ಉಡುಪಿ -ಚಿಕ್ಕಮಗಳೂರು ಲೋಕಸಭಾ ಅಭ್ಯರ್ಥಿ ಆಯ್ಕೆಯಲ್ಲಿ ಟ್ವಿಸ್ಟ್ ಸಿಕ್ಕಿದ್ದು, ಬಹುತೇಕ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗುವ ಸಂಭವ ಇದೆ ಎಂಬ ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ; ಮಹಿಳೆಯರಿಗೆ ಸಿಗಲಿದೆ ಬಡ್ಡಿ ಇಲ್ಲದೆ 5 ಲಕ್ಷಗಳ ಸಾಲ!;ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಶೋಭಾ ಕರಂದ್ಲಾಜೆಗೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಅಭ್ಯರ್ಥಿ ಬದಲಾವಣೆಗೆ ಬಿಜೆಪಿ ಮುಂದಾಗಿದೆ, ಸಿ.ಟಿ ರವಿ ಪ್ರಭಲ ಆಕಾಂಕ್ಷಿ ಆಗಿದ್ದರೂ ಸಹ ಯಡಿಯೂರಪ್ಪ ಕುಟುಂಬದ ಜೊತೆಗೆ ವೈಮನಸ್ಸು, ಶೋಭಾ ಕರಂದ್ಲಾಜೆ ವಿರೋಧ, ಹಾಗೂ ಕೇಂದ್ರದ ಮಟ್ಟದಲ್ಲಿ ಉತ್ತಮ ಸಂಬಂಧ ಕಾಯ್ದುಕೊಳ್ಳಲು ವಿಫಲರಾದ ಹಿನ್ನೆಲೆಯಲ್ಲಿ ಪರ್ಯಾಯ ಅಭ್ಯರ್ಥಿಗೆ ಪಕ್ಷ ಯೋಚಿಸಿದ್ದು, ಅಜಾತಶತ್ರು ಎಂದೇ ಕರೆಯಲ್ಪಡುವ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ಟಿಕೆಟ್ ನೀಡುವುದು ಬಹುತೇಕ ಫೈನಲ್ ಎಂಬ ಮಾಹಿತಿಗಳು ಲಭ್ಯವಾಗಿದೆ.
ಇದನ್ನೂ ಓದಿ; ಈ ಯೋಜನೆ ಅಡಿಯಲ್ಲಿ ಸಿಗಲಿದೆ 25,000 ಸಹಾಯಧನ!;ಯಾವ ಯೋಜನೆ, ಪ್ರಯೋಜನ ಪಡೆಯುವುದು ಹೇಗೆ?
ಕಾಂಗ್ರೆಸ್ ನಿಂದ ಜಯಪ್ರಕಾಶ್ ಹೆಗ್ಡೆ ಹಾಗೂ ಸುಧೀರ್ ಕುಮಾರ್ ಮುರೊಳ್ಳಿ ಅಭ್ಯರ್ಥಿಯಾಗಿ ಆಯ್ಕೆಯಾಗುವ ಸಂಭವವಿದ್ದು, ನೆನ್ನೆಯ ದಿನ ಕಾಂಗ್ರೆಸ್ ಕೇಂದ್ರ ಮುಖಂಡ ಸುರ್ಜೇವಾಲ ಚಿಕ್ಕಮಗಳೂರಿಗೆ ಭೇಟಿ ನೀಡಿ ಸುಧೀರ್ ಕುಮಾರ್ ಮುರೊಳ್ಳಿ ಜೊತೆಗೆ ಚರ್ಚೆ ನಡೆಸಿದ್ದು, ಇಂದು ಜಯಪ್ರಕಾಶ್ ಹೆಗ್ಡೆ ಕಾಂಗ್ರೆಸ್ ಸೇರ್ಪಡೆ ಆಗಲಿದ್ದಾರೆ. ಈ ಬೆಳವಣಿಗೆ ನೋಡಿದಾಗ ಕಾಂಗ್ರೆಸ್ ಜಯಪ್ರಕಾಶ್ ಹೆಗ್ಡೆಗೆ ಟಿಕೆಟ್ ನೀಡುವ ಸಂಭವ ಹೆಚ್ಚಿದೆ. ಹೆಗ್ಡೆ ಹಿರಿಯ ಮುತ್ಸದ್ದಿ ರಾಜಕಾರಣಿ ಆಗಿರುವುದರಿಂದ ಅವರಿಗೆ ಕೋಟಾ ಶ್ರೀನಿವಾಸ ಪೂಜಾರಿಯೆ ಸೂಕ್ತ ಎದುರಾಳಿ ಎಂದು ಬಿಜೆಪಿ ಭಾವಿಸಿದಂತೆ ಕಾಣುತ್ತಿದೆ.
