ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಮದ್ಯ ಮಾರಾಟ ನಿಷೇಧ

ಚಿಕ್ಕಮಗಳೂರು; (ನ್ಯೂಸ್ ಮಲ್ನಾಡ್ ವರದಿ) ಗಣಪತಿ ಮೂರ್ತಿ ವಿಸರ್ಜನೆ ಹಾಗೂ ಈದ್-ಮಿಲಾದ್ ಹಬ್ಬದ ಆಚರಣೆಯ ಹಿನ್ನಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಎಲ್ಲಾ ರೀತಿಯ ಮದ್ಯ ಮಾರಾಟ ನಿಷೇಧಿಸಿ ಮಾನ್ಯ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

 

ಇದನ್ನೂ ಓದಿ; ಕೋಳಿ ಸಾಕಿದ ರೈತನಿಗೆ 1.3 ಲಕ್ಷ ರೂ ತೆರಿಗೆ; ಗ್ರಾಪಂ ನಿರ್ಧಾರಕ್ಕೆ ಹೈಕೋರ್ಟ್ ಹೇಳಿದ್ದೇನು?

ಎಲ್ಲೆಲ್ಲಿ ಮಧ್ಯ ಮಾರಾಟ ನಿಷೇಧ:
* ತರೀಕೆರೆ ನಗರ ವ್ಯಾಪ್ತಿಯಲ್ಲಿ – ದಿನಾಂಕ: 25.09.2023 ರಂದು ಬೆಳಿಗ್ಗೆ 06.00 ಗಂಟೆಯಿಂದ, ದಿನಾಂಕ: 26.09.2023 ರ ಬೆಳಿಗ್ಗೆ 6.00 ಗಂಟೆಯವರೆಗೆ ಎಲ್ಲಾ ರೀತಿಯ ಮದ್ಯ ಮಾರಾಟ ನಿಷೇಧಿಸಿದೆ.

 

ಇದನ್ನೂ ಓದಿ;  ಅಡಿಕೆ ರೇಟ್ ಏರಿಕೆಯಾಗಿದೆಯಾ? ಅಥವಾ ಇಳಿಕೆನಾ? ಇಂದಿನ ಅಡಿಕೆ ಧಾರಣೆ ಮಾಹಿತಿ | 24-09-2023

* ಚಿಕ್ಕಮಗಳೂರು ನಗರ ವ್ಯಾಪ್ತಿಯಲ್ಲಿ (ಕೆ.ಎಸ್.ಬಿ.ಸಿ.ಎಲ್ ಹೊರತುಪಡಿಸಿ) – ದಿನಾಂಕ: 27.09.2023 ರಂದು ಬೆಳಿಗ್ಗೆ 06.00 ಗಂಟೆಯಿಂದ ದಿನಾಂಕ: 28.09.2023 ರ ಬೆಳಿಗ್ಗೆ 6.00 ಗಂಟೆಯವರೆಗೆ ಎಲ್ಲಾ ರೀತಿಯ ಮದ್ಯ ಮಾರಾಟ ನಿಷೇಧಿಸಿದೆ.

 

* ಚಿಕ್ಕಮಗಳೂರು ನಗರ ಸಭಾ ವ್ಯಾಪ್ತಿಯಲ್ಲಿ ತರೀಕೆರೆ ಹಾಗೂ ಕಡೂರು ಪುರಸಭಾ ವ್ಯಾಪ್ತಿಯಲ್ಲಿ (ಈದ್-ಮಿಲಾದ್) (ಕೆ.ಎಸ್.ಬಿ.ಸಿ.ಎಲ್ ಹೊರತುಪಡಿಸಿ) – ದಿನಾಂಕ: 28.09.2023 ರಂದು ಬೆಳಿಗ್ಗೆ 6.00 ಗಂಟೆಯಿಂದ ದಿನಾಂಕ: 29.09.2023 ರ ಬೆಳಿಗ್ಗೆ 06.00 ಗಂಟೆಯವರೆಗೆ ಎಲ್ಲಾ ರೀತಿಯ ಮದ್ಯ ಮಾರಾಟ ನಿಷೇಧಿಸಿದೆ.

