಿ ತರಬೇತಿಗೆ ಹೋಗಿ ಬಂದಿದ್ದನ್ನು ಹೊರತುಪಡಿಸಿದರೇ ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲವೆಂದು ತಿಳಿದು ಬಂದಿದೆ. ಗ್ರಾಮದಲ್ಲಿನ ಪ್ರಾಣಿಗಳಲ್ಲಿನ ಉಣ್ಣೆಯಿಂದ ಸೋಂಕು ಬಂದಿರಬಹುದೆಂದು ಅಂದಾಜಿಸಲಾಗಿದ್ದು, ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದು ಮಹಿಳೆ ಚೇತರಿಸಿಕೊಳ್ಳುತ್ತಿದ್ದಾರೆ.
ಇದನ್ನೂ ಓದಿ; ಇಸ್ರೊದಿಂದ ಉದ್ಯೋಗಾವಕಾಶ
ಇನ್ನು ಕೊಪ್ಪ ತಾಲೂಕಿನಲ್ಲಿ ಕಳೆದ ವರ್ಷ ಮೂರು ಮಂಗನ ಕಾಯಿಲೆ ಪ್ರಕರಣಗಳು ಕಾಣಿಸಿಕೊಂಡಿದ್ದು, 2024 ರಲ್ಲಿ ಇದೇ ಮೊದಲ ಬಾರಿಗೆ ಇಬ್ಬರಲ್ಲಿ ಮಂಗನ ಕಾಯಿಲೆ ಸೋಂಕು ಕಾಣಿಸಿಕೊಂಡಿದೆ. ಸೋಂಕು ಕಾಣಿಸಿಕೊಂಡ ಹಿನ್ನಲೆಯಲ್ಲಿ ಸಂಬಂಧಿಸಿದ ಗ್ರಾಮಗಳ ವ್ಯಾಪ್ತಿಯಲ್ಲಿ ಉಣ್ಣೆಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳಿಸಲಾಗಿದ್ದು, ಆರೋಗ್ಯ ಇಲಾಖೆಯಿಂದ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಾಡಾನೆ ದಾಳಿಯಿಂದ ಬೆಳೆ ನಾಶ | ಸರ್ಕಾರ, ಅರಣ್ಯ ಇಲಾಖೆ ವಿರುದ್ಧ ಪ್ರತಿಭಟನೆಯ ಎಚ್ಚರಿಕೆ
ಖಾಂಡ್ಯ: (ನ್ಯೂಸ್ ಮಲ್ನಾಡ್ ವರದಿ) ಕಳೆದ ಕೆಲ ದಿನಗಳಿಂದ ಜಿಲ್ಲೆಯ ಕೆಲ ಭಾಗದಲ್ಲಿ ಕಾಡಾನೆಗಳ ಹಾವಳಿ ತೀವ್ರಗೊಂಡಿದ್ದು, ಜನವಸತಿ ಪ್ರದೇಶ, ಸಾರ್ವಜನಿಕ ಸ್ಥಳಗಳಲ್ಲಿ ಕಾಡಾನೆಗಳ ಹಿಂಡು ಪ್ರತ್ಯಕ್ಷಗೊಳ್ಳುತ್ತಿರುವುದು ಸಾರ್ವಜನಿಕರಲ್ಲಿ ಭಯ ಭೀತಿ ಉಂಟು ಮಾಡಿದೆ. ಕಾಡಾನೆಗಳ ಹಿಂಡು ತೋಟ, ಭತ್ತದ ಗದ್ದೆ, ಕಬ್ಬಿನ ಗದ್ದೆಗಳಲ್ಲಿ ರಾಜಾರೋಷವಾಗಿ ಓಡಾಡುತ್ತಿವೆ. ಅಲ್ಲದೇ ಅಪಾರ ಪ್ರಮಾಣದ ಕೃಷಿ, ಬೆಳೆ ನಾಶ ಮಾಡಿವೆ.
