ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ರಾಜ್ಯದಲೇ ಮೊದಲ ಪೊಲೀಸ್ ಠಾಣೆಯಲ್ಲಿ ಲೋಕಸ್ಪಂದನಕ್ಕೆ ಚಾಲನೆ ದೊರಕಿದೆ. ಏನಿದು ಲೋಕಸ್ಪಂದನ, ಇದು ಹೇಗೆ ಕಾರ್ಯನಿರ್ವಹಿಸಲಿದೆ? ಈ ಕುರಿತು ಶಾಸಕರು, ಅಧಿಕಾರಿಗಳ ಪ್ರತಿಕ್ರಿಯೇ ಹೇಗೆ ಎಂಬುದು ತಿಳಿಯೋಣ.
ಇದನ್ನೂ ಓದಿ; ರೈತರಿಗೆ ಗುಡ್ ನ್ಯೂಸ್; ಇನ್ನೂ ಮುಂದೆ ನಿಮ್ಮ ಮನೆ ಬಾಗಿಲಿಗೆ ಬರಲಿದೆ ಪಶು ವೈದ್ಯರ ಸೇವೆ

ಪ್ರತಿ ದೂರುದಾರರು ಲೋಕ ಸ್ಪಂದನ ಅಡಿಯಲ್ಲಿಯೇ ದೂರು ನೀಡಬಹುದು. ದೂರು ನೀಡಿದ ನಂತರ 6 ಮಾಹಿತಿಗಳನ್ನು ನೀಡಲಿರುವ ದೂರುದಾರರು ನಂತರ ಹಣ, ಸ್ಪಂದನೆ, ಪೊಲೀಸರ ಕಾರ್ಯವೈಖರಿ ಬಗ್ಗೆ ಜಿಲ್ಲಾ ಪೊಲೀಸ್ ಕಚೇರಿಗೆ ಮಾಹಿತಿ ರವಾನೆ ಆಗಲಿದೆ. ಆ ಮಾಹಿತಿ ಆಧರಿಸಿ ಅತೀ ಹೆಚ್ಚು ದೂರು ಬಂದರೇ ಕ್ರಮಕ್ಕೆ ಹಿರಿಯ ಅಧಿಕಾರಿಗಳು ಮುಂದಾಗಲಿದ್ದಾರೆ. ಇನ್ನು ಈ ಕಾರ್ಯಕ್ರಮಕ್ಕೆ ಉಸ್ತುವಾರಿ ಸಚಿವರು ಚಾಲನೆ ನೀಡಿದ್ದಾರೆ.
ಇದನ್ನೂ ಓದಿ; ಇಂದಿನ ಅಡಿಕೆ ಧಾರಣೆ: ಯಾವ ಜಿಲ್ಲೆಯ ಮಾರುಕಟ್ಟೆಯಲ್ಲಿ ಎಷ್ಟು ದರವಿದೆ? ಈ ಮಾಹಿತಿ ನಿಮಗಾಗಿ- 26.09.2023
ಸಮಸ್ಯೆಗಳಿಗೆ ಶೀಘ್ರವಾಗಿ ಸ್ಪಂದಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ:
ಅಧಿಕಾರಿಗಳು, ರಾಜಕಾರಣಿಗಳು ನಾವೆಲ್ಲರೂ ಜನಸೇವಕರು, ಜನರ ಸೇವೆ ಮಾಡಲು ಬಂದವರು. ಅಧಿಕಾರಿಗಳು ಅದನ್ನು ಅರ್ಥ ಮಾಡಿಕೊಂಡು ಸಾರ್ವಜನಿಕರ ಕೆಲಸಗಳನ್ನು ಶೀಘ್ರವಾಗಿ ಮಾಡಿಕೊಡಬೇಕು. ಅವರ ಅರ್ಜಿಗಳನ್ನು ಹೆಚ್ಚು ದಿನ ಇಟ್ಟುಕೊಂಡು ಸತಾಯಿಸಬಾರದು. ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯ ಹಾಗೂ ನಾಗರೀಕರ ಸಮಸ್ಯೆಗಳಿಗೆ ಅಧಿಕಾರಿಗಳು ಶೀಘ್ರ ಸ್ಪಂದಿಸಿ ಸಮಸ್ಯೆಗಳ ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವಂತೆ ಇಂಧನ ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಅಧಿಕಾರಿಗಳಿಗೆ ಸೂಚಿಸಿದರು.
