<p>ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯ (ESA)ಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಪ್ರಕಟಿಸಿರುವ ಹೊಸ ಕರಡು ಅಧಿಸೂಚನೆ ಮಲೆನಾಡು ಭಾಗದ ರೈತರು ಮತ್ತು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ ಎಂದು ಮಲೆನಾಡು ಕರಾವಳಿ ಜನಪರ ಒಕ್ಕೂಟದ ರಾಜ್ಯ ಸಂಚಾಲಕ ಅನಿಲ್ ಹೊಸಕೊಪ್ಪ ತಿಳಿಸಿದ್ದಾರೆ. ಈಗಿರುವ ಅರಣ್ಯ ಕಾನೂನುಗಳೇ ರೈತರ ಬದುಕಿಗೆ ಸಂಕಷ್ಟ ಉಂಟುಮಾಡಿವೆ. ಇಂತಹ ಸಂದರ್ಭದಲ್ಲಿ ಹೊಸ ಕರಡು ಅಧಿಸೂಚನೆಯಿಂದ ಮಲೆನಾಡಿನ ಸಾವಿರಾರು ಗ್ರಾಮಗಳನ್ನು ಪರಿಸರ ಸೂಕ್ಷ್ಮ ವಲಯಕ್ಕೆ ಸೇರಿಸುವ ಪ್ರಸ್ತಾಪ ಮಾಡಿರುವುದು […]</p>

<p>ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತ ಮರು ಎಣಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಯಥಾಸ್ಥಿತಿ ಮುಂದುವರಿಸಲು ಸೂಚನೆ ನೀಡಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಆಗಸ್ಟ್‌ 19ಕ್ಕೆ ಮುಂದೂಡಿಕೆ ಮಾಡಿದೆ. 2023ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಶೃಂಗೇರಿ ಕ್ಷೇತ್ರದಲ್ಲಿ ಒಟ್ಟು 1,811 ಅಂಚೆ ಮತಗಳು ಚಲಾವಣೆಯಾಗಿದ್ದವು. ಅದರಲ್ಲಿ 279 ಮತಗಳನ್ನು ತಿರಸ್ಕರಿಸಲಾಗಿತ್ತು. ಅಂತಿಮ ಫಲಿತಾಂಶದಲ್ಲಿ ಟಿ.ಡಿ. ರಾಜೇಗೌಡ ಅವರು 201 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಈ ಫಲಿತಾಂಶವನ್ನು ಪ್ರಶ್ನಿಸಿದ ಬಿಜೆಪಿ ಅಭ್ಯರ್ಥಿ ಜೀವರಾಜ್ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ […]</p>