ದಾವಣಗೆರೆ/ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಸ್ಕೂಟರ್ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಆರ್ಟಿಓ ಅಧೀಕ್ಷಕ ಸ್ಥಳದಲ್ಲೇ ಮೃತಪಟ್ಟ ಘಟನೆ ದಾವಣಗೆರೆ ನಗರದ ರಿಂಗ್ ರೋಡ್ನ ನವೋದಯ ಶಾಲೆ ಎದುರು ನಡೆದಿದೆ. ಆರ್ಟಿಓ ಕಚೇರಿಯ ಅಧೀಕ್ಷಕರಾಗಿದ್ದ ತಿಪ್ಪೇಸ್ವಾಮಿ (43) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ: ರೈತರಿಗೆ ಗುಡ್ ನ್ಯೂಸ್!; ಕೃಷಿ ಉಪಕರಣ ಖರೀದಿಗೆ 50% ಸಬ್ಸಿಡಿ

ನಗರದ ರಿಂಗ್ ರೋಡ್ ಬಳಿ ತಿಪ್ಪೇಸ್ವಾಮಿ ಅವರು ಸ್ಕೂಟರ್ನಲ್ಲಿ ಹೋಗುತ್ತಿದ್ದಾಗ ಹಿಂಬದಿಯಿಂದ ವೇಗವಾಗಿ ಬಂದ ಕೆಎಸ್ಆರ್ಟಿಸಿ ಬಸ್ ಸ್ಕೂಟರ್ಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ತಿಪ್ಪೇಸ್ವಾಮಿ ಅವರು ರಸ್ತೆಗೆ ಬಿದ್ದಿದ್ದರು. ಅವರು ಹೆಲ್ಮೆಟ್ ಧರಿಸಿದ್ದರೂ ಬಸ್ನ ಟೈಯರ್ ಅವರ ತಲೆಯ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೂಲತ: ಚಿಕ್ಕಮಗಳೂರು ಜಿಲ್ಲೆಯ ತರಿಕೆರೆ ತಾಲೂಕಿ ಶಿವಣಿ ನಿವಾಸಿಯಾಗಿದ್ದ ತಿಪ್ಪೇಸ್ವಾಮಿ ಅವರು ದಾವಣಗೆರೆಯಲ್ಲಿ ಆರ್ಟಿಓ ಕಚೇರಿಯ ಅಧೀಕ್ಷಕರಾಗಿದ್ದರು.
ಇದನ್ನೂ ಓದಿ: ರೈಲ್ವೆ NTPC ಗ್ರಾಜುವೇಟ್ ನೇಮಕಾತಿ; 30,307 ಹುದ್ದೆಗೆ ಅರ್ಜಿ ಆಹ್ವಾನ
ದಾವಣಗೆರೆ ದಕ್ಷಿಣ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.












