ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ಕುಡಿಯಲು ನೀರಿನ ವ್ಯವಸ್ಥೆ ಮಾಡುವ ಜವಾಬ್ದಾರಿ ನಿರ್ವಹಿಸಬೇಕಾದ ಪಟ್ಟಣ ಪಂಚಾಯಿತಿಯೇ ಬದಲಿ ವ್ಯವಸ್ಥೆ ಮಾಡಿಕೊಳ್ಳುವಂತೆ ಘೋಷಣೆ ಮಾಡಿರುವುದು ನಾಚಿಕೆ ಸಂಗತಿ ಎಂದು ನಗರ ಜೆಡಿಎಸ್ ಘಟಕದ ಅಧ್ಯಕ್ಷ ಫ್ರಾನ್ಸಿಸ್ ಕಾರ್ಡೋಜ ಹೇಳಿದ್ದಾರೆ.
ಇದನ್ನೂ ಓದಿ; BPL ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್; ಈ ತರಬೇತಿಗೆ ಅರ್ಜಿ ಆಹ್ವಾನ

ಪಟ್ಟಣದ ನಿವಾಸಿಗಳಿಗೆ ಪಟ್ಟಣ ಪಂಚಾಯಿತಿ ವತಿಯಿಂದ ಕುಡಿಯುವ ನೀರು ಸರಬರಾಜು ಮಾಡಲು ಸಾಧ್ಯವಾಗುತ್ತಿಲ್ಲ. ಕೊಪ್ಪದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಬದಲಿ ವ್ಯವಸ್ಥೆ ಮಾಡುವ ಜವಾಬ್ದಾರಿ ನಿರ್ವಹಿಸಬೇಕಾದ ಪಟ್ಟಣ ಪಂಚಾಯಿತಿಯೇ ಮೈಕ್ ಮೂಲಕ ಘೋಷಣೆ ಮಾಡಿರುವುದು ನಾಚಿಕೆ ಸಂಗತಿ. ನೀರು ಸರಬರಾಜು ಮಾಡಲು ಮೋಟಾರ್ ಹಾಳಾಗಿದ್ದು ಜನಗಳೇ ಬದಲಿ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಹೇಳಿದೆ. ಇದು ಆಡಳಿತ ನಡೆಸುವ ಲಕ್ಷಣವಲ್ಲ ಎಂದು ಜೆಡಿಎಸ್ ಘಟಕದ ಅಧ್ಯಕ್ಷ ಫ್ರಾನ್ಸಿಸ್ ಕಾರ್ಡೋಜ ಟೀಕಿಸಿದ್ದಾರೆ.


ಇದನ್ನೂ ಓದಿ; ಜಿಲ್ಲೆಯ ಗ್ರಾಮ ಪಂಚಾಯಿತಿಯಲ್ಲಿ ಉದ್ಯೋಗ; ಪಿಯುಸಿ ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
ಜನರಿಗೆ ನೀರಿನ ವ್ಯವಸ್ಥೆ ಕಲ್ಪಿಸಲು ಸಾಧ್ಯವಾಗದಿದ್ದರೆ ಚುನಾಯಿತ ಪ್ರತಿನಿಧಿಗಳ ಕೆಲಸವೇನು, ಪಟ್ಟಣ ಪಂಚಾಯಿತಿ ಅಧಿಕಾರಿಗಳ ಕೆಲಸವೇನು ಎಂಬುದನ್ನು ಜನರಿಗೆ ತಿಳಿಸಬೇಕು ಎಂದು ಒತ್ತಾಯಿಸಿದ್ದಾರೆ.
ಇದನ್ನೂ ಓದಿ; ಯಜಮಾನಿಯರಿಗೆ ಭರ್ಜರಿ ಗುಡ್ ನ್ಯೂಸ್; 2 ತಿಂಗಳ ಗೃಹಲಕ್ಷ್ಮಿ ಹಣ ಖಾತೆಗೆ ಜಮಾ!; ಸೆಪ್ಟೆಂಬರ್ ತಿಂಗಳ ಹಣದ ಕುರಿತು ಬಿಗ್ ಅಪ್ಡೇಟ್