ಇತ್ತೀಚೆಗೆ ಖಾಂಡ್ಯ ಹೋಬಳಿಯ ಕರಾಗಣೆ, ಹುಯಿಗೆರೆ, ಬಿದರೆ ಅರಿಗೆ, ಖಾಂಡ್ಯದ ಮುಂತಾದ ಕಡೆಗಳಲ್ಲಿ ಆನೆಗಳ ದಾಳಿ ಮುಂದುವರಿದಿದ್ದು, ಅಡಿಕೆ, ಕಾಫಿ ಸೇರಿದಂತೆ ಅಪಾರ ಪ್ರಮಾಣದ ಬೆಳೆಗಳು ನಾಶ ಮಾಡಿದೆ. ಇದೇ ರೀತಿ ಕಾಡಾನೆ ಹಾವಳಿ ಮುಂದುವರಿದರೆ ಸರ್ಕಾರದ ವಿರುದ್ಧ ಹಾಗೂ ಅರಣ್ಯ ಇಲಾಖೆಯ ವಿರುದ್ಧ ದೊಡ್ಡ ಚಳುವಳಿ ಮಾಡುವುದಾಗಿ ಖಾಂಡ್ಯ ನಾಗರೀಕ ರಕ್ಷಣ ವೇದಿಕೆ ಕಾರ್ಯಕರ್ತ ಚಂದ್ರಶೇಖರ್ ರೈ ಎಚ್ಚರಿಕೆಯನ್ನು ನೀಡಿದ್ದಾರೆ.
ಚಿಕ್ಕಮಗಳೂರು: ಕೊನೆಗೂ ಸುಖಾಂತ್ಯ ಕಂಡ ಅಂತರ್ ಧರ್ಮದ ಯುವಕ ಯುವತಿಯರ ವಿವಾಹ
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಅಂತರ್ ಧರ್ಮದ ಯುವಕನನ್ನು ವಿವಾಹವಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿ ತವರಿಗೆ ವಾಪಸ್ ಆಗಿದ್ದ ಯುವತಿ ಒಂದೇ ದಿನದಲ್ಲಿ ಮತ್ತೆ ಪ್ರಿಯಕರನ ಮನೆ ಸೇರುವ ಮೂಲಕ ಕೊನೆಗೂ ಸುಖಾಂತ್ಯ ಕಂಡಿದೆ.
ಕ್ರೈಸ್ತ ಧರ್ಮದ ಯುವತಿ ಅಭಿಷಾಗ್, ವಿಶ್ವಕರ್ಮ ಬ್ರಾಹ್ಮಣ ಯುವಕ ವಿನಯ್ ಕಳೆದ ಕೆಲ ವರ್ಷಗಳಿಂದ ಪ್ರೀತಿಸಿ ಕಳೆದ ಭಾನುವಾರ ದೇವಸ್ಥಾನ ಒಂದರಲ್ಲಿ ಮದುವೆಯಾಗಿದ್ದಾರೆ. ವಿಷಯ ತಿಳಿದ ಯುವತಿಯ ತಂದೆ ತಾಯಿ ಮಗಳು ಮೈನರ್ ಎಂದು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ವೇಳೆ ಪೊಲೀಸರು ಯುವತಿಯನ್ನು ಠಾಣೆಗೆ ಕರೆಸಿ ಪೋಷಕರ ಜೊತೆಗೆ ಕಳುಹಿಸಿಕೊಟ್ಟಿದ್ದಾರೆ. ಈ ವೇಳೆ ಪೊಲೀಸರು ವಿವಾಹವಾಗಿ ಬಂದಿದ್ದ ಯುವತಿಯ ತಾಳಿ, ಕಾಲುಂಗುರ ಬಿಚ್ಚಿಸಿದ್ದಾರೆ ಎನ್ನಲಾಗಿದೆ. ಇದರಿಂದಾಗಿ ಯುವಕ ಯುವತಿ ಪೊಲೀಸ್ ವರಿಷ್ಟಾಧಿಕಾರಿ ಮೊರೆ ಹೋಗಿದ್ದು, ಮತ್ತೆ ಜೋಡಿಯನ್ನು ಠಾಣೆಗೆ ಕರೆಸಿದ ಪೊಲೀಸರು ಇಬ್ಬರ ಹೇಳಿಕೆ ಪಡೆದು ಕಳುಹಿಸಿಕೊಟ್ಟಿದ್ದಾರೆ. ಕೊನೆಗೂ ಅಂತರ್ ಧರ್ಮದ ಯುವಕ ಯುವತಿಯ ವಿವಾಹ ಸುಖಾಂತ್ಯ ಕಂಡಿದೆ.