ಗೃಹಜೋತಿ, ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಜಿಲ್ಲಾಧಿಕಾರಿ ಏನಂದ್ರು?:
ಜಿಲ್ಲಾಧಿಕಾರಿ ಮೀನಾ ನಾಗರಾಜ್ ಮಾತನಾಡಿ, ಗೃಹಜೋತಿ ಯೋಜನೆಯಡಿ 2,52,469 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಗೃಹಲಕ್ಷ್ಮಿಯಲ್ಲಿ 2,37,464 ಅರ್ಜಿ ಶಕ್ತಿ ಯೋಜನೆಯಡಿ 1,12,87,614 ಅರ್ಜಿಗಳನ್ನು ಸ್ವೀಕರಿಸಲಾಗಿದೆ ಎಂದು ತಿಳಿಸಿದರು. ಇನ್ನು ಅನ್ನಭಾಗ್ಯ ಯೋಜನೆಯಲ್ಲಿ 2,35,500 ಫಲಾನುಭವಿಗಳಿಗೆ ನೇರವಾಗಿ ವಿತರಣೆ ಮಾಡಿದ್ದೇವೆ ಎಂದು ಹೇಳಿದರು. ಕಂದಾಯ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ನಿರ್ದೇಶನದಂತೆ ಕಂದಾಯ ಇಲಾಖೆ ಈಗಾಗಲೇ ಕಾರ್ಯನಿರ್ವಹಿಸುತ್ತಿದೆ ಎಂದರು.
15 ದಿನಗಳಿಗೊಮ್ಮೆ ತಾಲೂಕುಗಳಿಗೆ ಭೇಟಿ:
ರಾಜ್ಯ ಸರ್ಕಾರದ ನಿರ್ದೇಶನದಂತೆ ಪ್ರತಿ 15 ದಿನಗಳಿಗೊಮ್ಮೆ ತಾಲೂಕುಗಳಿಗೆ ಭೇಟಿ ನೀಡಲಾಗುವುದು. ಜಿಲ್ಲಾ ಪಂಚಾಯತಿ ಜನರ ಕಲ್ಯಾಣಕ್ಕಾಗಿ ಕಾರ್ಯಕ್ರಮಗಳನ್ನು ರೂಪಿಸಿದೆ ಪೊಲೀಸ್ ಇಲಾಖೆ ಸಹ ಅನೇಕ ಜನಸ್ನೇಹಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಅರ್ಜಿಗಳನ್ನು ತಿರಸ್ಕೃತಗೊಳಿಸಬೇಕಾದರೆ ಅದಕ್ಕೆ ಕಾರಣವನ್ನು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಜನತಾದರ್ಶನದಲ್ಲಿ ಅರ್ಜಿ ಸಲ್ಲಿಸಿದವರಿಗೆ ಒಂದು ತಿಂಗಳಲ್ಲಿ ಅರ್ಜಿ ಯಾವ ರೀತಿ ವಿಲೇವಾರಿ ಮಾಡಲಾಗಿದೆ ಎಂದು ತಿಳಿಸಲಾಗುವುದು ಎಂದರು.
ಜನತಾ ದರ್ಶನದಲ್ಲಿ 320 ಅರ್ಜಿಗಳು:
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯ ಮಾತನಾಡಿ, ಫಾರಂ ೫೭ರಲ್ಲಿ ಸ್ವೀಕೃತವಾಗಿರುವ ಅರ್ಜಿ ವಿಲೇವಾರಿ ಮಾಡಲು ಜಂಟಿ ಸರ್ವೆ ನಡೆಸಿದ ನಂತರ ಕ್ರಮವಹಿಸಲಾಗುವುದು. ಜನತಾ ದರ್ಶನದಲ್ಲಿ 320 ಅರ್ಜಿಗಳು ಸ್ವೀಕೃತವಾಗಿದ್ದು, ಅರ್ಜಿಗಳ ಇತ್ಯರ್ಥಕ್ಕೆ ಸ್ಥಳದಲ್ಲಿಯೇ ಸಂಬಂಧಿಸಿದ ಅಧಿಕಾರಿಗಳಿಗೆ ತಕ್ಷಣ ಕ್ರಮವಹಿಸುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ಚಿಕ್ಕಮಗಳೂರು ಕ್ಷೇತ್ರದ ಶಾಸಕ ಹೆಚ್.ಡಿ. ತಮ್ಮಯ್ಯ, ಟಿ.ಡಿ. ರಾಜೇಗೌಡ, ಜಿ.ಹೆಚ್. ಶ್ರೀನಿವಾಸ್, ಕೆ.ಎಸ್. ಆನಂದ, ನಯನ ಮೋಟಮ್ಮ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಗೋಪಾಲಕೃಷ್ಣ ಸೇರಿದಂತೆ ಮತ್ತಿತರರು ಇದ್ದರು.
