ಜಯಪುರ: (ನ್ಯೂಸ್ ಮಲ್ನಾಡ್ ವರದಿ) ಜೆ.ಕೆ. ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್, ಕಟ್ಟೆಮನೆ ಇವರ ಆಶ್ರಯದಲ್ಲಿ ತೃತೀಯ ವರ್ಷದ ಹೊನಲು ಬೆಳಕಿನ ಲೀಗ್ ಮಾದರಿಯ ವಾಲಿಬಾಲ್ ಪಂದ್ಯಾವಳಿ ನಾಳೆ (ಏಪ್ರಿಲ್ 25, 2026) ನಡೆಯಲಿದೆ.
ಕಟ್ಟೆಮನೆಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಆಯೋಜಿಸಲಾಗಿರುವ ಈ ಕ್ರೀಡಾಕೂಟ ಸಂಜೆ 6:30 ಗಂಟೆಗೆ ಆರಂಭಗೊಳ್ಳಲಿದೆ. ಸ್ಥಳೀಯ ಕ್ರೀಡಾಭಿಮಾನಿಗಳಿಗಾಗಿ ಈ ಬಾರಿ ಲೀಗ್ ಮಾದರಿಯಲ್ಲಿ ನಡೆಸಲಾಗುತ್ತಿದೆ. ಗ್ರಾಮೀಣ ಮಟ್ಟದಲ್ಲಿ ಕ್ರೀಡಾ ಚಟುವಟಿಕೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಆಯೋಜಿಸಲಾಗುತ್ತಿರುವ ಈ ಸ್ಪರ್ಧೆಯಲ್ಲಿ ಅನೇಕ ತಂಡಗಳು ಭಾಗವಹಿಸಲಿದ್ದು, ರೋಚಕ ಪಂದ್ಯಗಳು ಕ್ರೀಡಾಭಿಮಾನಿಗಳಿಗೆ ಮನರಂಜನೆ ನೀಡಲಿವೆ.

ಈ ಪಂದ್ಯಾವಳಿಯ ನೇರ ಪ್ರಸಾರ ನಿಮ್ಮ ನೆಚ್ಚಿನ ನ್ಯೂಸ್ ಮಲ್ನಾಡ್ ಚಾನೆಲ್ ನಲ್ಲಿ ಇರಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕ್ರೀಡಾಕೂಟವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದ್ದಾರೆ.












