ನೀತಿ ಸಂಹಿತೆ ಉಲ್ಲಂಘನೆ: ಕೋಟ ಶ್ರೀನಿವಾಸ ಪೂಜಾರಿಗೆ ಕೋರ್ಟ್‌ ಸಮನ್ಸ್

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಉಡುಪಿ-ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿ ಅವರಿಗೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.

ಇದನ್ನೂ ಓದಿ; ಸೌಥ್‌ ಈಸ್ಟ್‌ ಸೆಂಟ್ರಲ್‌ ರೈಲ್ವೆಯಲ್ಲಿ ಉದ್ಯೋಗ; 1113 ಹುದ್ದೆಗಳಿಗೆ ಅರ್ಜಿ ಆಹ್ವಾನ

ಇದನ್ನೂ ಓದಿ; ಸಂಗೀತಾ ಶೃಂಗೇರಿ ಫಿಟ್ನೆಸ್ ಹಿಂದಿನ ಸೀಕ್ರೆಟ್ ಏನು ಗೊತ್ತಾ?; ಇವರ ಬೋಲ್ಡ್ ಲುಕ್ ಗೆ ಫ್ಯಾನ್ಸ್ ಫಿದಾ

ಕೋಟಾ ಶ್ರೀನಿವಾಸ ಪೂಜಾರಿ ಸೇರಿದಂತೆ ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.

ಇದನ್ನೂ ಓದಿ; ಮತದಾರರೇ ಗಮನಿಸಿ; ವೋಟರ್ ಲಿಸ್ಟ್ ನಲ್ಲಿ ಹೆಸರು ಸೇರ್ಪಡೆಗೆ ಇನ್ನೂ ಇದೆ ಕಾಲಾವಕಾಶ

ಮಾರ್ಚ್ 30 ರಂದು ಕಟಪಾಡಿ ಖಾಸಗಿ ಕಾಲೇಜು ಅವರಣದಲ್ಲಿ ಶ್ರೀನಿವಾಸ ಪೂಜಾರಿ ಪ್ರಚಾರ ಭಾಷಣ ಮಾಡಿದ್ದರು. ಚುನಾವಣಾ ಅಧಿಕಾರಿಗಳ ಅನುಮತಿ ಇಲ್ಲದೆ ರಾಜಕೀಯ ಭಾಷಣ ಮಾಡಿದ ಹಿನ್ನಲೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಅಡಿಯಲ್ಲಿ ಕೋರ್ಟ್ ಗೆ ಖಾಸಗಿ ದೂರು ದಾಖಲಿಸಲಾಗಿತ್ತು. ಈ ದೂರಿನ ಹಿನ್ನೆಲೆಯಲ್ಲಿ ಕೋರ್ಟ್ ಸಮನ್ಸ್ ಜಾರಿ ಮಾಡಿ ಮೇ 27 ಕ್ಕೆ ವಿಚಾರಣೆಗೆ ಖುದ್ದಾಗಿ ಹಾಜರಾಗುವಂತೆ ಕೋರ್ಟ್ ಆದೇಶ ಹೊರಡಿಸಿದೆ.

ಇದನ್ನೂ ಓದಿ; ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಬಡ್ಡಿಯಿಲ್ಲದೆ ಸಿಗಲಿದೆ 5 ಲಕ್ಷ ರೂ.ವರೆಗೆ ಸಾಲ!

ಚಿಕ್ಕಮಗಳೂರು: ಎರಡು ಪ್ರತ್ಯೇಕ ಗಾಂಜಾ ಪ್ರಕರಣ: ಇಬ್ಬರ ಬಂಧನ

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಗಾಂಜಾ ಪ್ರಕರಣದಲ್ಲಿ ಪ್ರತ್ಯೇಕವಾಗಿ ಇಬ್ಬರನ್ನು ಬಂಧಿಸಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಆಲ್ದೂರು ಸಮೀಪದ ಸತ್ತಿಹಳ್ಳಿ ಪಂಚಾಯಿತಿ ವ್ಯಾಪ್ತಿಯ ಗುಲ್ಲನ್ ಪೇಟೆ ಗ್ರಾಮದಲ್ಲಿ ಕಾಫಿ ತೋಟದೊಳಗೆ ಗಾಂಜಾ ಗಿಡಗಳನ್ನು ಬೆಳೆದಿರುವ ಖಚಿತ ಮಾಹಿತಿ ಆಧಾರದಲ್ಲಿ ಪಿಎಸ್‌ಐ ಧನರಾಜ್ ಟಿ.ಎಂ ನೇತೃತ್ವದ ಪೊಲೀಸರು ದಾಳಿ ನಡೆಸಿ ಅಬ್ದುಲ್ ಬಶೀರ್ ಎಂಬಾತನನ್ನು ಬಂಧಿಸಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ ಕಡೂರು ಪಟ್ಟಣದ ಹಳೇ ಸಂತೆ ಮೈದಾನದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಓರ್ವ ವ್ಯಕ್ತಿಯನ್ನು ಪಿ.ಎಸ್.ಐ ಕಡೂರು ಪೊಲೀಸ್ ಠಾಣೆ ನೇತೃತ್ವದ ತಂಡ ಆರೋಪಿಯನ್ನು ಬಂಧಿಸಿ, 316 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಈ ಕುರಿತು ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.