ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಶಿವಮೊಗ್ಗ ಸೆಂಟ್ರಲ್ ಜೈಲಿನ ಕೈದಿಯೊಬ್ಬ ಅನಾರೋಗ್ಯದ ಹಿನ್ನೆಲೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದ ಘಟನೆ ನಡೆದಿದೆ. ಚಿಕ್ಕಮಗಳೂರು ಮೂಲದ ಬಾಬು.ಕೆ.ಪಿ ಅಲಿಯಾಸ್ ಸಜಿ ಬಾಬು ಮೃತ ಕೈದಿ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ: ಬ್ಯಾಂಕ್ ಆಫ್ ಬರೋಡದಲ್ಲಿ ಜಾಬ್ ಆಫರ್; ಆಕರ್ಷಕ ಸಂಬಳ

ಮಧುಮೇಹ ಮತ್ತು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಬಾಬುನನ್ನು ನ.10ರಂದು ಬೆಳಗ್ಗೆ 5 ಗಂಟೆಗೆ ಮೆಗ್ಗಾನ್ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಬುಧವಾರ ಬೆಳಗ್ಗೆ 5.40ರ ಹೊತ್ತಿಗೆ ಕೊನೆಯುಸಿರೆಳೆದಿದ್ದಾನೆ ಎಂದು ತಿಳಿದು ಬಂದಿದೆ.
ಪ್ರಕರಣವೊಂದರ ಸಂಬಂಧ ಚಿಕ್ಕಮಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಬಾಬುಗೆ ಜೀವಾವಧಿ ಶಿಕ್ಷೆ ಪ್ರಕಟಿಸಿತ್ತು. ಕಳೆದ ಆಗಸ್ಟ್ 22ರಂದು ಬಾಬುನನ್ನು ಚಿಕ್ಕಮಗಳೂರು ಜಿಲ್ಲಾ ಕಾರಾಗೃಹದಿಂದ ಶಿವಮೊಗ್ಗದ ಕೇಂದ್ರ ಕಾರಾಗೃಹಕ್ಕೆ ವರ್ಗಾವಣೆ ಮಾಡಲಾಗಿತ್ತು.
ಇದನ್ನೂ ಓದಿ: ಅತಿವೃಷ್ಟಿಯಿಂದ ಬೆಳೆ ಕಳೆದುಕೊಂಡವರ ಖಾತೆಗೆ ಹಣ ವರ್ಗಾವಣೆ












