ತರೀಕೆರೆ: (ನ್ಯೂಸ್ ಮಲ್ನಾಡ್ ವರದಿ) ಮನೆಯ ಬಳಿ ನಿಂತಿದ್ದ ಬಾಲಕನ ಮೇಲೆ ಚಿರತೆಯೊಂದು ದಾಳಿ ಮಾಡಿದ ಪರಿಣಾಮ ಬಾಲಕ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಬೈರಾಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಇದನ್ನೂ ಓದಿ: ಪಿಎಂ-ಕಿಸಾನ್ 21ನೇ ಕಂತು ಬಿಡುಗಡೆ ಮಾಡಿದ ಪ್ರಧಾನಿ ಮೋದಿ: 9 ಕೋಟಿ ರೈತರಿಗೆ ಒಟ್ಟು 18,000 ಕೋಟಿ ರೂ. ಹಣ ಸಂದಾಯ

ಲಿಂಗದಹಳ್ಳಿ ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಹೃದಯ್ (11) ಚಿರತೆ ದಾಳಿಗೆ ಒಳಗಾದ ಬಾಲಕನಾಗಿದ್ದು, ಗಂಭೀರ ಗಾಯಗೊಂಡಿರುವ ಬಾಲಕನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ವಾರದ ಹಿಂದಷ್ಟೆ 5 ವರ್ಷದ ಬಾಲಕಿ ಚಿರತೆ ದಾಳಿಗೆ ಬಲಿಯಾಗಿದ್ದು, ಆ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಕಡೆ ಚಿರತೆ ದಾಳಿ ನಡೆಸಿರುವುದು ಗ್ರಾಮಸ್ಥರಲ್ಲಿ ಆತಂಕ ಹೆಚ್ಚಿಸಿದೆ.
ಇದನ್ನೂ ಓದಿ: ಆಲದ ಮರದ ನೆರಳಿನಲ್ಲಿ ಶುರುವಾದ ಭಾರತೀಯ ಸ್ಟಾಕ್ ಮಾರ್ಕೆಟ್ – ಇಂದು 400 ಲಕ್ಷ ಕೋಟಿಯ ಮೌಲ್ಯ!