ಚಿಕ್ಕಮಗಳೂರು; ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷರಾದ ತೇಗೂರು ಜಗದೀಶ್ ನಿಧನ
ಚಿಕ್ಕಮಗಳೂರು; (ನ್ಯೂಸ್ ಮಲ್ನಾಡ್ ವರದಿ) ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷರಾದ ತೇಗೂರು ಜಗದೀಶ್ ಅವರು ನಿನ್ನೆ ತಡರಾತ್ರಿ ಸುಮಾರು 12:15ಕ್ಕೆ ನಿಧನ ಹೊಂದಿದ್ದರು.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಕನ್ನಡ ನಾಡು, ನುಡಿ, ನೆಲ-ಜಲ ಪರವಾದ ಹೋರಾಟ ಹಾಗೂ ಸಂಘಟನಾ ಕಾರ್ಯಗಳಲ್ಲಿ ಜಿಲ್ಲೆಯ ಉದ್ದಗಲಕ್ಕೂ ಪಾದರಸದಂತೆ ಓಡಾಡಿಕೊಂಡು ಜನ ಜಾಗೃತಿ ಮತ್ತು ಅರಿವು ಮೂಡಿಸುವಲ್ಲಿ ಶ್ರಮಿಸಿದವರ ಪೈಕಿ ಅಗ್ರಗಣ್ಯರಾದವರು ತೇಗೂರು ಜಗದೀಶ್. ಇವರ ಅಕಾಲಿಕ ಮರಣದಿಂದ ಜಿಲ್ಲೆಯ ಎಲ್ಲಾ ರಾಜಕೀಯ ಪಕ್ಷಗಳು, ಸಂಘಸಂಸ್ಥೆಗಳು, ಜನಸಾಮಾನ್ಯರು ಕಂಬನಿ ಮಿಡಿದಿದ್ದಾರೆ.
ಜಗದೀಶ್ ಅವರು ಕಳೆದ ಕೆಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಆರೋಗ್ಯವಾಗಿಯೇ ಇದ್ದ ಅವರು ಈಗ್ಗೆ ಕೆಲ ತಿಂಗಳ ಹಿಂದೆ ಇದ್ದಕ್ಕಿದಂತೆ ಅನಾರೋಗ್ಯಕ್ಕೀಡಾಗಿದ್ದರು. ಅವರು ಮೆದುಳು ಸಂಬಧಿ ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.
ಇನ್ನು ಇವರ ಅಂತ್ಯಕ್ರಿಯೆಯನ್ನು ಇಂದು (ಬುಧವಾರ) ಮಧ್ಯಾಹ್ನ 3 ಗಂಟೆಯ ವೇಳೆಗೆ ನಡೆಸಲಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಚಿಕ್ಕಮಗಳೂರು-ಶೃಂಗೇರಿ ಹೆದ್ದಾರಿಯಲ್ಲಿ ಕಾಡಾನೆ ಹಿಂಡು ಪ್ರತ್ಯಕ್ಷ
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು-ಶೃಂಗೇರಿ ರಾಜ್ಯ ಹೆದ್ದಾರಿಯಲ್ಲಿ 7 ಕ್ಕೂ ಅಧಿಕ ಕಾಡಾನೆಗಳು ಕಾಣಿಸಿಕೊಂಡಿದೆ.
ಚಿಕ್ಕಮಗಳೂರು ತಾಲೂಕಿನ ಅಲ್ದೂರು ಅರಣ್ಯ ವಲಯ ವ್ಯಾಪ್ತಿಯಲ್ಲಿರುವ ಬಸರಹಳ್ಳಿ ಗ್ರಾಮದ ಬಳಿ ಕಾಡಾನೆಗಳ ಹಿಂಡು ಕಂಡುಬಂದಿದ್ದು, ಸ್ಥಳೀಯರು, ವಾಹನ ಸವಾರರು ಆತಂಕಗೊಂಡಿದ್ದಾರೆ.
ಚಿಕ್ಕಮಗಳೂರುನಿಂದ ಶೃಂಗೇರಿ ತೆರಳುವ ವಾಹನ ಸವಾರರು ಎಚ್ಚರಿಕೆಯಿಂದ ಇರುವಂತೆ ಅರಣ್ಯ ಇಲಾಖೆ ಸೂಚನೆ ನೀಡಿದೆ.












