ಕೊಪ್ಪ: ಪೊಲೀಸ್​ ಠಾಣೆಯಲ್ಲೇ ನಿಂತಿದ್ದ ಕಾರಲ್ಲಿತ್ತು ಲಕ್ಷಾಂತರ ರೂಪಾಯಿ ಹಣ ಚಿನ್ನ, ಬೆಳ್ಳಿ

ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ಎಸ್ಟೇಟ್ ಕಳ್ಳತನ ಪ್ರಕರಣ ಒಂದರಲ್ಲಿ ವಶಕ್ಕೆ ಪಡೆದ ವಾಹನದಲ್ಲಿ ಲಕ್ಷಾಂತರ ರೂಪಾಯಿ ಹಣ, ಚಿನ್ನ ಮತ್ತು ಬೆಳ್ಳಿ ಪತ್ತೆಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ನಡೆದಿದೆ.


ಇದನ್ನೂ ಓದಿ: ಬಸ್ ಗಳ ಸುರಕ್ಷತೆಗೆ ಮಹತ್ವದ ಕ್ರಮ; ಈ ನಿಯಮಗಳ ಪಾಲನೆ ಕಡ್ಡಾಯ!


ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಎಸ್ಟೇಟ್ ಒಂದರಲ್ಲಿ ಈ ಹಿಂದೆ ನಡೆದಿದ್ದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ಮೂವರು ಆರೋಪಿಗಳು ಹಾಗೂ ಕೃತ್ಯಕ್ಕೆ ಬಳಸಿದ ಎರಡು ವಾಹನಗಳನ್ನು ವಶಕ್ಕೆ ಪಡೆಯಲಾಗಿತ್ತು.

ನಿನ್ನೆ ಕೊಪ್ಪ ಪೊಲೀಸ್ ಠಾಣೆಯ ಪೊಲೀಸರು ಎರಡು ವಾಹನಗಳನ್ನು ಕೂಲಂಕುಶವಾಗಿ ಶೋಧನೆಗೆ ಒಳಪಡಿಸಿದಾಗ ಸದರಿ ವಾಹನಗಳಲ್ಲಿ 595.5 ಗ್ರಾಂ ತೂಕವುಳ್ಳ ಚಿನ್ನಾಭರಣ & 589 ಗ್ರಾಂ ತೂಕದ ಬೆಳ್ಳಿ ವಸ್ತುಗಳು ಹಾಗೂ 3,41,150/- ರೂ ನಗದು ಹಣ ಸಿಕ್ಕಿದ್ದು, ಸದರಿ ಸ್ವತ್ತನ್ನು ವಶಕ್ಕೆ ಪಡೆದು ಮುಂದಿನ ಕಾನೂನು ಪ್ರಕ್ರಿಯೆಗೆ ಒಳಪಡಿಸಿದ್ದಾರೆ.


ಇದನ್ನೂ ಓದಿ: ರಾಜ್ಯದ ಪೊಲೀಸ್ ಸಿಬ್ಬಂದಿಗಳ ಸ್ಲೋಚ್ ಕ್ಯಾಪ್ ಗೆ ಗುಡ್ ಬೈ; ಪೊಲೀಸ್ ಪೇದೆಗಳಿಗೆ ಹೊಸ ಟೋಪಿ


 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.