ಚಿಕ್ಕಮಗಳೂರು: ಮರದಿಂದ ಬಿದ್ದು ಕೂಲಿ ಕಾರ್ಮಿಕ ಸಾವು

ಚಿಕ್ಕಮಗಳೂರು: (ನ್ಯೂಸ್‌ ಮಲ್ನಾಡ್‌ ವರದಿ) ಕಾಫಿ ತೋಟದ ಮಾಲೀಕರು ಮತ್ತು ಮೇಸ್ತ್ರಿಗಳ ನಿರ್ಲಕ್ಷ್ಯದಿಂದ ಅಮಾಯಕ ಕಾರ್ಮಿಕನೊಬ್ಬ ಮೃತಪಟ್ಟ ದಾರುಣ ಘಟನೆ ಜಿಲ್ಲೆಯ ಮಲ್ಲಂದೂರು ಪೊಲೀಸ್ ಠಾಣೆ ವ್ಯಾಪ್ತಿಯ ಜೋಳದಾಳ್ ಪಾಳ್ಯದಲ್ಲಿ ನಡೆದಿದೆ.


ಇದನ್ನೂ ಓದಿ: ಈ ಕುಟುಂಬಗಳಿಗೆ ಎಲ್​ಪಿಜಿ ಗ್ಯಾಸ್ ಸಿಗಲ್ಲ; ಸರ್ಕಾರದ ಹೊಸ ನಿಯಮ


ತ್ಯಾಗರಾಜ್ ಗೌಡ ಅವರ ಮಾಲೀಕತ್ವದ ಬಿಲ್ಲೇಶ್ವರ ಕಾಫಿ ತೋಟದಲ್ಲಿ ಮರಗಸಿಕೆಲಸ ಮಾಡುತ್ತಿದ್ದ ತಮಿಳುನಾಡು ಮೂಲದ ಚಿನ್ನರಾಜು (45) ಮೃತ ದುರ್ದೈವಿ. ಕಳೆದ 25 ದಿನಗಳಿಂದ ತೋಟದಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಅವರು, ಘಟನೆ ನಡೆದ ದಿನ ಸುರಕ್ಷತಾ ಪರಿಕರಗಳನ್ನು ನೀಡುವಂತೆ ಮಾಲೀಕರು ಹಾಗೂ ಮೇಸ್ತ್ರಿ ಪರುವತನ್ ಅವರಿಗೆ ಮನವಿ ಮಾಡಿದ್ದರು ಎನ್ನಲಾಗಿದೆ. ಹೆಲ್ಮೆಟ್, ಗ್ರಿಪ್ಪರ್, ಸೊಂಟಕ್ಕೆ ಕಟ್ಟುವ ರಕ್ಷತಾ ಹಗ್ಗ ಹಾಗೂ ಏಣಿ ಸೇರಿದಂತೆ ಅಗತ್ಯ ಸುರಕ್ಷತಾ ಸಾಧನಗಳನ್ನು ನೀಡದೇ ನಿರ್ಲಕ್ಷ್ಯ ತೋರಲಾಗಿದೆ. ಇದಲ್ಲದೆ, ಬಲವಂತವಾಗಿ ಮರ ಹತ್ತಿಸಿ ಕೆಲಸ ಮಾಡಿಸಲಾಗಿದೆ ಎಂಬ ಆರೋಪಗಳು ಕೇಳಿಬಂದಿವೆ.

ಗರ್ಗೆ ಮರವನ್ನು ಹತ್ತಿ ಕೊಂಬೆ ಕಡಿಯುತ್ತಿದ್ದ ವೇಳೆ ಆಕಸ್ಮಿಕವಾಗಿ ಕೊಂಬೆ ಮುರಿದು ಚಿನ್ನರಾಜು ಕೆಳಕ್ಕೆ ಬಿದ್ದಿದ್ದಾರೆ. ಪರಿಣಾಮ ತೀವ್ರವಾಗಿ ಗಾಯಗೊಂಡ ಅವರನ್ನು ತಕ್ಷಣವೇ ಎಂ.ಜಿ. ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.


ಇದನ್ನೂ ಓದಿ: LPG ಗ್ರಾಹಕರಿಗೆ ಮಹತ್ವದ ಸೂಚನೆ; ಆಧಾರ್‌ ಇ ಕೆವೈಸಿ ಮಾಡದಿದ್ರೆ ಸಿಗಲ್ಲ ಸಿಲಿಂಡರ್‌ !


ಮೃತರ ಪುತ್ರ ನೀಡಿದ ದೂರಿನ ಮೇರೆಗೆ ತೋಟದ ಮಾಲೀಕರು, ರೈಟರ್ ಹಾಗೂ ಮೇಸ್ತ್ರಿ ವಿರುದ್ಧ ಮಲ್ಲಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.