ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) 2024 ರ ಲೋಕಸಭಾ ಚುನಾವಣೆಯ ಜೆಡಿಎಸ್ ಬೆಂಬಲಿತ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಅವರು ನಾಲ್ಕು ತಾಲೂಕುಗಳ ಜೆಡಿಎಸ್ ಕಾರ್ಯಕರ್ತರ ಸಭೆಯನ್ನು ಆಯೋಜಿಸಲಾಗಿದೆ ಎಂದು ರಾಜ್ಯ ಹಿರಿಯ ಉಪಾದ್ಯಕ್ಷ ಸುಧಾಕರ್ ಶೆಟ್ಟಿ ತಿಳಿಸಿದ್ದಾರೆ.
ಇದನ್ನೂ ಓದಿ: ಕಾಂಗ್ರೆಸ್ ಗ್ಯಾರಂಟಿಗಳಿಗೆ ಬಿಜೆಪಿ ಠಕ್ಕರ್!; ಮೋದಿ ಕಿ ಗ್ಯಾರಂಟಿ ಹೆಸರಿನಲ್ಲಿ ಬಿಜೆಪಿ ಪ್ರಣಾಳಿಕೆ ರಿಲೀಸ್

ರಾಜ್ಯಾದ್ಯಂತ ಲೋಕಸಭಾ ಚುನಾವಣಾ ಪ್ರಚಾರದ ಕಣ ಕಂಗೇರಿದೆ. ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿಗಳು, ಕಾಂಗ್ರೆಸ್ ಅಭ್ಯರ್ಥಿಗಳ ಜೊತೆ ಪಕ್ಷೇತರ ಅಭ್ಯರ್ಥಿಗಳೂ ಕೂಡ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಇದರ ಜೊತೆಗೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಕೂಡ ಭರ್ಜರಿ ಮತ ಬೇಟೆ ಕೂಡ ನಡೆಸುತ್ತಿದ್ದಾರೆ. ಈ ನಡುವೆ ನಾಲ್ಕು ತಾಲೂಕುಗಳ ಜೆಡಿಎಸ್ ಕಾರ್ಯಕರ್ತರ ಸಭೆಯನ್ನು ಮಂಗಳವಾರ (ನಾಳೆ) ಮಧ್ಯಾಹ್ನ 12:00 ಗಂಟೆಗೆ ಕೊಪ್ಪ ತಾಲೂಕು ಕಚೇರಿ ಮುಂಭಾಗದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಹಿರಿಯ ಉಪಾದ್ಯಕ್ಷ ಸುಧಾಕರ್ ಶೆಟ್ಟಿ ತಿಳಿಸಿದ್ದಾರೆ.

ಇದನ್ನೂ ಓದಿ: ಉಚಿತ ಪಡಿತರ ಸೇರಿ ಹಲವು ಭರವಸೆ ನೀಡಿದ ಬಿಜೆಪಿ
ಎನ್.ಆರ್ ಪುರ: ತೋಟಕ್ಕೆ ಹೋಗಿದ್ದ ರೈತನಿಗೆ ಸಿಡಿಲು ಬಡಿದು ಸಾವು
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಜಿಲ್ಲೆಯ ಮಲೆನಾಡು ಭಾಗದಲ್ಲಿ ನಿನ್ನೆ ಮಳೆ ಸುರಿದಿದ್ದು, ಬಿರುಬೇಸಿಗೆಯಿಂದ ಕಾದ ಕಾವಲಿಯಂತಾಗಿದ್ದ ಭೂಮಿಗೆ ತಂಪೆರೆದಿದೆ. ಇದರ ನಡುವೆ ಮಲೆನಾಡಿನಲ್ಲಿ ಸಿಡಿಲಿಗೆ ರೈತ ಬಲಿಯಾಗಿದ್ದಾರೆ.
ಇದನ್ನೂ ಓದಿ; HSRP ನಂಬರ್ ಪ್ಲೇಟ್ ಅಳವಡಿಕೆ; ವಾಹನ ಸವಾರರಿಗೆ ಮಹತ್ವದ ಮಾಹಿತಿ ಇಲ್ಲಿದೆ!
ಜಿಲ್ಲೆಯ ಎನ್.ಆರ್ ಪುರ ತಾಲೂಕಿನ ಅರಳಿಕೊಪ್ಪದಲ್ಲಿ ತೋಟಕ್ಕೆ ತೆರಳಿದ್ದ ರೈತನಿಗೆ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಶಂಕರ್ (48) ಸಿಡಿಲು ಬಡಿದು ಮೃತಪಟ್ಟ ದುರ್ದೈವಿ.
ಇದನ್ನೂ ಓದಿ; SBI ಅಮೃತ್ ಕಲಶ್ ಎಫ್‌ಡಿ ಸ್ಕೀಮ್; ಹೂಡಿಕೆ ಗಡುವು ವಿಸ್ತರಿಸಿದ ಎಸ್‌ಬಿಐ; ಈ ಯೋಜನೆಯಲ್ಲಿ ಏನೆಲ್ಲಾ ಲಾಭ? ಇಲ್ಲಿದೆ ಡಿಟೈಲ್ಸ್
ಮೂಡಿಗೆರೆ, ಕೊಪ್ಪ, ಜಯಪುರ, ಬಾಳೆಹೊನ್ನೂರಲ್ಲಿ ಧಾರಾಕಾರ ಮಳೆಯಾಗಿದ್ದು, ಚಿಕ್ಕಮಗಳೂರು ನಗರ, ಮಲ್ಲೇನಹಳ್ಳಿ, ಖಾಂಡ್ಯ, ಮುತ್ತೋಡಿ ಭಾಗದಲ್ಲಿ 3 ದಿನಗಳಿಂದ ಸಂಜೆ ವೇಳೆ ನಿರಂತರವಾಗಿ ಮಳೆ ಸುರಿಯುತ್ತಿದೆ. ಬಿಸಿಲ ಝಳಕ್ಕೆ ಕಂಗಲಾಗಿದ್ದ ಜನ ನಿಟ್ಟುಸಿರು ಬಿಟ್ಟಿದ್ದಾರೆ.
ಇದನ್ನೂ ಓದಿ; ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಉದ್ಯೋಗ; ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ













