ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಎರಡು KSRTC ಬಸ್ಸು: ಟ್ರಾಫಿಕ್ ಜಾಮ್

ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು- ದಕ್ಷಿಣ ಕನ್ನಡ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟಿಯಲ್ಲಿ ಮಳೆಯ ಪರಿಣಾಮ ಹಾಗೂ KSRTC ಬಸ್ ಹಾಳಾಗಿ ನಿಂತಿದ್ದರಿಂದ ನೂರಾರು ಪ್ರಯಾಣಿಕರು ಮಳೆಯಲ್ಲಿ ಸಿಲುಕಿಕೊಂಡು ಪರದಾಡುವಂತಾಗಿದೆ. ಎರಡು ಕೆಎಸ್‌ಆರ್‌ಟಿಸಿ ಬಸ್ಸುಗಳು ಕೆಟ್ಟು ನಿಂತ ಪರಿಣಾಮ, ವಾಹನಗಳು ಅತ್ತಿತ್ತ ಹೋಗಲಾಗದೆ ಪ್ರಯಾಣಿಕರು ಹರಸಹಾಸ ಪರದಾಡುವಂತಾಗಿದೆ.


ಇದನ್ನೂ ಓದಿ: ಹೊಸ ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಸೋರಿಗೆ ಬಂತು ಮತ್ತೊಂದು ಅಪ್ಡೇಟ್; ಏನದು? ಇಲ್ಲಿದೆ ನೋಡಿ ಡಿಟೈಲ್ಸ್


ಚಾರ್ಮಾಡಿ ಘಾಟಿನ ಅಣ್ಣಪ್ಪ ಸ್ವಾಮಿ ದೇವಾಲಯದ ಬಳಿ ಮಳೆಯ ನಡುವೆ ಕೆಎಸ್‌ಆರ್‌ಟಿಸಿ ಬಸ್ಸುಗಳೆರಡು ಕೆಟ್ಟು ನಿಂತ ಪರಿಣಾಮ ಕಿಲೋಮೀಟರ್‌ ಗಳಷ್ಟು ದೂರ ಟ್ರಾಫಿಕ್ ಜಾಮ್ ಉಂಟಾಯಿತು. ಹೀಗಾಗಿ ಬೆಳಗಿನ ಜಾವದಿಂದ ನೂರಾರು ವಾಹನಗಳು ಸಿಲುಕಿಕೊಂಡಿದ್ದವು. ಮಂಗಳೂರಿಗೆ ರೋಗಿಯನ್ನು ಒಯ್ಯುತ್ತಿದ್ದ ಆಂಬ್ಯುಲೆನ್ಸ್ ಟ್ರಾಫಿಕ್ ನಡುವೆ ಸಿಲುಕಿಕೊಂಡಿದ್ದು, ಟ್ರಾಫಿಕ್ ಕ್ಲಿಯರ್ ಮಾಡಲು ಬಣಕಲ್, ಮೂಡಿಗೆರೆ ಪೊಲೀಸರು ಹರಸಾಹಸಪಟ್ಟರು. (ವರದಿ-ತನು ಕೊಟ್ಟಿಗೆಹಾರ)


ಇದನ್ನೂ ಓದಿ: ರೈತರೇ ಗಮನಿಸಿ; ಬರಪರಿಹಾರ ಹಣದ ಕುರಿತು ಸರ್ಕಾರದಿಂದ ಮಹತ್ವದ ಸೂಚನೆ; ತಪ್ಪದೇ ಈ ಸುದ್ದಿ ಓದಿ


ಕಾಫಿನಾಡ ಮಲೆನಾಡು ಭಾಗದಲ್ಲಿ ಮಳೆ ಅಬ್ಬರ

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಕಳೆದ ರಾತ್ರಿ ಜಿಲ್ಲೆಯ ಹಲವೆಡೆ ಮಳೆ ಅಬ್ಬರಿಸಿದ್ದ ಪರಿಣಾಮ ಹಲವು ಅವಾಂತರ ಸೃಷ್ಟಿಯಾಗಿದೆ.


ಇದನ್ನೂ ಓದಿ: ರೈತರೇ ಗಮನಿಸಿ; ಪಹಣಿ ಪತ್ರಕ್ಕೆ ಆಧಾರ್ ಲಿಂಕ್ ಕಡ್ಡಾಯ; ಈ ರೀತಿ ಮಾಡಿ


ಚಿಕ್ಕಮಗಳೂರು ನಗರದಲ್ಲಿ ಬೈಕ್ ಗಳ ಮೇಲೆ ಕಾಂಪೌಂಡ್ ಕುಸಿದು ಬಿದ್ದು, ಎರಡು ಬೈಕ್ ಗಳು ಸಂಪೂರ್ಣ ಜಖಂಗೊಂಡಿದೆ. ಅಲ್ಲದೆ ಭಾರೀ ಮಳೆಯಿಂದ ಗುಡಿಸಲಿಗೆ ಚರಂಡಿ ನೀರು ನುಗ್ಗಿದ ಘಟನೆ ಚಿಕ್ಕಮಗಳೂರು ತಾಲೂಕಿನ ಉದ್ದೇಬೋರನಹಳ್ಳಿಯಲ್ಲಿ ನಡೆದಿದೆ.

ಇದನ್ನೂ ಓದಿ: ರೇಷನ್ ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್; ತಪ್ಪದೆ ಈ ಸುದ್ದಿ ಓದಿ


ಎರಡು ಗುಡಿಸಲು ಹಾಗೂ ಗೊಬ್ಬರದ ಗೋಡಾನ್ ಗೆ ಮಳೆ ನೀರು ನುಗ್ಗಿದ್ದು, ಚರಂಡಿ ಕಾಮಗಾರಿಯನ್ನ ಅರ್ಧಕ್ಕೆ ನಿಲ್ಲಿಸಿರುವ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ, ಇದೇ ಸ್ಥಳದಲ್ಲಿ ಗೋಡಾನ್ ಗೆ ನೀರು ನುಗ್ಗಿರೋದ್ರಿಂದ ಅಪಾರ ಪ್ರಮಾಣದ ಗೊಬ್ಬರ ಕೂಡ ಹಾಳಾಗಿದೆ. ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ಈ ಅವಾಂತರ ಸೃಷ್ಟಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ವಾಹನಗಳಿಗೆ hsrp ಅಳವಡಿಕೆ; ಗಡುವು ಮತ್ತೆ ವಿಸ್ತರಿಸುತ್ತಾ ಸರ್ಕಾರ…?


ಮನೆ ಮೇಲೆ ಮರ ಬಿದ್ದು ಸಂಪೂರ್ಣ ಜಖಂ:
ಇನ್ನು ಚಿಕ್ಕಮಗಳೂರು ತಾಲೂಕಿನ ಆಲ್ದೂರು ಗ್ರಾಮದ ಕಸ್ಕೆ ಎಂಬ ಗ್ರಾಮದಲ್ಲಿ ಮನೆ ಮೇಲೆ ಮರ ಬಿದ್ದು ಮನೆ ಸಂಪೂರ್ಣ ಜಖಂಗೊAಡಿದೆ. ಅದೃಷ್ಟವಶಾತ್ ಮನೆಯವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.