
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರಗಳ ಚುನಾವಣೆ ಮತದಾನ ಪ್ರಕ್ರಿಯೆ ಜೂನ್ 3 ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಎಲ್ಲಾ ರೀತಿಯ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ: ರೈತರ ಗಮನಕ್ಕೆ; ಈ ಕೆಲಸ ಮಾಡದಿದ್ದರೆ ಖಾತೆಗೆ ಬರಲ್ಲ ಪಿಎಂ ಕಿಸಾನ್ ಯೋಜನೆಯ ಹಣ; ತಕ್ಷಣವೇ ಈ ರೀತಿ ಮಾಡಿ

ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜೂನ್ 1 ಶನಿವಾರ ಸಂಜೆ 5 ಗಂಟೆಯಿಂದ ಜೂನ್ 3 ಸೋಮವಾರ ಸಂಜೆ 5 ಗಂಟೆಯವರೆಗೆ ಜಿಲ್ಲೆಯಾದ್ಯಂತ ಎಲ್ಲಾ ರೀತಿಯ ಮಧ್ಯ ಮಾರಾಟ, ಸಾಗಾಣೆ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮೀನಾ ನಾಗರಾಜ್ ಆದೇಶಿಸಿದ್ದಾರೆ.

ಇದನ್ನೂ ಓದಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದವರಿಗೆ ಮುಖ್ಯ ಮಾಹಿತಿ; ಗ್ರಾಮ ಆಡಳಿತ ಅಧಿಕಾರಿ ಸೇರಿ 5 ಇಲಾಖೆಗಳ ಹುದ್ದೆಗೆ ಪರೀಕ್ಷೆ ಪ್ರಕಟ
ಬೈಕ್-ಕ್ಯಾಂಟರ್ ಮಧ್ಯೆ ಮುಖಾಮುಖಿ ಡಿಕ್ಕಿ: ಓರ್ವ ಸಾವು, ಹಿಂಬದಿ ಇದ್ದ ಯುವತಿ ನಾಲಿಗೆ ಕಟ್
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಬೈಕ್ ಹಾಗೂ ಕ್ಯಾಂಟರ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಮೂಗ್ತಿಹಳ್ಳಿ ಬಳಿ ನಡೆದಿದೆ. ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಿಂಬದಿ ಇದ್ದ ಯುವತಿ ನಾಲಿಗೆ ಕಟ್ ಆಗಿದೆ. ಶಿವರಾಜ್ (26) ಸ್ಥಳದಲ್ಲೇ ಮೃತಪಟ್ಟ ದುರ್ದೈವಿ ಹಾಗೂ ಲಾವಣ್ಯ (20) ನಾಲಿಗೆ ಕಳೆದುಕೊಂಡ ಯುವತಿ.
ಶಿವರಾಜ್ ಹಾಗೂ ಲಾವಣ್ಯ ಅರಸೀಕೆರೆ ತಾಲೂಕಿನ ಬಂದೂರು ಮೂಲದವರಾಗಿದ್ದು, ನಾಲಿಗೆ ಕಳೆದುಕೊಂಡ ಯುವತಿ ಲಾವಣ್ಯ ಚಿಕ್ಕಮಗಳೂರಿನಲ್ಲಿ ಪ್ಯಾರಾ ಮೆಡಿಕಲ್ ಓದುತ್ತಿದ್ದಳು.
ಘಟನೆ ಕುರಿತು ಚಿಕ್ಕಮಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.













