ಸಕಲೇಶಪುರ: (ನ್ಯೂಸ್ ಮಲ್ನಾಡ್ ವರದಿ) ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಬಸ್ ಶಾಲೆಯ ಕಾಂಪೌಂಡ್ ಹಾಗೂ ಮನೆಗೆ ಡಿಕ್ಕಿ ಹೊಡೆದು ಓರ್ವ ಪ್ರಯಾಣಿಕ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಾಗೆ ಗ್ರಾಮದಲ್ಲಿ ನಡೆದಿದೆ. ಚನ್ನರಾಯಪಟ್ಟಣ ತಾಲೂಕಿನ ಉದಯಪುರ ಗ್ರಾಮದ ಅಮೃತ್ ರಾಜ್ (34) ಸಾವನ್ನಪ್ಪಿದ ವ್ಯಕ್ತಿ.
ಇದನ್ನೂ ಓದಿ; ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್; ರಾಜ್ಯ ಸರ್ಕಾರದಿಂದ ಬೃಹತ್ ಉದ್ಯೋಗ ಮೇಳ

ಬೆಂಗಳೂರಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ನ ಆಕ್ಸಲ್ ತುಂಡಾಗಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿದ ಜಮೀನಿಗೆ ನುಗ್ಗಿದೆ. ಬಳಿಕ ಮನೆಗೆ ಡಿಕ್ಕಿ ಹೊಡೆದು ಶಾಲೆಯ ಕಾಂಪೌAಡ್ ಗೆ ಡಿಕ್ಕಿ ಹೊಡೆದಿದೆ. ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, 10 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳು ಸಕಲೇಶಪುರದ ಕ್ರಾಫರ್ಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಗಂಭೀರವಾಗಿ ಗಾಯಗೊಂಡಿರುವ ಗಾಯಾಳುಗಳನ್ನು ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ; ಟ್ಯಾಕ್ಸಿಗಳ ಕಳ್ಳಾಟಕ್ಕೆ ಬ್ರೇಕ್; ಸಾರಿಗೆ ಇಲಾಖೆಯಿಂದ ಏಕರೂಪ ದರ ಅಸ್ತ್ರ ಪ್ರಯೋಗ
ಜಮೀನಿನಲ್ಲಿದ್ದ ವಾಸದ ಮನೆಗೆ ಸಾರಿಗೆ ಬಸ್ ಡಿಕ್ಕಿ ಹೊಡೆದಿದ್ದು, ಅದೃಷ್ಟವಶಾತ್ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಮನೆಯ ಅರ್ಧ ಭಾಗ ಕುಸಿದು ಬಿದ್ದಿದೆ. ಶಾಲೆಯ ಕಾಂಪೌಂಡ್ ಜಖಂಗೊಂಡಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಕಲೇಶಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಮಂಗನ ಕಾಯಿಲೆ | ಚಿಕ್ಕಮಗಳೂರು ಜಿಲ್ಲೆ ಸೇರಿದಂತೆ 49 ಪಾಸಿಟಿವ್ ಪ್ರಕರಣ ವರದಿ
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಂಗನ ಕಾಯಿಲೆ ಪ್ರಕರಣ ಹೆಚ್ಚುತ್ತಿದ್ದು, ಈ ಮಧ್ಯೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಬೇಗಾನೆ ಗ್ರಾಮದ 79 ವರ್ಷದ ವೃದ್ಧ ಮಂಗನ ಕಾಯಿಲೆಗೆ ಬಲಿಯಾಗಿದ್ದಾರೆ. ಈ ಕುರಿತು ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ.
