ಕೊಟ್ಟಿಗೆಹಾರ: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳನ್ನು ಸಂಪರ್ಕಿಸುವ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಲಾರಿ ಪಲ್ಟಿಯಾದ ಘಟನೆ ನಡೆದಿದೆ.
ಇದನ್ನೂ ಓದಿ: ವಿಂಡೋಸ್ 10 ಬಗ್ಗೆ ಡೊಡ್ಡ ಘೋಷಣೆ; ಏನದು..?

ಹಾಸನದಿಂದ ಮಂಗಳೂರಿನತ್ತ ಸಾಗುತ್ತಿದ್ದ ಲಾರಿ ಆರನೇ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿದಿದೆ. ಅಪಘಾತದಲ್ಲಿ ಲಾರಿ ಭಾಗಶಃ ಹಾನಿಯಾಗಿದ್ದು, ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಚಾಲಕ ಪಾರಾಗಿದ್ದಾನೆ.
ಗಾಯಗೊಂಡ ಚಾಲಕನನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದ್ದು, ಚಿಕಿತ್ಸೆ ನೀಡಲಾಗಿದೆ. ಅಪಘಾತದ ಪರಿಣಾಮವಾಗಿ ಕೆಲಕಾಲ ಟ್ರಾಫಿಕ್ ಅಸ್ತವ್ಯಸ್ತಗೊಂಡಿತ್ತು. ಬಳಿಕ ಪೊಲೀಸರ ಸಹಕಾರದಿಂದ ವಾಹನ ತೆರವುಗೊಳಿಸಿ ಸಂಚಾರವನ್ನು ಸರಳಗೊಳಿಸಲಾಯಿತು. (ವರದಿ- ತನು ಕೊಟ್ಟಿಗೆಹಾರ)
ಇದನ್ನೂ ಓದಿ: ಉಚಿತ ಎಲ್ಪಿಜಿ ಸಂಪರ್ಕ | ಅರ್ಜಿ ಸಲ್ಲಿಕೆ ಹೇಗೆ?












