ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ಚಾಲಕನ ನಿಯಂತ್ರಣ ತಪ್ಪಿ ಟಿಟಿ ವಾಹನ ಪಲ್ಟಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಅಗಳಗಂಡಿ ಬಳಿ ನಡೆದಿದೆ.

ಶೃಂಗೇರಿಯಿಂದ ಚಿಕ್ಕಮಗಳೂರಿಗೆ ಕಡೆಗೆ ಸಾಗುತ್ತಿದ್ದ ಪ್ರವಾಸಿಗರ ಟಿಟಿ ವಾಹನ ರಾಜ್ಯ ಹೆದ್ದಾರಿ 27ರ ಅಗಳಗಂಡಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪರಿಣಾಮ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇದನ್ನೂ ಓದಿ: ಶ್ರಿ ರಾಮ್ ಫೈನಾನ್ಸ್ ಲಿಮಿಟೆಡ್ (BALEHONNUR) ವತಿಯಿಂದ ಸ್ಕಾಲರ್ ಶಿಪ್; ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಇಂದೇ ಅರ್ಜಿ ಸಲ್ಲಿಸಿ
ಸ್ಥಳಕ್ಕೆ ಜಯಪುರ ಠಾಣೆ ಸಬ್ ಇನ್ಸ್ಪೆಕ್ಟರ್ ಆಗಮಿಸಿ ಹೆದ್ದಾರಿಯಲ್ಲಿದ್ದ ವಾಹನವನ್ನು ಕ್ರೆನ್ ಮೂಲಕ ತೆರವುಗೊಳಿಸಿದರು.
ಇದನ್ನೂ ಓದಿ: ಇನ್ಮುಂದೆ ಈ ಮಹಿಳೆಯರಿಗೆ ಬರಲ್ಲ ಗೃಹಲಕ್ಷ್ಮಿ ಹಣ; ಕಾರಣ ಏನು ಗೊತ್ತಾ?