ಇದನ್ನೂ ಓದಿ; ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದಲ್ಲಿ ಉದ್ಯೋಗ; ನೇರ ಸಂದರ್ಶನ ಮೂಲಕ ಆಯ್ಕೆ
ಮೂರು ಜಿಲ್ಲೆಗಳ ಅಧಿಕಾರಿಗಳ ಸಭೆ:
ಮಂಗನ ಕಾಯಿಲೆ ಚಿಕಿತ್ಸೆ ಕುರಿತು ಶನಿವಾರ ಡಿ.ಎಚ್.ಒ ಕಚೇರಿ ಸಭಾಂಗಣದಲ್ಲಿ ಶಿವಮೊಗ್ಗ, ಉತ್ತರ ಕನ್ನಡ, ಚಿಕ್ಕಮಗಳೂರು ಜಿಲ್ಲೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಕೋವಿಡ್ ಸೋಂಕಿನ ಮೇಲ್ವಿಚಾರಣೆಗೆ ತಜ್ಞ ವೈದ್ಯರ ನೇತೃತ್ವದಲ್ಲಿ ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಆರಂಭಿಸಿದ್ದ ಟೆಲಿ ಐಸಿಯು ವ್ಯವಸ್ಥೆ ಇನ್ನು ಮುಂದೆ ಮಂಗನ ಕಾಯಿಲೆ (ಕೆ.ಎಫ್.ಡಿ) ಸೋಂಕಿತರ ನೆರವಿಗೆ ಬಳಕೆಯಾಗಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ ಡಿ.ರಣದೀಪ್ ಹೇಳಿದರು. ಈಗ ಕೋವಿಡ್ ಸೋಂಕು ಕಡಿಮೆ ಆಗಿದೆ. ಹೀಗಾಗಿ ಈ ತಜ್ಞರ ತಂಡ ಕೆ.ಎಫ್.ಡಿ ವಿರುದ್ಧದ ಹೋರಾಟಕ್ಕೆ ಬಳಕೆಯಾಗಲಿದೆ. ಸೋಂಕಿತರಿಗೆ ಚಿಕಿತ್ಸೆಯ ಸಲಹೆ, ವೈದ್ಯಕೀಯ ನೆರವಿನ ಬಗ್ಗೆ ಸಂಬಂಧಿಸಿದವರೊಂದಿಗೆ ದಿನದ 24 ಗಂಟೆಯ ಸಂಪರ್ಕದಲ್ಲಿರುತ್ತದೆ. ಸೋಂಕಿತರಿಗೂ ಸಲಹೆ ಸೂಚನೆ ನೀಡಲಿದ್ದಾರೆ ಎಂದರು.
ಇದನ್ನೂ ಓದಿ; ಮಹಿಳೆಯರೇ ಸ್ವಂತ ಉದ್ಯಮ ಪ್ರಾರಂಭಿಸೋ ಆಸಕ್ತಿ ಇದೆಯೇ?; ಈ ಯೋಜನೆಯಡಿ ಸಿಗುತ್ತೆ 3 ಲಕ್ಷ ಸಾಲ
ಎರಡು ಜಿಲ್ಲೆಗಳಲ್ಲಿ ಇಬ್ಬರು ಸಾವು:
ವಾಡಿಕೆಯಂತೆ ಈ ವರ್ಷವೂ ಮೂರು ಜಿಲ್ಲೆಗಳಲ್ಲಿ ಕೆ.ಎಫ್.ಡಿ ಪ್ರಕರಣಗಳು ವರದಿಯಾಗಿವೆ. ಜ.1 ರಿಂದ ಫೆ.2 ರವರೆಗೆ ರಾಜ್ಯದಲ್ಲಿ ಒಟ್ಟು 2,288 ಕೆ.ಎಫ್.ಡಿ ಪರೀಕ್ಷೆ ನಡೆಸಲಾಗಿದೆ. ಶಿವಮೊಗ್ಗದಲ್ಲಿ 12, ಉತ್ತರ ಕನ್ನಡ 34 ಹಾಗೂ ಚಿಕ್ಕಮಗಳೂರಿನಲ್ಲಿ 3 ಸೇರಿ ಒಟ್ಟು 49 ಪಾಸಿಟಿವ್ ಪ್ರಕರಣ ವರದಿಯಾಗಿದೆ. ಶಿವಮೊಗ್ಗ ಮತ್ತು ಚಿಕ್ಕಮಗಳೂರಿನಲ್ಲಿ ತಲಾ ಒಬ್ಬರು ಸಾವಿಗೀಡಾಗಿದ್ದಾರೆ.
