
ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ಏಕಾಏಕಿ ದಾಳಿ ನಡೆಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಗೌತಹಳ್ಳಿ ಗ್ರಾಮದಲ್ಲಿ ನಡೆದಿದೆ.
ಇದನ್ನೂ ಓದಿ: ರೈತರಿಗೆ ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ; ಬೆಂಬಲ ಬೆಲೆ ಯೋಜನೆಯಡಿಯಲ್ಲಿ ವಿವಿಧ ಬೆಳೆಗಳ ಖರೀದಿ ಅವಧಿ ವಿಸ್ತರಣೆ

ದಾಳಿಗೆ ಒಳಗಾದ ಇಬ್ಬರೂ ಮಹಿಳೆಯರು ಅಸ್ಸಾಂ ಮೂಲದ ಕಾರ್ಮಿಕರಾಗಿದ್ದು, ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಚಿರತೆ ದಾಳಿ ಮಾಡಿದೆ. ದಾಳಿಯಿಂದ ಇಬ್ಬರು ಮಹಿಳೆಯರಿಗೆ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಮೂಡಿಗೆರೆ ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಯ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿರತೆ ದಾಳಿಯಿಂದ ಗ್ರಾಮಸ್ಥರಲ್ಲಿ ಭೀತಿ ಉಂಟಾಗಿದ್ದು, ಚಿರತೆಯನ್ನು ಕೂಡಲೇ ಸೆರೆ ಹಿಡಿಯುವಂತೆ ಸ್ಥಳೀಯರು ಅರಣ್ಯ ಇಲಾಖೆಯನ್ನು ಆಗ್ರಹಿಸಿದ್ದಾರೆ.