ಮೂಡಿಗೆರೆ: ಎದುರಿನ ವಾಹನಕ್ಕೆ ರಸ್ತೆ ಬಿಟ್ಟುಕೊಡಲು ಸಾಧ್ಯವಾಗದೇ ಹಳ್ಳಕ್ಕೆ ಬಿದ್ದ ಕಾರು
ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಕಿರಿದಾದ ಸೇತುವೆಯಲ್ಲಿ ಎದುರಿನಿಂದ ಬಂದ ವಾಹನಕ್ಕೆ ರಸ್ತೆಬಿಟ್ಟುಕೊಡಲು ಸಾಧ್ಯವಾಗದೇ ಕಾರೊಂದು ಹಳ್ಳಕ್ಕೆ ಮಗುಚಿ ಬಿದ್ದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ-ಗೆಂಡೇಹಳ್ಳಿ ರಸ್ತೆಯ ಕನ್ನಾಪುರ ಸಮೀಪದ ಬೊಮ್ಮೇನಹಳ್ಳಿ ಎಂಬಲ್ಲಿ ನಡೆದಿದೆ.
ಇದನ್ನೂ ಓದಿ; ಯಾವುದೇ ಗ್ಯಾರಂಟಿ ಬೇಕಿಲ್ಲ!; ಕೇಂದ್ರ ಸರ್ಕಾರದಿಂದಲೇ ಸಿಗುತ್ತೆ 2 ಲಕ್ಷ ಲೋನ್; ಹೇಗೆ? ಇಲ್ಲಿದೆ ಡಿಟೈಲ್ಸ್
ಅಧಿಕಾರಿಗಳ ನಿರ್ಲಕ್ಷ್ಯ, ಗ್ರಾಮಸ್ಥರ ಆಕ್ರೋಶ:
ಬೊಮ್ಮೇನಹಳ್ಳಿ ಸಮೀಪ ಹರಿಯುತ್ತಿರುವ ಹಳ್ಳಕ್ಕೆ ನಿರ್ಮಾಣ ಮಾಡಿರುವ ಸೇತುವೆ ಬಹಳ ಕಿರಿದಾಗಿದ್ದು, ವಾಹನಗಳು ಏಕಾಏಕಿ ಎದುರಾದಾಗ ಪರಸ್ಪರ ರಸ್ತೆ ಬಿಟ್ಟುಕೊಡಲು ಸಾಧ್ಯವಾಗುತ್ತಿಲ್ಲ. ಸೇತುವೆ ತುಂಬಾ ಕಿರಿದಾಗಿದ್ದು, ಸೇತುವೆಗೆ ಯಾವುದೇ ತಡೆಗೋಡೆಯನ್ನು ಕೂಡ ನಿರ್ಮಾಣ ಮಾಡಿಲ್ಲ. ಏಕಕಾಲದಲ್ಲಿ ಎರಡು ವಾಹನಗಳು ಎದುರಾದಾಗ ಅಪಘಾತಗಳು ಸಂಭವಿಸಿವೆ. ಇತ್ತೀಚೆಗೆ ಈ ರಸ್ತೆಯಲ್ಲಿ ವಾಹನ ದಟ್ಟಣೆ ಅಧಿಕವಾಗಿದ್ದು, ಈ ಸೇತುವೆ ಈಗಿನ ವಾಹನ ದಟ್ಟಣೆಗೆ ಸೂಕ್ತವಾಗಿಲ್ಲ. ಮಳೆಗಾಲದಲ್ಲಿ ಹೊಳೆಯ ನೀರು ಸೇತುವೆಯ ಮೇಲೆಯೇ ಉಕ್ಕಿ ಹರಿಯುತ್ತದೆ. ಜೊತೆಗೆ ಈ ಸೇತುವೆ ತಿರುವಿನಲ್ಲಿ ಇರುವುದರಿಂದ ಎದುರಿನಿಂದ ಬರುವ ವಾಹನಗಳ ಸೂಚನೆಯೂ ತಿಳಿಯುವುದಿಲ್ಲ. ಹಾಗಾಗಿ ಈ ಸೇತುವೆಯನ್ನು ಅಗಲೀಕರಣಗೊಳಿಸಿ ತಡೆಗೋಡೆ ಸಹಿತ ಉತ್ತಮ ಸೇತುವೆ ನಿರ್ಮಾಣ ಮಾಡಬೇಕು ಎಂದು ಸ್ಥಳೀಯರು ಆಗ್ರಹಿಸುತ್ತಲೇ ಬರುತ್ತಿದ್ದಾರೆ. ಆದರೆ, ಇದರ ಬಗ್ಗೆ ಜನಪ್ರತಿನಿಧಿಗಳು, ಅಧಿಕಾರಿಗಳು ಗಮನ ಹರಿಸಿಲ್ಲ. ಈ ಸೇತುವೆ ಮೇಲ್ದರ್ಜೆಗೆ ಏರಿಸುವ ಬಗ್ಗೆ ಸ್ಥಳೀಯ ಶಾಸಕರು ಗಮನಹರಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. (ವರದಿ- ತನು ಕೊಟ್ಟಿಗೆಹಾರ)
ಇದನ್ನೂ ಓದಿ; ಈ ಯೋಜನೆಯಡಿ ಪ್ರತಿ ತಿಂಗಳು 3000 ಹಣ; ಕೂಡಲೇ ಈ ಕೆಲಸ ಮಾಡಿ