* ಚಿಕ್ಕಮಗಳೂರು ನಗರ ವ್ಯಾಪ್ತಿಯಲ್ಲಿ (ಕೆ.ಎಸ್.ಬಿ.ಸಿ.ಎಲ್ ಹೊರತುಪಡಿಸಿ) – ದಿನಾಂಕ: 30.09.2023 ರಂದು ಬೆಳಿಗ್ಗೆ 6.00 ಗಂಟೆಯಿಂದ ದಿನಾಂಕ: 01.10.2023 ರ ಬೆಳಿಗ್ಗೆ 6.00 ಗಂಟೆಯವರೆಗೆ ಎಲ್ಲಾ ರೀತಿಯ ಮದ್ಯ ಮಾರಾಟ ನಿಷೇಧಿಸಿದೆ.

* ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ – ದಿನಾಂಕ: 01.10.2023 ರಂದು ಬೆಳಿಗ್ಗೆ 6.00 ಗಂಟೆಯಿಂದ ದಿನಾಂಕ: 02.10.2023 ರ ಬೆಳಿಗ್ಗೆ 6.00 ಗಂಟೆಯವರೆಗೆ ಎಲ್ಲಾ ರೀತಿಯ ಮದ್ಯ ಮಾರಾಟ ನಿಷೇಧಿಸಿದೆ.

 

ಅಪರಿಚಿತ ವಾಹನಕ್ಕೆ ಡಿಕ್ಕಿಯಾಗಿ ಹಸು ಸಾವು | ವಾರಗಳೇ ಕಳೆದುಹೊದರೂ ತೆರವುಗೊಳಿಸದೆ ನಿದ್ದೆಯಲ್ಲಿರುವ ಗ್ರಾ. ಪಂ ಅಧಿಕಾರಿಗಳು

ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಅಪರಿಚಿತ ವಾಹನ ಡಿಕ್ಕಿಯಾಗಿ ಹಸುವೊಂದು ಮೃತ ಪಟ್ಟಿದ್ದು, 2 ರಿಂದ 3 ವಾರಗಳು ಕಳೆದರು ಗ್ರಾಮ ಪಂಚಾಯಿತಿ ಅಧಿಕಾರಿಗಳು ಮಾತ್ರ ತೆರವುಗೊಳಿಸಿಲ್ಲ.

ಶೃಂಗೇರಿಯಿಂದ ಮಂಗಳೂರು ರಸ್ತೆಯ ನೆಮ್ಮಾರು ಸಮೀಪ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ಹಸು ಮೃತಪಟ್ಟು ನಾಯಿಗಳು ತಿನ್ನತ್ತಾ ಇದೆ. ಹಸು ಮೃತಪಟ್ಟು ವಾರಗಳು ಕಳೆದ ಕಾರಣ ಗಬ್ಬೆದ್ದು ನಾರುತ್ತಿದ್ದು ಅಕ್ಕಪಕ್ಕದ ನಿವಾಸಿಗಳಿಗೂ ಇದರಿಂದ ತೊಂದರೆಯಾಗುತ್ತಿದೆ. ಇನ್ನು ಘಟನೆ ನಡೆದು ಎರಡು ವಾರ ಸಮೀಪಿಸುತ್ತಿದ್ದರು ಗ್ರಾ. ಪಂಚಾಯಿತಿ ಅಧಿಕಾರಿಗಳು ಮಾತ್ರ ನಿದ್ರೆಯಲ್ಲಿದ್ದಂತಿದೆ. ಈ ಬಗ್ಗೆ ಅಧಿಕಾರಿಗಳು ಗಮನಹರಿಸಬೇಕಾಗಿದೆ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

 