ವೈದ್ಯಾಧಿಕಾರಿಗಳಿಗೆ ಸೂಚನೆ:
ಮಂಗನ ಕಾಯಿಲೆ (ಕೆಎಫ್ಡಿ) ಕಂಡುಬರುವ ಪ್ರದೇಶದಲ್ಲಿ ಯಾವುದೇ ರೀತಿಯ ಜ್ವರ ಕಂಡರೂ ಪರೀಕ್ಷೆ ಮಾಡಿಸಬೇಕು. ಸೋಂಕಿತರಿಗೆ ಸೂಕ್ತ ಚಿಕಿತ್ಸೆ ಹಾಗೂ ಸೋಂಕು ಹೆಚ್ಚದಂತೆ ಕ್ರಮ ವಹಿಸಬೇಕು. ಕೆ.ಎಫ್.ಡಿ ಸೋಂಕು ಪಾಸಿಟಿವ್ ಎಂದು ಗೊತ್ತಾದ ತಕ್ಷಣ ಆಸ್ಪತ್ರೆಗೆ ದಾಖಲಿಸಬೇಕು. ರೋಗ ಪ್ರಸರಣ ಸಾಮಾನ್ಯವಾಗಿ ಜನವರಿಯಿಂದ ಮಾರ್ಚ್ವರೆಗೆ ಇದ್ದು, ಈ ವೇಳೆ ತೀರ್ಥಹಳ್ಳಿ, ಸಾಗರ, ಸಿದ್ದಾಪುರ ಮತ್ತು ಹೊನ್ನಾವರ ಉಪ ವಿಭಾಗೀಯ ಆಸ್ಪತ್ರೆಗಳಲ್ಲಿ ಹಾಸಿಗೆಗಳ ಮೀಸಲಿರಿಸಬೇಕು, ಅಗತ್ಯ ಔಷಧಿಗಳ ಲಭ್ಯತೆ ಇರುವಂತೆ ನೋಡಿಕೊಳ್ಳಬೇಕು ಎಂದು ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಡಿಎಂಪಿ ವಿತರಣೆ:
ಕೊಪ್ಪ ಹಾಗೂ ಶೃಂಗೇರಿ, ಎನ್.ಆರ್. ಪುರ ತಾಲೂಕಿನ ಕಾಡಂಚಿನ ಗ್ರಾಮಗಳ ಜನರಿಗೆ ಆರೋಗ್ಯ ಇಲಾಖೆಯಿಂದ ಡಿಎಂಪಿ ಆಯಿಲ್ ವಿತರಿಸಲಾಗುತ್ತಿದೆ. ಮನೆಯಿಂದ ಹೊರಗೆ, ಅರಣ್ಯ ಪ್ರದೇಶಕ್ಕೆ ಹೋಗುವಾಗ ಕಡ್ಡಾಯವಾಗಿ ಡಿಎಂಪಿ ಆಯಿಲ್ ಹಚ್ಚಿಕೊಳ್ಳುವಂತೆ ಅರಿವು ಮೂಡಿಸಲಾಗುತ್ತಿದೆ. ಡಿಎಂಪಿ ಆಯಿಲ್ ಹಚ್ಚಿಕೊಂಡರೆ ಉಣುಗುಗಳು ಮೈಗೆ ಅಂಟಿ ಕಚ್ಚುವುದಿಲ್ಲ, ಇದರಿಂದ ಮಂಗನ ಕಾಯಿಲೆಯಿಂದ ಬಚಾವಾಗಬಹುದಾಗಿದೆ.












