ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಾಳೂರು ಸಮೀಪದ ಕಾಫಿ ತೋಟದಲ್ಲಿ ಬೇಟೆಗಾರರು ಹಾಕಿದ ಉರುಳಿಗೆ ಸಿಲುಕಿ ಚಿರತೆಯೊಂದು ಮೃತಪಟ್ಟ ಘಟನೆ ನಡೆದಿದೆ. ಕಾಡುಹಂದಿ ಬೇಟೆಗೆ ಹಾಕಿದ ಉರುಳಿಗೆ ಗುರುವಾರ ರಾತ್ರಿಯೇ ಚಿರತೆ ಸಿಲುಕಿದೆ. ಆದರೆ, ಈ ಬಗ್ಗೆ ಸ್ಥಳೀಯರು ಶುಕ್ರವಾರ ಬೆಳಿಗ್ಗೆ ಗಮನಿಸಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದರು.
ಇದನ್ನೂ ಓದಿ: ಬೋರ್ವೆಲ್ ಕೊರೆಸಲು ಅರ್ಜಿ ಆಹ್ವಾನ!; ಶೇ.90 ರಂತೆ ಸಹಾಯಧನ

ರಕ್ಷಣಾ ಪ್ರಯತ್ನ ವಿಫಲ:
ಅರಣ್ಯ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಧಾವಿಸಿ ಚಿರತೆಯನ್ನು ರಕ್ಷಿಸಲು ಮುಂದಾದರು. ಇದಕ್ಕಾಗಿ ಶಿವಮೊಗ್ಗದಿಂದ ಅರಿವಳಿಕೆ ತಜ್ಞರನ್ನು ಕರೆಸಲು ಯತ್ನಿಸಿದರು. ಆದರೆ, ಉರುಳಿನಿಂದ ಹೊರಬರಲು ಚಿರತೆ ಮಾಡಿದ ಪ್ರಯತ್ನ ವಿಫಲವಾಗಿದ್ದು, ಉಸಿರಾಟ ನಿಲ್ಲಿಸಿ ಮೃತಪಟ್ಟಿದೆ.
ಇದನ್ನೂ ಓದಿ: ಅಕ್ರಮ ಪಂಪ್ ಸೆಟ್ ಹೊಂದಿರುವವರಿಗೆ ಇಂಧನ ಸಚಿವ ಕೊಟ್ರು ಸಿಹಿಸುದ್ದಿ; ಮಿಸ್ ಮಾಡ್ದೆ ಈ ಸುದ್ದಿ ಓದಿ
ಮಾಲೀಕರ ವಿರುದ್ಧ ಕಾನೂನು ಕ್ರಮ:
“ಕಾಡುಹಂದಿ ಬೇಟೆಗೆ ಉರುಳು ಹಾಕಿದ ಕಾರಣ ಚಿರತೆ ಸಿಲುಕಿದೆ ಎಂದು ಪ್ರಾಥಮಿಕ ಮಾಹಿತಿಯಾಗಿದೆ. ಈ ಘಟನೆ ಸಂಬಂಧ ಕಾಫಿ ತೋಟದ ಮಾಲೀಕರ ವಿರುದ್ಧ ಎಫ್ಐಆರ್ ದಾಖಲಿಸಲಾಗುತ್ತದೆ. ಚಿರತೆಯ ಮರಣೋತ್ತರ ಪರೀಕ್ಷೆ ಬಳಿಕ ಮುಂದಿನ ತನಿಖೆ ಕೈಗೊಳ್ಳಲಾಗುತ್ತದೆ” ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ. (ವರದಿ- ತನು ಕೊಟ್ಟಿಗೆಹಾರ)
ಇದನ್ನೂ ಓದಿ: ಕಾಫಿ ಬೀಜ ಇದೀಗ ಚಿನ್ನಕ್ಕೆ ಸಮ; ಒಂದು ಕಪ್ ಕಾಫಿ ಇನ್ನು ಬಲು ದುಬಾರಿ!