ರಸ್ತೆಗಳಲ್ಲಿ ಜಾನುವಾರುಗಳ ಹಾವಳಿ:
ರಾಷ್ಟ್ರೀಯ ಹೆದ್ದಾರಿ ರಸ್ತೆಗಳಲ್ಲಿ ಜಾನುವಾರುಗಳ ಹಾವಳಿ ಮಿತಿಮೀರಿದ್ದು, ಎಲ್ಲೆಂದರಲ್ಲಿ ಗುಂಪುಗುಂಪಾಗಿ ಕಂಡುಬರುತ್ತಿವೆ. ಇದರಿಂದ ವಾಹನ ಸವಾರರು ಪರದಾಡುವಂತಾಗಿದೆ. ಅದರಲ್ಲೂ ದ್ವಿಚಕ್ರವಾಹನ ಸವಾರರ ಗೋಳು ಹೇಳತೀರದಾಗಿದೆ. ತಾಲೂಕು ಕೇಂದ್ರವಾದ ಪಟ್ಟಣಕ್ಕೆ ವ್ಯಾಪಾರ- ವಹಿವಾಟಿಗಾಗಿ ನಿತ್ಯ ನೂರಾರು ಜನರು ಬರುತ್ತಾರೆ. ರಾಜ್ಯ ಹೆದ್ದಾರಿಯೂ ಪಟ್ಟಣದಲ್ಲಿ ಹಾದು ಹೋಗಿರುವುದರಿಂದ ಸಾವಿರಾರು ವಾಹನಗಳು ಸಂಚರಿಸುತ್ತವೆ. ದನಗಳು ರಾತ್ರಿ ಹಗಲೆನ್ನದೆ ರಸ್ತೆಯ ಮೇಲೆ ಮಲಗಿರುವುದರಿಂದ ಅಪಘಾತಗಳು ಸಂಭವಿಸಿ ಹಲವಾರು ಸವಾರರು ಗಾಯಗೊಂಡಿದ್ದಾರೆ.

ಪ್ರಾಣ ಕಳೆದುಕೊಳ್ತಿರೊ ಜಾನುವಾರುಗಳು:
ಕೇವಲ ಬೈಕ್ ಸವಾರರು, ವಾಹನ ಸವಾರರು ಮಾತ್ರ ಗಾಯಗೊಂಡು ಆಸ್ಪತ್ರೆ ಪಾಲಾಗುತ್ತಿಲ್ಲ. ಜಾನುವಾರುಗಳು ಸಹ ಬೈಕ್ ಡಿಕ್ಕಿ, ಬಸ್, ಲಾರಿ, ಆಟೋ ಡಿಕ್ಕಿಗೆ ಪ್ರಾಣವನ್ನೆ ಕಳೆದುಕೊಳ್ಳುತ್ತೀವೆ. ರಸ್ತೆಗಳ ಮೇಲೆಯೆ ದನಗಳು ಕಾಲುಚಾಚಿ ಮಲಗುವುದರಿಂದ ಗಮನಿಸದ ಲಾರಿ ಚಾಲಕರು, ಬಸ್ ಚಾಲಕರು ದನ-ಕರುಗಳ ಕಾಲಿನ ಮೇಲೆ ವಾಹನ ಹರಿಸಿಕೊಂಡು ಹೋಗುತ್ತಿದ್ದಾರೆ. ಇದರಿಂದ ಗಂಭೀರವಾಗಿ ಗಾಯಗೊಂಡ ಜಾನುವಾರುಗಳು ನಡೆಯಲಾಗದೆ ನರಕಯಾತನೆ ಅನುಭವಿಸುತ್ತಿವೆ.

ದನಗಳ ಮಾಲೀಕರ ನಿರ್ಲಕ್ಷ್ಯ:
ಕೆಲವರು ದನಗಳ ಸಾಕಿ ಅವುಗಳನ್ನ ಸರಿಯಾಗಿ ನೋಡಿಕೊಳ್ಳದೆ ರಸ್ತೆಗಳಿಗೆ ಬಿಡುತ್ತಿದ್ದಾರೆ. ಅವುಗಳಿಗೆ ಮೇವು, ನೀರಿನ ವ್ಯವಸ್ಥೆ ಮಾಡದೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ರಸ್ತೆ ಬದಿಗೆ ಪ್ಲಾಸ್ಟಿಕ್, ತ್ಯಾಜ್ಯಗಳನ್ನ ತಿಂದು ದನಗಳು ಬದುಕುತ್ತಿವೆ. ಹೀಗೆ ರಸ್ತೆಗೆ ದನಗಳನ್ನ ಬಿಟ್ಟು ನಿರ್ಲಕ್ಷ್ಯ ಮೆರೆಯುತ್ತಿರುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕಾಗಿದೆ. ರಸ್ತೆಗಳಲ್ಲಿ ಮನಬಂದತೆ ಅಡ್ಡಾಡೋ ಜಾನುವಾರುಗಳನ್ನ ಗೋಶಾಲೆಗಳಿಗೆ ಕಳುಹಿಸೋ ಕೆಲಸವನ್ನ ಸಂಬಂಧ ಪಟ್ಟ ಅಧಿಕಾರಿಗಳು ಮಾಡಬೇಕಿದೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.